
CHITRADURGA NEWS | 23 APRIL 2026
ಚಿತ್ರದುರ್ಗ: ತುರುವನೂರು ರಸ್ತೆಯಲ್ಲಿರುವ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ವೈಷ್ಣವ ಸಭಾ ವತಿಯಿಂದ ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವವನ್ನು ಬುಧವಾರ ಆಚರಿಸಲಾಯಿತು.
ವಿಶೇಷವಾಗಿ ಅಲಂಕರಿಸಲಾಗಿದ್ದ ರಾಮಾನುಜಾಚಾರ್ಯರ ಉತ್ಸವ ಮೂರ್ತಿಯನ್ನು ಹೊತ್ತು ಮೂರು ಸುತ್ತು ದೇವಸ್ಥಾನವನ್ನು ಪ್ರದಕ್ಷಿಣೆ ಹಾಕಲಾಯಿತು. ಈ ಸಂದರ್ಭದಲ್ಲಿ ಭಕ್ತಾಧಿಗಳು ಗೋವಿಂದನ ನಾಮ ಸ್ಮರಣೆಯನ್ನು ಪಠಿಸಿದರು.

ಇದನ್ನೂ ಓದಿ: ಅಡಿಕೆ ಧಾರಣೆ | ಏಪ್ರಿಲ್ 22 | ಇಂದಿನ ಅಡಿಕೆ ರೇಟ್
ಚಿತ್ರದುರ್ಗ ವೈಷ್ಣವ ಸಭಾದ ಅಧ್ಯಕ್ಷರಾದ ಜಗದೀಶ್ ಜೆ ಅಯ್ಯಂಗಾರ್, ಅರ್ಚಕರಾದ ನಾರಾಯಣ ಭಟ್ಟರ್, ವಾಸನ್, ಮುರಳಿ, ಮುಕುಂದ ಹಾಗೂ ವೈಷ್ಣವ ಸಭಾದ ಸದಸ್ಯರು ಜಯಂತ್ಯೋತ್ಸವದಲ್ಲಿ ಪಾಲ್ಗೊಂಡಿದ್ದರು.
ಜಯಂತ್ಯೋತ್ಸವ ನಂತರ ಭಕ್ತಾಧಿಗಳಿಗೆ ಪ್ರಸಾದ ವಿನಿಯೋಗಿಸಲಾಯಿತು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
