By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿಸಿ ಕ್ಯಾಮೆರಾ ಕಣ್ಗಾವಲು | 19 ಕೇಂದ್ರಗಳಿಗೆ ಪೊಲೀಸ್‌ ಭದ್ರತೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿಸಿ ಕ್ಯಾಮೆರಾ ಕಣ್ಗಾವಲು | 19 ಕೇಂದ್ರಗಳಿಗೆ ಪೊಲೀಸ್‌ ಭದ್ರತೆ

ಮುಖ್ಯ ಸುದ್ದಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿಸಿ ಕ್ಯಾಮೆರಾ ಕಣ್ಗಾವಲು | 19 ಕೇಂದ್ರಗಳಿಗೆ ಪೊಲೀಸ್‌ ಭದ್ರತೆ

News Desk Chitradurga News
Last updated: 7 June 2024 14:49
News Desk Chitradurga News
1 year ago
Share
ADC KUMARA SWAMY
ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿದರು
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 07 JUNE 2024
ಚಿತ್ರದುರ್ಗ:‌ ಜಿಲ್ಲೆಯಲ್ಲಿ ಜೂನ್‌ 14 ರಿಂದ 22 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ನಡೆಯಲಿದೆ. ಕರ್ತವವ್ಯಕ್ಕೆ ನಿಯೋಜಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ‘ಕರ್ತವ್ಯನಿರತ ಸಿಬ್ಬಂದಿ ಯಾವುದೇ ಲೋಪದೋಷಗಳಿಗ ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ಹೆಚ್ಚಿನ ಗಮನಹರಿಸಿ, ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು’ ಎಂದು ತಾಕೀತು ಮಾಡಿದರು.

ಕ್ಲಿಕ್ ಮಾಡಿ ಓದಿ: ಖರ್ಚಿಲ್ಲದೆ ಪ್ರಕರಣ ಬಗೆಹರಿಸಿಕೊಳ್ಳಿ | ಜಿಲ್ಲಾ ನ್ಯಾಯಾಲಯದಿಂದ ಸುರ್ವಣಾವಕಾಶ

‘ಪರೀಕ್ಷಾ ಕೇಂದ್ರಗಳಲ್ಲಿ ನಕಲು ಆಗದಂತೆ ಕ್ರಮವಹಿಸಬೇಕು. ಪರೀಕ್ಷಾ ನಡೆಯುವ ದಿನಗಳಂದು ಆಯಾ ತಾಲ್ಲೂಕಿನ ತಹಶೀಲ್ದಾರ್‌ಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಲು ಕ್ರಮವಹಿಸಲಾಗುತ್ತದೆ. 4 ರಿಂದ 5 ಪರೀಕ್ಷಾ ಕೇಂದ್ರಗಳಿಗೆ ಒಬ್ಬರಂತೆ ಜಿಲ್ಲಾ ಹಂತದ, ತಾಲ್ಲೂಕು ಹಂತದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗುವುದು’ ಎಂದರು.

ಕ್ಲಿಕ್ ಮಾಡಿ ಓದಿ: ಗೋವಿಂದ ಕಾರಜೋಳ ಗೆಲುವಿಗೆ ಬಿಜೆಪಿ ನಾಯಕರು ಕೆಲಸ ಮಾಡಲಿಲ್ಲ

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ನಾಸಿರುದ್ದೀನ್ ಮಾತನಾಡಿ, ‘ಜಿಲ್ಲೆಯ 19 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 6,421 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ ಮುಖ್ಯ ಅಧೀಕ್ಷಕರು ಹಾಗೂ ಕಸ್ಟೋಡಿಯನ್‌ ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್‌ ಸಿಬ್ಬಂದಿಯನ್ನು ಪರೀಕ್ಷೆ ನಡೆಯುವ ದಿನಗಳಂದು ನಿಯೋಜಿಸುವುದು. ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸಾಗಿಸಲು ನೇಮಕ ಮಾಡಲಾಗಿರುವ ಮಾರ್ಗಾಧಿಕಾರಿಗಳ ವಾಹನಕ್ಕೆ ಸಶಸ್ತ್ರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು’ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ: ಶೌಚಾಲಯದ ಬಳಿ ನವಜಾತ ಶಿಶು ಪತ್ತೆ | ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಘಟನೆ

