
CHITRADURGA NEWS | 24 OCTOBER 2025
ಚಿತ್ರದುರ್ಗ: ಮೂರು ತಿಂಗಳುಗಳ ಹಕ್ಕು ಪಡೆಯದ ಠೇವಣೆಗಳ ಇತ್ಯರ್ಥಪಡಿಸುವ ರಾಷ್ಟ್ರವ್ಯಾಪ್ತಿ ಅಭಿಯಾನಕ್ಕೆ (ಅಕ್ಟೋಬರ್-ಡಿಸೆಂಬರ್ 2025) ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಚಾಲನೆ ನೀಡಿದರು.
ಇದನ್ನೂ ಓದಿ: ಅಡಿಕೆ ಧಾರಣೆ | ಅಕ್ಟೋಬರ್ 24 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವತಿಯಿಂದ ಹಣಕಾಸು ಸೇವೆಗಳ ಇಲಾಖೆ, ಹಣಕಾಸು ಸಚಿವಾಲಯದ ಆದೇಶದಂತೆ ಮೂರು ತಿಂಗಳುಗಳ ಹಕ್ಕು ಪಡೆಯದ ಠೇವಣಿಗಳ ಇತ್ಯರ್ಥಪಡಿಸುವ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಮಾರ್ಗದರ್ಶಿ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕ ಎಂ.ರಾಘವೇಂದ್ರ, ಹಣಕಾಸು ಸಚಿವಾಲಯದ ಆಜ್ಞೆಯ ಮೇರೆಗೆ ಈ ಮೂರು ತಿಂಗಳುಗಳ ಕಾಲ ಜಿಲ್ಲೆಯಾದ್ಯಂತ ಎಲ್ಲಾ ಬ್ಯಾಂಕ್ ಶಾಖೆಗಳು ಹಾಗೂ SEBI, IRDAI, IEPF, RBI ನ ವತಿಯಿಂದ ನಡೆಸಲ್ಪಡುತ್ತಿರುವ ಅಭಿಯಾನದಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಹಕ್ಕು ಪಡೆಯದ ಠೇವಣಿಗಳನ್ನು ಇತ್ಯರ್ಥಪಡಿಸಲಾಗುತ್ತಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಎಲ್ಲಾ ಬ್ಯಾಂಕ್ ಶಾಖೆಗಳಿಂದ 308898 ಖಾತೆಗಳಿದ್ದು, ಸುಮಾರು ರೂ.66.97 ಕೋಟಿ ರೂಗಳು ಹಕ್ಕು ಪಡೆಯದ ಠೇವಣಿಗಳಿವೆ.
ಇದನ್ನೂ ಓದಿ: ನಗರಸಭೆ ಸದಸ್ಯರ ಪ್ರವಾಸ ವಿರೋಧಿಸಿ ಕರುನಾಡ ವಿಜಯಸೇನೆ ಪ್ರತಿಭಟನೆ
ಈ ಮೂರು ತಿಂಗಳುಗಳ ಅವಧಿಯಲ್ಲಿ ಗರಿಷ್ಟ ಪ್ರಮಾಣದ ಖಾತೆಗಳನ್ನು ಇತ್ಯರ್ಥಗೊಳಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಲ್ಲಾ ಬ್ಯಾಂಕರುಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಎಲ್ಲ ಪ್ರಮುಖ ಬ್ಯಾಂಕಿನ ಅಧಿಕಾರಿಗಳು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
