CHITRADURGA NEWS | 03 AUGUST 2024
ಮೊಳಕಾಲ್ಮೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಬೆನ್ನಲ್ಲೇ ಹಿಂಬದಿಯಿ0ದ ವೇಗವಾಗಿ ಬರುತ್ತಿದ್ದ ಲಾರಿ ಕಾರಿಗೆ ಡಿಕ್ಕಿ ಹೊಡೆದು ವಿದ್ಯಾರ್ಥಿನಿ ಮೃತಪಟ್ಟಿರುವ ಭೀಕರ ಅಪಘಾತ ಮೊಳಕಾಲ್ಮೂರು ಬಳಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಯುವಕ ಗಂಭಿರವಾಗಿ ಗಾಯಗೊಂಡಿದ್ದಾನೆ.
ಇದನ್ನೂ ಓದಿ: ಜವನಗೊಂಡನಹಳ್ಳಿ ಪಿಡಿಓ ಸಿ.ಈಶ್ವರ್ ಅಮಾನತು | ಜಿಪಂ ಸಿಇಓ ಎಸ್.ಜೆ.ಸೋಮಶೇಖರ್ ಆದೇಶ
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ನಾಗಸಮುದ್ರ ಗೇಟ್ ಬಳಿ ಬೀದರ್-ಶ್ರೀರಂಗಪಟ್ಟಣ ರಾಷ್ಟಿçÃಯ ಹೆದ್ದಾರಿಯಲ್ಲಿ ನಸುಕಿನ 4 ಗಂಟೆಯಲ್ಲಿ ಘಟನೆ ನಡೆದಿದೆ.
ಬೆಂಗಳೂರು ಕಡೆಯಿಂದ ಬಳ್ಳಾರಿಗೆ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದ ತೋರಣಗಲ್ ಮೂಲದ ಪಿಯುಸಿ ವಿದ್ಯಾರ್ಥಿನಿ ಪಲ್ಲವಿ(18) ಮೃತಪಟ್ಟಿದ್ದಾರೆ. ಕಾರು ಚಾಲಕ ಸುರೇಶ್ ಗಂಭಿರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಅಭಿಮಾನಿಗೆ ಸಮಾಧಾನ ಮಾಡಿದ ಧ್ರುವ ಸರ್ಜಾ | ಸೆಲ್ಫಿ ಕ್ಲಿಕ್..ಕ್ಲಿಕ್
ಅಪಘಾತ ಸ್ಥಳಕ್ಕೆ ರಾಂಪುರ ಪೊಲೀಸ್ ಠಾಣೆ ಪಿಎಸ್‌ಐ ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲಿಸಿ ದೂರು ದಾಖಲಿಸಿಕೊಂಡಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
