
CHITRADURGA NEWS | 06 December 2025
ಚಿತ್ರದುರ್ಗ: ಸೈಬರ್ ವಂಚನೆ ದೂರುಗಳಿಗೆ ಸಂಬಂಧಿಸಿದಂತೆ 198 ಸಂಖ್ಯೆಗೆ ಕರೆ ಮಾಡಿ ಸಹಾಯ ಪಡೆಯಬಹುದಾಗಿದೆ ಎಂದು ಟೆಲಿಕಾಂ ರೆಗ್ಯುಲೇಟರ್ ಅಥಾರಟಿ ಆಫ್ ಇಂಡಿಯಾ ಬೆಂಗಳೂರು ಪ್ರಾದೇಶಿಕ ಕಛೇರಿ ಮುಖ್ಯಸ್ಥರು, ಸಲಹೆಗಾರರಾದ ಬ್ರಜೇಂದ್ರ ಕುಮಾರ್ ಹೇಳಿದರು.
ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರ ಸಂಘ | ಕಾರ್ಯಕಾರಿ ಸಮಿತಿಯ ನಾಮನಿರ್ದೇಶಕ ಸ್ಥಾನಕ್ಕೆ ಡಿ.ಮಹೇಶ್ ಆಯ್ಕೆ

ನಗರದ ಎಸ್.ಜೆ.ಎಂ.ತಾಂತ್ರಿಕ ಮಹಾವಿದ್ಯಾಲಯದಲ್ಲಿ ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ ಹಾಗೂ ಸೈಬರ್ ಕ್ರೈಂ ಪೊಲೀಸ್ ಠಾಣೆ ಇವರ ಸಹಯೋಗದಲ್ಲಿ ಗ್ರಾಹಕರ ಸಂಪರ್ಕ ಕಾರ್ಯಕ್ರಮ ಭಾಗವಹಿಸಿ ಗ್ರಾಹಕರ ಹಕ್ಕುಗಳು ಮತ್ತು ಸವಲತ್ತುಗಳ ಕುರಿತು ಮಾತನಾಡಿ,
ಟೆಲಿಕಾಂ ಗ್ರಾಹಕರ ದೂರುಗಳ ಪರಿಹಾರಕ್ಕಾಗಿ ಬೆಳಗ್ಗೆ 8 ರಿಂದ ರಾತ್ರಿ 12ರವರೆಗೆ ಕಾರ್ಯ ನಿರ್ವಹಿಸುತ್ತಿರುತ್ತದೆ. ಆನ್‌ಲೈನ್ ವಂಚನೆ ದೂರುಗಳನ್ನು ಶೀಘ್ರದಲ್ಲಿ ಪರಿಹರಿಸಲು ಟೆಲಿಕಾಂ ಇಲಾಖೆಯು ಗೃಹ ಇಲಾಖೆಯೊಂದಿಗೆ ಸದಾ ಸಂಪರ್ಕದಲ್ಲಿರುತ್ತದೆ. ಆನ್‌ಲೈನ್ ವಂಚನೆ ಕುರಿತು ಗ್ರಾಹಕರಿಗೆ ಸಂದೇಶಗಳ ಮೂಲಕ ಎಚ್ಚರಿಸುವ ಕೆಲಸ ಇಲಾಖೆ ಮಾಡುತ್ತಿದೆ. ಟ್ರಾಯ್ ದೇಶದಾಂತ್ಯ 119 ಕೋಟಿ ಮೊಬೈಲ್ ಹಾಗೂ 2 ಕೋಟಿ ಲ್ಯಾಂಡ್ ಲೈನ್ ಫೋನುಗಳ ಬಗ್ಗೆ ಸೈಬರ್ ವಂಚನೆಗೆ ಒಳಗಾಗದಂತೆ ನಿಗಾವಹಿಸಿದೆ ಎಂದು ತಿಳಿಸಿದರು.
ಇದನ್ನೂ ಓದಿ: ವಿಚಾರ ಸಂಕಿರಣ | ಸಂವಿಧಾನ ಅರಿತರೆ ಬದುಕು ಅರ್ಥಪೂರ್ಣ | ವೇದಾಂತ್ ಏಳಂಗಿ
ಸೈಬರ್ ಕ್ರೈಂ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರಾದ ಕಾಂತರಾಜು ಸೈಬರ್ ಕ್ರೈಂ ಅಪರಾಧಗಳ ಬಗ್ಗೆ ಕುಲಂಕುಶವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ, ವಿದ್ಯಾರ್ಥಿಗಳು ಆನ್ ಲೈನ್ ವಂಚನೆಗಳ ಬಗ್ಗೆ ಎಚ್ಚರದಿಂದ ಇರಬೇಕು. ಆನ್‌ಲೈನ್‌ನಲ್ಲಿ ಉದ್ಯೋಗಾವಕಾಶ ಕುರಿತು ವಂಚಕರು ಆಸೆ ಹುಟ್ಟಿಸಿ ಹಣಕ್ಕೆ ಬೇಡಿಕೆಯಿಡುತ್ತಾರೆ. ಕೆಲ ಆಪ್ ಮೂಲಕ ವಿದ್ಯಾರ್ಥಿಗಳನ್ನು ಸೆಳೆಯಲು ಯತ್ನಿಸುತ್ತಾರೆ.
ಯುವ ಜನತೆ ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ. ಬಂಡವಾಳ ಹೂಡಿಕೆ ಇನ್ನಿತರ ಆಸೆ ಹುಟ್ಟಿಸಿ ಸಾರ್ವಜನಿಕರಿಗೆ ಮೋಸ ಮಾಡುತ್ತಾರೆ. ವಿದ್ಯಾರ್ಥಿಗಳು ಇಂತಹ ಜಾಲತಾಣಗಳು, ಆಪ್‌ಗಳ ಬಗ್ಗೆ ಜಾಗೃತರಾಗಿರಬೇಕು. ವಂಚಕರು ಹೆಚ್ಚಾಗಿ ಸಾಮಾಜಿಕ ಜಾಲತಾಣಗಳ ಮೂಲಕ ಆಕರ್ಷಿಸುತ್ತಾರೆ. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳನ್ನು ಬಳಸುವಾಗ ಎಚ್ಚರ ವಹಿಸಬೇಕು.
ವೈಯಕ್ತಿಕ ವಿಷಯಗಳನ್ನು ಸಹ ಹಂಚಿಕೊಳ್ಳಬಾರದು. ಯಾವುದೇ ಅನಾಮಧೇಯರಿಗೆ ಒಟಿಪಿ ಸಂಖ್ಯೆ ನೀಡುವುದು ಇತ್ಯಾದಿ ಮಾಡಬಾರದು. ವಿದ್ಯಾರ್ಥಿಗಳು ತಾವು ಜಾಗರೂಕರಾಗಿದ್ದು, ಸಾರ್ವಜನಿಕರಿಗೆ ಆನ್‌ಲೈನ್ ವಂಚನೆಗಳ ಕುರಿತು ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಕಾರ್ಯಕ್ರಮದಲ್ಲಿ ಮುರಳಿ ಶಿವಪ್ರಸಾದ್, ಡಾ.ಬಿ.ಜಿ.ಕುಮಾರಸ್ವಾಮಿ, ಡಾ.ಲೋಕೇಶ್ ಎಚ್.ಜೆ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
