
ಚಿತ್ರದುರ್ಗ ನ್ಯೂಸ್.ಕಾಂ: ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕೆಎಸ್‍ಆರ್‍ಟಿಸಿ ಬಸ್ಸಿಗೆ ಹಿಂಬದಿಯಿಂದ ಬಂದ ಕಾರು ಡಿಕ್ಕಿಯಾದ ಘಟನೆ ನಡೆದಿದೆ.
ಬೆಂಗಳೂರಿನಿಂದ ಹಿರಿಯೂರು ಕಡೆಗೆ ಬರುವಾಗ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ನಿಲ್ದಾಣದಲ್ಲಿ ಬಸ್ ನಿಲ್ಲಿಸಲಾಗಿತ್ತು. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಕಾರು ಬಸ್ಸಿಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. ಘಟನೆಯಲ್ಲಿ ಕಾರಿನ ಚಾಲಕ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ
ಇದನ್ನೂ ಓದಿ: ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಪೋಕ್ಸೋ ಕೇಸ್: ಮಂಜೂರಾಯ್ತು ಜಾಮೀನು ದಾಖಲಿಸಲಾಗಿದೆ.
ಡಿಕ್ಕಿಯಾದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
