CHITRADURGA NEWS | 12 AUGUST 2026
ಚಿತ್ರದುರ್ಗ: ಚಿತ್ರದುರ್ಗ ನಗರ ಪ್ರದೇಶದ ನೀರಿನ ಮಿತ ಬಳಕೆ, ಮಳೆ ನೀರು ಕೊಯ್ಲು, ಅಂತರ್ಜಲ ಮರುಪೂರಣ ಹಾಗೂ ಜಲಮೂಲಗಳ ಸಂರಕ್ಷಣೆ ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜಂಟಿ ಸಹಯೋಗದ ‘ಜಲ ಸಂಚಯ ಜನ ಭಾಗಿದಾರಿ’ ಉಪಕ್ರಮದಡಿ ನಗರಸಭೆಯು ‘ಕ್ಯಾಚ್ ದಿ ರೈನ್’ ಅಭಿಯಾನ ಹಮ್ಮಿಕೊಂಡಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 12 | ರಾಗಿ, ಶೇಂಗಾ ರೇಟ್…..
ಈ ಅಭಿಯಾನದ ಅಂಗವಾಗಿ, ಈಗಾಗಲೇ ಆಗಸ್ಟ್ 10ರಂದು ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಹಾಗೂ ಚಳ್ಳಕೆರೆ ವೃತ್ತದಲ್ಲಿ ಬೀದಿ ನಾಟಕದ ಮೂಲಕ ನೀರು ಉಳಿಸುವ ಕುರಿತು ಜಾಗೃತಿ ಮೂಡಿಸಲಾಗಿದೆ.
ಆಗಸ್ಟ್ 13ರಂದು ಬೆಳಿಗ್ಗೆ 10 ಗಂಟೆಗೆ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ. ಹಾಗೆಯೇ, ಆಗಸ್ಟ್ 19ರಂದು ಬೆಳಿಗ್ಗೆ 11 ಗಂಟೆಗೆ ನಗರಸಭೆ ಸಭಾಂಗಣದಲ್ಲಿ ಹಿರಿಯ ಭೂವಿಜ್ಞಾನಿಗಳೊಂದಿಗೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಇದನ್ನೂ ಓದಿ: ಹೊಸದುರ್ಗ | ಭಾರತ್ ಜೋಡೊ ಯುವ ಸಂಘ ಸ್ಥಾಪಿಸಲು ಅರ್ಜಿ ಅಹ್ವಾನ
ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಜಲ ಸಂರಕ್ಷಣಾ ಅಭಿಯಾನವನ್ನು ಯಶಸ್ವಿಗೊಳಿಸಬೇಕಾಗಿ ಚಿತ್ರದುರ್ಗ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

