
CHITRADURGA NEWS | 29 OCTOBER 2024
ಚಿತ್ರದುರ್ಗ: ಆಕಸ್ಮಿಕ ಬೆಂಕಿಯಿಂದ ಕಾರೊಂದು ಧಗಧಗಿಸಿ ಹೊತ್ತಿ ಉರಿದ(car caught fire) ಘಟನೆ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಎದುರಿನಲ್ಲಿ ಸಂಜೆ ನಡೆದಿದೆ.
ಕ್ಲಿಕ್ ಮಾಡಿ ಓದಿ: Diwali festival: ದೀಪಾವಳಿ ಹಬ್ಬದ ಪ್ರಯುಕ್ತ ದೀಪ ಸಂಜೀವಿನಿ ಕಾರ್ಯಕ್ರಮ | ಡಿಸಿ ಚಾಲನೆ

ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರು ಇದ್ದಕ್ಕಿದ್ದಂತೆ ಬೆಂಕಿಯಿಂದ ಧಗಧಗಿಸಿದೆ.

ಹಿರಿಯೂರಿನ ಸುರೇಶ್ ಎಂಬುವವರ ಕಾರು ಇದಾಗಿದ್ದು, ಕಾರು ನಿಲ್ಲಿಸಿ ಇಳಿದು ಹೊರ ಬರುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದೆ.
ಕಾರ್ಯನಿಮಿತ್ತ ಜಿಲ್ಲಾ ಪಂಚಾಯಿತಿ ಕಚೇರಿಗೆ ಆಗಮಿಸಿದ್ದಾಗ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಕಾರು ಮಾಲಿಕ ಸುರೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕ್ಲಿಕ್ ಮಾಡಿ ಓದಿ: Attempted suicide: ಅಂಬೇಡ್ಕರ್ ವೃತ್ತದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ | ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ ಪೊಲೀಸರು
ಘಟನೆಯ ಮಾಹಿತಿ ತಿಳಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಬೆಂಕಿಯ ಕೆನ್ನಾಲಿಗೆಗೆ ಕಾರು ಬಹುತೇಕ ಸುಟ್ಟು ಕರಕಲಾಗಿದೆ.
ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ವರದಿಯಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
