CHITRADURGA NEWS | 29 APRIL 2026
ಚಿತ್ರದುರ್ಗ: ಮೈಸೂರು ಸಿದ್ದಾರ್ಥನಗರ ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ ಕಾಲೇಜು (ಕಾವಾ) ಸಂಸ್ಥೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಬ್ಯಾಚುಲರ್ ಆಫ್ ವಿಜ್ಯುಯಲ್ ಆಟ್ರ್ಸ್ (ಬಿವಿಎ) ತರಗತಿಗಳ ಪ್ರವೇಶಾತಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೇ 30 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಕುಮಾರಸ್ವಾಮಿ ಹೇಳಿಕೆಗೆ ಡಿ.ಸುಧಾಕರ್ ಪುತ್ರ ಸುಹಾಸ್ ಬೇಸರ
ಮೈಸೂರು ವಿಶ್ವವಿದ್ಯಾನಿಲಯಕ್ಕೆ ಶಾಶ್ವತವಾಗಿ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುರಲ್ ಆಫ್ ವಿಜ್ಯುಯಲ್ ಆಟ್ರ್ಸ್ ( ನಾಲ್ಕು ವರ್ಷದ ಎಂಟು ಸೆಮಿಸ್ಟರ್‍ಗಳ ರಾಷ್ಟ್ರೀಯ ಶಿಕ್ಷಣ ಪದ್ದತಿ-ಸ್ಟೇಟ್ ಎಜುಕೇಷನ್ ಪಾಲಿಸಿ ಅನ್ವಯ ದೃಶ್ಯಕಲೆಯಲ್ಲಿ 2026-27ನೇ ಸಾಲಿಗೆ ಪ್ರಥಮ ವರ್ಷದ ಬಿವಿಎ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ ಹಾಗೂ ದ್ವಿತೀಯ ಪಿಯುಸಿಗೆ ಸಮಾನಾಂತರ ಕೋರ್ಸು ಮಾಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಈ ಪದವಿಯಲ್ಲಿ 3ನೇ ಸೆಮಿಸ್ಟರ್‍ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಚಿತ್ರ ಪತ್ರಿಕೋದ್ಯಮ ವಿಭಾಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲ ವಿಳಾಸ htts://uucms.karnataka.gov.in ಅಥವಾ https://www.cavamysore.karnataka.gov.in ಮೂಲಕವೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಸಂದರ್ಶನದ ದಿನಾಂಕ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು.
ಇದನ್ನೂ ಓದಿ: ಮೇ.3 ರಂದು ನೀಟ್ ಪರೀಕ್ಷೆ: ಬಿ.ಟಿ. ಕುಮಾರಸ್ವಾಮಿ ಸೂಚನೆ
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿಗೆ ಕಛೇರಿ ಸಮಯದಲ್ಲಿ 0821-2438931 ಯನ್ನು ಸಂಪರ್ಕಿಸಬಹುದು ಎಂದು ಮೈಸೂರಿನ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