‘ಕೇಂದ್ರಗಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿಯವರನ್ನು ಪ್ರಥಮ ಚಿಕಿತ್ಸಾ ಪೆಟ್ಟಿಗೆಯೊಂದಿಗೆ ನಿಯೋಜಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಈಗಾಗಲೇ ಪತ್ರ ವ್ಯವಹರಿಸಲಾಗಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿರುತ್ತದೆ. ಪರೀಕ್ಷಾ ಕೇಂದ್ರಗಳ ಸುತ್ತ ಅಕ್ರಮ ನಡೆಯದಂತೆ 144 ಸೆಕ್ಷನ್ ಜಾರಿ ಆದೇಶ ಮಾಡುವಂತೆ’ ಮನವಿ ಮಾಡಿದರು.

‘ಪರೀಕ್ಷಾ ಮಂಡಳಿಯಿಂದ ಸರಬರಾಜು ಆಗುವ ಪ್ರಶ್ನೆ ಪತ್ರಿಕೆಗಳನ್ನು ಆಯಾ ತಾಲ್ಲೂಕು ಕೇಂದ್ರದಲ್ಲಿ ಉಪ ಖಜಾನೆಗಳಲ್ಲಿ ಸಂರಕ್ಷಿಸಿಡುವುದು. ಪರೀಕ್ಷಾ ವೇಳಾಪಟ್ಟಿಯಂತೆ ಪ್ರಶ್ನೆಪತ್ರಿಕೆಗಳನ್ನು ಮಾರ್ಗಾಧಿಕಾರಿಗಳಿಗೆ ವಿತರಿಸಲು ಕ್ರಮವಹಿಸಬೇಕು. ಎಸ್‍ಎಲ್‍ಎಲ್‍ಸಿ ಪರೀಕ್ಷೆ-2ರ ಜಿಲ್ಲೆಯ 19 ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವ ಸಿ.ಸಿ.ಕ್ಯಾಮೆರಾಗಳ ಮೂಲಕ ಪ್ರತಿ ದಿನದ ಪರೀಕ್ಷಾ ಚಟುವಟಿಕೆಗಳನ್ನು ವೀಕ್ಷಿಸಲು ಚಿತ್ರದುರ್ಗ ಡಯಟ್‍ನಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಿ ವೆಬ್ ಕಾಸ್ಟಿಂಗ್ ಕಾರ್ಯ ಮಾಡಲು ಅಗತ್ಯ ಸಿದ್ದತೆ ಮಾಡಿಕೊಳ್ಳಲು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್‌, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:CC cameraexamSecuritySSLCSurveillanceಎಸ್‌ಎಸ್‌ಎಲ್‌ಸಿಕಣ್ಗಾವಲುಪರೀಕ್ಷೆಭದ್ರತೆಸಿಸಿ ಕ್ಯಾಮೆರಾ
Share This Article
Facebook Email Print
Previous Article district judge ಖರ್ಚಿಲ್ಲದೆ ಪ್ರಕರಣ ಬಗೆಹರಿಸಿಕೊಳ್ಳಿ | ಜಿಲ್ಲಾ ನ್ಯಾಯಾಲಯದಿಂದ ಸುರ್ವಣಾವಕಾಶ
Next Article ಮಾದಾರ ಚನ್ನಯ್ಯ ಶ್ರೀಗಳಿಗೆ ಗೌರವ ಡಿ.ಲಿಟ್ | ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದಿಂದ ಪ್ರದಾನ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up