CHITRAUDRGA NEWS | 24 JULY 2026
ಚಿತ್ರದುರ್ಗ: ಚಿತ್ರದುರ್ಗ ರೋಟರಿ ಟ್ರಸ್ಟ್ ಹಾಗೂ ಯುವಜಯ ಫೌಂಡೇಶನ್ ಅವರ ಸಂಯುಕ್ತಆಶ್ರಯದಲ್ಲಿ ನಗರದ ಎಸ್.ಆರ್.ಬಿ.ಎಂ.ಎಸ್. ರೋಟರಿ ಸೇವಾಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪದವಿ ವಿದ್ಯಾರ್ಥಿಗಳ ಭವಿಷ್ಯದ ವೃತ್ತಿ ಜೀವನಕ್ಕೆ ಮಾರ್ಗದರ್ಶನ ನೀಡುವ ಉದ್ದೇಶದಿಂದ ಕೆರಿಯರ್ ಕನೆಕ್ಟ್ ಕಾರ್ಯಕ್ರಮವನ್ನು ರೋಟರಿ ಟ್ರಸ್ಟ್ ನ ಕಾರ್ಯದರ್ಶಿ ಪಿಡಿಜಿ ಕೆ.ಮಧುಪ್ರಸಾದ್ ಉದ್ಘಾಟಿಸಿದರು.
ಇದನ್ನೂ ಓದಿ: 3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
ನಂತರ ಮಾತನಾಡಿ ಅವರು, ವಿದ್ಯಾರ್ಥಿಗಳು ಪದವಿಯ ಜೊತೆಗೆ ಸಂವಹನ ಕೌಶಲ್ಯ, ನಾಯಕತ್ವ ಗುಣಗಳು ಮತ್ತು ಉದ್ಯೋಗಕ್ಕೆ ಅಗತ್ಯವಾದ ಸಾಮಥ್ರ್ಯಗಳನ್ನು ಬೆಳೆಸಿಕೊಳ್ಳುವಂತೆ ಯುವ ಜನತೆಗೆ ಕರೆ ನೀಡಿದರು.
ರೋಟರಿ ಟ್ರಸ್ಟ್ ಶಿಕ್ಷಣ ಹಾಗೂ ಯುವಜನರ ಸಬಲೀಕರಣಕ್ಕಾಗಿ ನಿರಂತರವಾಗಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂದು ಹೇಳಿದರು.
ಯುವಜಯ ಫೌಂಡೇಶನ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿರೀಶ್ ನಾಗನೂರು ಮಾತನಾಡಿ, ಇಂದಿನ ಉದ್ಯೋಗ ಕ್ಷೇತ್ರದ ಅಗತ್ಯತೆಗಳು, ಹೊಸ ಅವಕಾಶಗಳು ಹಾಗೂ ಕೌಶಲ್ಯಾಧಾರಿತ ಶಿಕ್ಷಣದ ಮಹತ್ವವನ್ನು ವಿವರಿಸಿದರು. ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಸಾಮಥ್ರ್ಯಕ್ಕೆ ಅನುಗುಣವಾಗಿ ವೃತ್ತಿ ಆಯ್ಕೆ ಮಾಡಿಕೊಂಡು ನಿರಂತರ ಕಲಿಕೆಯ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ರೋಟರಿ ಕ್ಲಬ್ ಆಫ್ ಚಿತ್ರದುರ್ಗದ ಅಧ್ಯಕ್ಷ ಯೋಗೀಶ್ ಸಹ್ಯಾದ್ರಿ, ಇಂತಹ ಕಾರ್ಯಕ್ರಮಗಳು ಗ್ರಾಮೀಣಾ ಹಾಗೂ ನಗರ ಪ್ರದೇಶದ ವಿದ್ಯಾರ್ಥಿಗಳ ನಡುವಿನ ಮಾಹಿತಿ ಅಂತರವನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗುತ್ತವೆ. ಶಿಕ್ಷಣದೊಂದಿಗೆ ವ್ಯಕ್ತಿತ್ವ ವಿಕಸನ, ಇಂಗ್ಲಿಷ್ ಸಂವಹನ ಕೌಶಲ್ಯ ಮತ್ತು ಆತ್ಮವಿಶ್ವಾಸವನ್ನು ಬೆಳೆಸಿಕೊಂಡರೆ ವಿದ್ಯಾರ್ಥಿಗಳು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲೂ ಉತ್ತಮ ಸಾಧನೆ ಮಾಡಬಹುದು ಎಂದು ಹೇಳಿದರು.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಯಕ್ಷಗಾನ ತಾಳಮದ್ದಳೆ | ಆಲಾಪಕ್ಕೆ ತಲೆದೂಗಿದ ಯಕ್ಷಗಾನ ಪ್ರಿಯರು
ಯುವಜಯ ಫೌಂಡೇಶನ್ ತರಬೇತಿದಾರರಾದ ಕಾರ್ತಿಕ ಮಾತನಾಡಿದರು. ಎ.ಮೈಲೇಶ್ ಕುಮಾರ್, ಜಿ.ಎ.ವಿಶ್ವನಾಥ್, ಮಾಧುರಿ ಮಧುಪ್ರಸಾದ್, ಎಂ.ಸಿ. ಮೂರ್ತಿ, ಪದವಿ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿದ್ಯಾರ್ಥಿಗಳು ತಜ್ಞರೊಂದಿಗೆ ಸಂವಾದ ನಡೆಸಿ, ತಮ್ಮ ವೃತ್ತಿ ಭವಿಷ್ಯಕ್ಕೆ ಸಂಬಂಧಿಸಿದ ಅನೇಕ ಪ್ರಶ್ನೆಗಳಿಗೆ ಉತ್ತರಗಳನ್ನು ಪಡೆದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

