Connect with us

    Application; ವಿವಿಧ ಯೋಜನೆಗೆ ಅರ್ಜಿ ಅಹ್ವಾನ 

    ಮುಖ್ಯ ಸುದ್ದಿ

    Application; ವಿವಿಧ ಯೋಜನೆಗೆ ಅರ್ಜಿ ಅಹ್ವಾನ 

    CHITRADURGA NEWS | 23 SEPTEMBER 2024

    ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ನಿಗಮಗಳಾದ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ(Application) ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅ.10 ಕೊನೆಯ ದಿನವಾಗಿದೆ.

    ಕ್ಲಿಕ್ ಮಾಡಿ ಓದಿ: Hi-Tech Harvester Hub; ಕೃಷಿ ಇಲಾಖೆಯಿಂದ ಹೈಟೆಕ್ ಹಾರ್ವೆಸ್ಟರ್ ಹಬ್ ಸ್ಥಾಪನೆಗೆ ಅರ್ಜಿ ಅಹ್ವಾನ 

    ಪರಿಶಿಷ್ಟ ಜಾತಿ ಸಮುದಾಯಗಳ ಆರ್ಥಿಕ ಅಭಿವೃದ್ಧಿಗಾಗಿ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ-1, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ-2, ಉದ್ಯಮಶೀಲತಾ ಅಭಿವೃದ್ಧಿ ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.

    ಈ ಯೋಜನೆಯ ಕುರಿತು ಸವಿವರವಾಗಿ ಸಮಾಜ ಕಲ್ಯಾಣ ಇಲಾಖೆಯ ಸಾಲ ಸೇವೆಗಳ ಪೋರ್ಟಲ್ ವೆಬ್‌ಸೈಟ್ https://swdcorp.karnataka.gov.in ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು.

    2023-24ನೇ ಸಾಲಿನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆಸಕ್ತರು https://sevasindhu.karnataka.govt.in ತಂತ್ರಾAಶದ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

    ಕ್ಲಿಕ್ ಮಾಡಿ ಓದಿ: DCC ಬ್ಯಾಂಕ್ ಅಧ್ಯಕ್ಷರಾಗಿ ಡಿ.ಸುಧಾಕರ್ ಅವಿರೋಧ ಆಯ್ಕೆ

    ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ 200766 ಅಥವಾ ಆಯಾ ತಾಲ್ಲೂಕಿನ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top