CHITRADURGA NEWS | 28 MARCH 2026
ಚಿತ್ರದುರ್ಗ: ಭಾರತ ಜನಗಣತಿ-2027ರ ಅಂಗವಾಗಿ ಸಾರ್ವಜನಿಕರು ತಾವಾಗಿಯೇ ಮಾಹಿತಿ ನೀಡುವ “ಸ್ವಯಂ ಗಣತಿ” ಪ್ರಕ್ರಿಯೆಯು 2026ರ ಏಪ್ರಿಲ್ 1 ರಿಂದ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಇದನ್ನೂ ಓದಿ: ಜಿಲ್ಲೆಯಲ್ಲಿ ಶ್ರದ್ಧಾ ಭಕ್ತಿಯ ಶ್ರೀರಾಮ ನವಮಿ
ಸಾರ್ವಜನಿಕರು 2026ರ ಏಪ್ರಿಲ್ 01 ರಿಂದ 15 ರವರೆಗೆ ಇಲಾಖೆಯ ವೆಬ್‍ಸೈಟ್ www.se.census.gov.in ಗೆ ಭೇಟಿ ನೀಡಿ ತಮ್ಮ ಕುಟುಂಬದ ವಿವರಗಳನ್ನು ಆನ್‍ಲೈನ್ ಪೋರ್ಟಲ್ ಮೂಲಕ ಭರ್ತಿ ಮಾಡಬಹುದು.
ಮಾಹಿತಿ ಸಲ್ಲಿಸಿದ ನಂತರ ಲಭ್ಯವಾಗುವ ರೆಫರೆನ್ಸ್ ಐಡಿ (Reference ID) ಅನ್ನು ಸಾರ್ವಜನಿಕರು ಸುರಕ್ಷಿತವಾಗಿಟ್ಟುಕೊಳ್ಳಬೇಕು.
ಇದನ್ನೂ ಓದಿ: ಅಡಿಕೆ ಧಾರಣೆ | 27 ಮಾರ್ಚ್ | ರಾಜ್ಯದ ಅಡಿಕೆ ಮಾರುಕಟ್ಟೆಗಳ ಸಮಗ್ರ ವಿವರ
ಬಳಿಕ 2026ರ ಏಪ್ರಿಲ್ 16 ರಿಂದ ಮೇ 15 ರವರೆಗೆ ನಿಗದಿಪಡಿಸಲಾದ ಕ್ಷೇತ್ರ ಮಾಹಿತಿಗಳ ಸಂಗ್ರಹಣೆಯ ಸಮಯದಲ್ಲಿ, ಮೌಲ್ಯೀಕರಣಕ್ಕಾಗಿ ಗಣತಿದಾರರು ಮನೆಗಳಿಗೆ ಭೇಟಿ ನೀಡಿದಾಗ ಈ ರೆಫರೆನ್ಸ್ ಐಡಿ ಅನ್ನು ನೀಡಿ ಗಣತಿ ಕಾರ್ಯದಲ್ಲಿ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮನವಿ ಮಾಡಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
