Connect with us

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿಸಿ ಕ್ಯಾಮೆರಾ ಕಣ್ಗಾವಲು | 19 ಕೇಂದ್ರಗಳಿಗೆ ಪೊಲೀಸ್‌ ಭದ್ರತೆ

ADC KUMARA SWAMY

ಮುಖ್ಯ ಸುದ್ದಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿಸಿ ಕ್ಯಾಮೆರಾ ಕಣ್ಗಾವಲು | 19 ಕೇಂದ್ರಗಳಿಗೆ ಪೊಲೀಸ್‌ ಭದ್ರತೆ

CHITRADURGA NEWS | 07 JUNE 2024
ಚಿತ್ರದುರ್ಗ:‌ ಜಿಲ್ಲೆಯಲ್ಲಿ ಜೂನ್‌ 14 ರಿಂದ 22 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ನಡೆಯಲಿದೆ. ಕರ್ತವವ್ಯಕ್ಕೆ ನಿಯೋಜಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ‘ಕರ್ತವ್ಯನಿರತ ಸಿಬ್ಬಂದಿ ಯಾವುದೇ ಲೋಪದೋಷಗಳಿಗ ಅವಕಾಶ ನೀಡಬಾರದು. ಈ ನಿಟ್ಟಿನಲ್ಲಿ ಹೆಚ್ಚಿನ ಗಮನಹರಿಸಿ, ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು’ ಎಂದು ತಾಕೀತು ಮಾಡಿದರು.

ಕ್ಲಿಕ್ ಮಾಡಿ ಓದಿ: ಖರ್ಚಿಲ್ಲದೆ ಪ್ರಕರಣ ಬಗೆಹರಿಸಿಕೊಳ್ಳಿ | ಜಿಲ್ಲಾ ನ್ಯಾಯಾಲಯದಿಂದ ಸುರ್ವಣಾವಕಾಶ

‘ಪರೀಕ್ಷಾ ಕೇಂದ್ರಗಳಲ್ಲಿ ನಕಲು ಆಗದಂತೆ ಕ್ರಮವಹಿಸಬೇಕು. ಪರೀಕ್ಷಾ ನಡೆಯುವ ದಿನಗಳಂದು ಆಯಾ ತಾಲ್ಲೂಕಿನ ತಹಶೀಲ್ದಾರ್‌ಗಳು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಲು ಕ್ರಮವಹಿಸಲಾಗುತ್ತದೆ. 4 ರಿಂದ 5 ಪರೀಕ್ಷಾ ಕೇಂದ್ರಗಳಿಗೆ ಒಬ್ಬರಂತೆ ಜಿಲ್ಲಾ ಹಂತದ, ತಾಲ್ಲೂಕು ಹಂತದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗುವುದು’ ಎಂದರು.

ಕ್ಲಿಕ್ ಮಾಡಿ ಓದಿ: ಗೋವಿಂದ ಕಾರಜೋಳ ಗೆಲುವಿಗೆ ಬಿಜೆಪಿ ನಾಯಕರು ಕೆಲಸ ಮಾಡಲಿಲ್ಲ

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ನಾಸಿರುದ್ದೀನ್ ಮಾತನಾಡಿ, ‘ಜಿಲ್ಲೆಯ 19 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 6,421 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಈಗಾಗಲೇ ಮುಖ್ಯ ಅಧೀಕ್ಷಕರು ಹಾಗೂ ಕಸ್ಟೋಡಿಯನ್‌ ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್‌ ಸಿಬ್ಬಂದಿಯನ್ನು ಪರೀಕ್ಷೆ ನಡೆಯುವ ದಿನಗಳಂದು ನಿಯೋಜಿಸುವುದು. ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸಾಗಿಸಲು ನೇಮಕ ಮಾಡಲಾಗಿರುವ ಮಾರ್ಗಾಧಿಕಾರಿಗಳ ವಾಹನಕ್ಕೆ ಸಶಸ್ತ್ರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು’ ಎಂದು ತಿಳಿಸಿದರು.

ಕ್ಲಿಕ್ ಮಾಡಿ ಓದಿ: ಶೌಚಾಲಯದ ಬಳಿ ನವಜಾತ ಶಿಶು ಪತ್ತೆ | ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಘಟನೆ

‘ಕೇಂದ್ರಗಳಿಗೆ ಆರೋಗ್ಯ ಇಲಾಖೆ ಸಿಬ್ಬಂದಿಯವರನ್ನು ಪ್ರಥಮ ಚಿಕಿತ್ಸಾ ಪೆಟ್ಟಿಗೆಯೊಂದಿಗೆ ನಿಯೋಜಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಈಗಾಗಲೇ ಪತ್ರ ವ್ಯವಹರಿಸಲಾಗಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ನಿಯೋಜಿಸಲಾಗಿರುತ್ತದೆ. ಪರೀಕ್ಷಾ ಕೇಂದ್ರಗಳ ಸುತ್ತ ಅಕ್ರಮ ನಡೆಯದಂತೆ 144 ಸೆಕ್ಷನ್ ಜಾರಿ ಆದೇಶ ಮಾಡುವಂತೆ’ ಮನವಿ ಮಾಡಿದರು.

‘ಪರೀಕ್ಷಾ ಮಂಡಳಿಯಿಂದ ಸರಬರಾಜು ಆಗುವ ಪ್ರಶ್ನೆ ಪತ್ರಿಕೆಗಳನ್ನು ಆಯಾ ತಾಲ್ಲೂಕು ಕೇಂದ್ರದಲ್ಲಿ ಉಪ ಖಜಾನೆಗಳಲ್ಲಿ ಸಂರಕ್ಷಿಸಿಡುವುದು. ಪರೀಕ್ಷಾ ವೇಳಾಪಟ್ಟಿಯಂತೆ ಪ್ರಶ್ನೆಪತ್ರಿಕೆಗಳನ್ನು ಮಾರ್ಗಾಧಿಕಾರಿಗಳಿಗೆ ವಿತರಿಸಲು ಕ್ರಮವಹಿಸಬೇಕು. ಎಸ್‍ಎಲ್‍ಎಲ್‍ಸಿ ಪರೀಕ್ಷೆ-2ರ ಜಿಲ್ಲೆಯ 19 ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವ ಸಿ.ಸಿ.ಕ್ಯಾಮೆರಾಗಳ ಮೂಲಕ ಪ್ರತಿ ದಿನದ ಪರೀಕ್ಷಾ ಚಟುವಟಿಕೆಗಳನ್ನು ವೀಕ್ಷಿಸಲು ಚಿತ್ರದುರ್ಗ ಡಯಟ್‍ನಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಿ ವೆಬ್ ಕಾಸ್ಟಿಂಗ್ ಕಾರ್ಯ ಮಾಡಲು ಅಗತ್ಯ ಸಿದ್ದತೆ ಮಾಡಿಕೊಳ್ಳಲು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್‌, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಇದ್ದರು.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version