
CHITRADURGA NEWS | 06 FEBRUARY 2024
ಚಿತ್ರದುರ್ಗ: ಚಿತ್ರದುರ್ಗದಿಂದ ದಾವಣಗೆರೆ ಕಡೆಗೆ ಸಾಗುವ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕೆ.ಬಳ್ಳೆಕಟ್ಟೆ ಬಳಿ ಕಾರು ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಚೆಕ್ ಬೌನ್ಸ್ ಕೇಸ್ | ಗ್ರಾಮ ಲೆಕ್ಕಾಧಿಕಾರಿಗೆ ಜೈಲು ಶಿಕ್ಷೆ

ಕಾರಿನ ಟೈಯರ್ ಬ್ಲಾಸ್ಟ್(ಹೊಡೆದು) ಆಗಿರುವ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತವಾಗಿದೆ.
ಮಹಾರಾಷ್ಟ್ರ ನೊಂದಣಿ ಸಂಖ್ಯೆ ಹೊಂದಿರುವ ಎರಿಟಿಗಾ ಕಾರು ಅಪಘಾತಕ್ಕೀಡಾಗಿದ್ದು, ಡಿವೈಡರ್‍ಗೆ ಡಿಕ್ಕಿ ಹೊಡೆದು ನಂತರ ಹೆದ್ದಾರಿ ಪಕ್ಕದ ಚರಂಡಿಗೆ ಪಲ್ಟಿಯಾಗಿದೆ.
ಇದನ್ನೂ ಓದಿ: ಭದ್ರೆಗಾಗಿ ಬೀದಿಗಿಳಿದ ಹಸಿರು ಪಡೆ
ಕಾರಿನಲ್ಲಿದ್ದ ಮಹಾರಾಷ್ಟ್ರ ಮೂಲದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ.
ತೀವ್ರವಾಗಿ ಗಾಯಗೊಂಡಿರುವ ಮತ್ತೊಬ್ಬರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಇದನ್ನೂ ಓದಿ: ಅಡಿಕೆ ಸಿಪ್ಪೆಯಿಂದ ಕಾಂಪೋಸ್ಟ್ ತರಬೇತಿಗೆ ಅರ್ಜಿ ಆಹ್ವಾನ
ಅಪಘಾತ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್ ಕುಮಾರ್ ಮೀನಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
