Connect with us

    Car: ಟಯರ್ ಬ್ಲಾಸ್ಟ್ | ಪಲ್ಟಿಯಾದ ಕಾರು | ಓರ್ವ ಸ್ಥಳದಲ್ಲೇ ಸಾವು

    car accident by tyre blast

    ಕ್ರೈಂ ಸುದ್ದಿ

    Car: ಟಯರ್ ಬ್ಲಾಸ್ಟ್ | ಪಲ್ಟಿಯಾದ ಕಾರು | ಓರ್ವ ಸ್ಥಳದಲ್ಲೇ ಸಾವು

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 05 DECEMBER 2024

    ಚಿತ್ರದುರ್ಗ: ಚಲಿಸುತ್ತಿದ್ದ ಕಾರಿನ ಟೈಯರ್ ಸ್ಪೋಟಗೊಂಡು ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ.

    ಚಳ್ಳಕೆರೆ ತಾಲೂಕಿನ ನಾಗಗೊಂಡನಹಳ್ಳಿ ಬಳಿ ಈ ಘಟನೆ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಇದನ್ನೂ ಓದಿ: ಬೆಳ್ಳಂ ಬೆಳಗ್ಗೆ ಸರಣಿ ಅಪಘಾತ | 4 ಎತ್ತುಗಳು, ಓರ್ವ ವ್ಯಕ್ತಿ ಸಾವು

    ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಮೊಳಕಾಲ್ಮೂರು ತಾಲೂಕು ಕೊಂಡ್ಲಹಳ್ಳಿಯ ಮಲ್ಲಿಕಾರ್ಜುನ(35) ಎಂದು ಗುರುತಿಸಲಾಗಿದೆ. ಜೊತೆಗೆ ಮಾರುತಿ ಎಂಬುವವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.

    ಗಾಯಾಳು ಮಾರುತಿ ಅವರನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?

    ಅಪಘಾತ ಸ್ಥಳಕ್ಕೆ ಪರಶುರಾಂಪುರ ಪೊಲೀಸ್ ಠಾಣೆ ಪಿಎಸ್‍ಐ ಬಸವರಾಜು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    More in ಕ್ರೈಂ ಸುದ್ದಿ

    To Top