
CHITRADURGA NEWS | 04 JUNE 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಕೊನೆ ಹಂತಕ್ಕೆ ತಲುಪುತ್ತಿದ್ದು, ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ.
16ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಮತಗಳ ಅಂತರವನ್ನು ಹೆಚ್ಚಿಸಿಕೊಂಡಿದೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ 5,58,127 ಮತಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 5,24,936ಮತ ಪಡೆದಿದ್ದಾರೆ. 33,164ಮತಗಳ ಮುನ್ನಡೆಯನ್ನು ಬಿಜೆಪಿ ಸಾಧಿಸಿದೆ.
ಮೊದಲ ಸುತ್ತಿನಲ್ಲಿ ಕೇವಲ 75 ಮತಗಳ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಬಳಿಕ ಎರಡರಿಂದ ಹದಿನೈದನೇ ಸುತ್ತಿನವರೆಗೂ ನಿರಂತರ ಹಿನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಮಾತ್ರ ಸುತ್ತಿನಿಂದ ಸುತ್ತಿಗೆ ಅಂತರವನ್ನು ಹೆಚ್ಚಿಸಿಕೊಳ್ಳುತ್ತ ಸಾಗಿದ್ದಾರೆ. ಹದಿನಾರನೇ ಸುತ್ತಿನಲ್ಲಿ 33,164 ಮತಗಳ ಅಂತರ ಕಾಯ್ದುಕೊಂಡಿದ್ದಾರೆ.

ಬಿಜೆಪಿಯ ಗೋವಿಂದ ಕಾರಜೋಳ, ಕಾಂಗ್ರೆಸ್‌ನ ಬಿ.ಎನ್.ಚಂದ್ರಪ್ಪ ಸೇರಿ 20 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಯ ನಡುವೆ ನೇರ ಹಣಾಹಣಿ ನಡೆದಿದೆ. ವಿಜಯದ ಮಾಲೆ ಬಹುತೇಕ ಬಿಜೆಪಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಕೊರಳನ್ನು ಅಲಂಕರಿಸುವ ಕ್ಷಣ ಶುರುವಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
