CHITRADURGA NEWS | 02 APRIL 2026
ಹೊಳಲ್ಕೆರೆ: ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆಯಬೇಕಾದರೆ ಜನಗಣತಿಯಿಂದ ಯಾರು ನುಣುಚಿಕೊಳ್ಳಬೇಡಿ. ಸಿಬ್ಬಂದಿಗಳು ನಿಮ್ಮ ಮನೆ ಬಾಗಿಲಿಗೆ ಬಂದರೆ ಸಂಪೂರ್ಣ ಮಾಹಿತಿ ಕೊಟ್ಟು ಸಹಕರಿಸುವಂತೆ ಶಾಸಕ ಡಾ.ಎಂ.ಚಂದ್ರಪ್ಪ ಜನತೆಯಲ್ಲಿ ಮನವಿ ಮಾಡಿದರು.
ಇದನ್ನೂ ಓದಿ: ಜನಗಣತಿ ಸ್ವಯಂ ಪ್ರಕ್ರಿಯೆಗೆ ನ್ಯಾಯಾಧೀಶರು, ಡಿಸಿ ಚಾಲನೆ
ತಾಲೂಕಿನ ಈಚಗಟ್ಟ ಗ್ರಾಮದಲ್ಲಿ ತಹಶೀಲ್ದಾರ್ ಕಾರ್ಯಾಲಯ ವತಿಯಿಂದ ಬುಧವಾರ ಆರಂಭಗೊಂಡ ಭಾರತ ಜನಗಣತಿ-2027 ಸ್ವಯಂ ಗಣತಿ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದರು.
2021 ರಲ್ಲಿ ಇಡಿ ವಿಶ್ವವನ್ನೇ ತಲ್ಲಣಗೊಳಿಸಿದ್ದ ಕೋವಿಡ್ ಅಪಾಯಕಾರಿ ಸಂದರ್ಭವಿದ್ದುದರಿಂದ ಭಾರತ ಜನಗಣತಿಯನ್ನು ನಿಲ್ಲಿಸಿತ್ತು. ಈಗ ಆರಂಭಿಸಿದೆ. ಆರು ತಿಂಗಳುಗಳ ಕಾಲ ನಡೆಯುವ ಜನಗಣತಿಯಲ್ಲಿ ನಿಮ್ಮ ಕೌಟುಂಬಿಕ ಜೀವನ, ಆಗುಹೋಗು, ಮಕ್ಕಳ ಶೈಕ್ಷಣಿಕ ಮಟ್ಟ ಹಾಗೂ ಜಾತಿ ಸೇರಿದಂತೆ ಅನೇಕ ಮಾಹಿತಿಗಳನ್ನು ನೀಡುವುದನ್ನು ಮರೆಯಬೇಡಿ.
ಒಂದು ವೇಳೆ ಜನಗಣತಿಯಿಂದ ತಪ್ಪಿಸಿಕೊಂಡರೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಸಿಗುವ ಸೌಲಭ್ಯಗಳಿಂದ ವಂಚಿತರಾಗುತ್ತೀರ. ಬಹುದೊಡ್ಡ ಕಾರ್ಯಕ್ರಮ ಇದಾಗಿದ್ದು, ಸ್ವಯಂ ಪ್ರೇರಣೆಯಿಂದ ಮೊಬೈಲ್ ಮೂಲಕವೂ ಮಾಹಿತಿ ಕೊಡಬಹುದು. ಯಾವುದೇ ಕಾರಣಕ್ಕೂ ಉದಾಸೀನ ಮಾಡಬೇಡಿ ಎಂದು ತಿಳಿಸಿದರು.
ಇದನ್ನೂ ಓದಿ: ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರಿಂದ ಸ್ವಯಂ ಗಣತಿ ದಾಖಲಾತಿ
ಈ ಸಂದರ್ಭದಲ್ಲಿ ತಹಶೀಲ್ದಾರ್ ವಿಜಯಕುಮಾರ್, ಪರಮೇಶ್ವರಪ್ಪ, ಪ್ರವೀಣ್, ಅಂಕಳಪ್ಪ, ಸಿದ್ದವೀರಪ್ಪ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಅಧಿಕಾರಿಗಳು ಹಾಜರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
