
CHITRADURGA NEWS | 27 NOVEMBER 2025
ಚಿತ್ರದುರ್ಗ: ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಧನಸಹಾಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಡಿ.30 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಗಂಗಾ ಕಲ್ಯಾಣ ಯೋಜನೆ, ನೇರಸಾಲ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಕ್ರಿಯಾತ್ಮಕ ಸಾಂಸ್ಕøತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ, ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಧನಸಹಾಯ ನೀಡಲು ಹಾಗೂ ಕಲಾವಿದರಿಗೆ ವಾದ್ಯ ಪರಿಕರ ಮತ್ತು ವೇಷಭೂಷಣಗಳ ಖರೀದಿಗೆ ಸಹಾಯಧನ ಹಾಗೂ ಚಿತ್ರಕಲೆ, ಶಿಲ್ಪ ಕಲಾಕೃತಿಗಳ ಪ್ರದರ್ಶನಕ್ಕೆ ಸಹಾಯಧನ ನೀಡಲು ಉದ್ದೇಶಿಸಲಾಗಿದೆ. 2025-26ನೇ ಸಾಲಿನ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಸೇವಾಸಿಂಧು Sevasindhu.karnataka.gov.in ಮುಖಾಂತರ ಡಿ.01 ರಿಂದ 30 ರವೆರೆಗೆ ಕಾಲಾವಕಾಶ ನೀಡಿ ಅರ್ಜಿ ಆಹ್ವಾನಿಸಲಾಗಿದೆ.
ಮಾರ್ಗಸೂಚಿಯನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‍ಸೈಟ್ www.kannadasiri.karnataka.gov.in ನಲ್ಲಿ ಅಳವಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 08024410547/ 8792662814/ 8792662816/ 08022213530/ 9986837037/ 9900337738/ 9448436877/ 9480197511/ 9916600027/ 08022241325 ಅನ್ನು ಸಂಪರ್ಕಿಸಬಹುದಾಗಿದೆ.
ಇದನ್ನೂ ಓದಿ: ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತಯಾರಿಕೆ ಕುರಿತು ತರಬೇತಿ
ನಿಗಧಿತ ದಿನಾಂಕದ ನಂತರ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಹಾಗೂ ಅರ್ಜಿಗಳನ್ನು ನೇರವಾಗಿ ಇಲಾಖೆಯಲ್ಲಿ ಸ್ವೀಕರಿಸುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
