
ಚಿತ್ರದುರ್ಗ ನ್ಯೂಸ್.ಕಾಂ: ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳು, ಸಂಬಂಧಿಗಳು ಯಾವುದೇ ಕಾರಣಕ್ಕೂ ಸಿಬ್ಬಂದಿ, ವೈದ್ಯರು ಹಾಗೂ ಮಧ್ಯವರ್ತಿಗಳಿಗೆ ಹಣ ನೀಡಬಾರದು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಮನವಿ ಮಾಡಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಆಸ್ಪತ್ರೆಗೆ ಬರುವ ಯಾವುದೇ ರೀತಿಯ ರೋಗಿಗಳು, ವೈದ್ಯಕೀಯ ಸಿಬ್ಬಂದಿಗೆ ಲಂಚ ಕೊಡಬಾರದು ಎಂದು ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ಯಾರಾದರೂ ಹಣ ಕೇಳಿದಲ್ಲಿ ಕೂಡಲೇ ಜಿಲ್ಲಾ ಶಸ್ತ್ರ ಚಿಕಿತ್ಸಕರ ಗಮನಕ್ಕೆ ತರಬೇಕು. ಯಾರಿಗೂ ಹಣ ಕೊಟ್ಟು ಪ್ರೋತ್ಸಾಹಿಸಬೇಡಿ ಎಂದು ಹೇಳಿದ್ದಾರೆ.
ಇದನ್ನೂ ಓದಿ: ರೈತರೇ ಗಮನಿಸಿ: ದಿನಪೂರ್ತಿ ವಿದ್ಯುತ್ ಸಮಸ್ಯೆ
ರೋಗಿಗಳು ಆಸ್ಪತ್ರೆಗೆ ಬರುವಾಗ ತಪ್ಪದೇ ಆಧಾರ್ ಕಾರ್ಡ್ ಮತ್ತು ರೇಷನ್ ತರಬೇಕು. ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ದಾಖಲಾದ ಎಲ್ಲಾ ರೋಗಿಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತದೆ.
ಆಸ್ಪತ್ರೆಯಲ್ಲಿ ದಾಖಲಾದಾಗ ರೋಗಿಯವರನ್ನು ನೋಡಲು ನಿಗದಿತ ಸಮಯದಲ್ಲಿ ಮಾತ್ರ ಸಾರ್ವಜನಿಕರು ಆಸ್ಪತ್ರೆ ಭೇಟಿ ಮಾಡಬೇಕು.
ಆಸ್ಪತ್ರೆಯ ಆವರಣವನ್ನು ಸ್ವಚ್ಛವಾಗಿರಿಸಲು ಸಹಕರಿಸಬೇಕು. ಜಿಲ್ಲಾ ಆಸ್ಪತ್ರೆಯ ಬಗ್ಗೆ ಯಾವುದೇ ದೂರುಗಳು ಇದ್ದಲ್ಲಿ ಮೊಬೈಲ್ ಸಂಖ್ಯೆ 9449843163 ಕೆರೆ ಮಾಡುವಂತೆ ಅವರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
