ಮುಖ್ಯ ಸುದ್ದಿ
ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ | ಚಿತ್ರದುರ್ಗದಲ್ಲಿ ಪೂರ್ವಭಾವಿ ಸಭೆ
CHITRADURGA NEWS | 20 DECEMBER 2024
ಚಿತ್ರದುರ್ಗ: ಎ.ಐ.ಸಿ.ಸಿ. ಅಧಿವೇಶನ ಶತಮಾನೋತ್ಸವದ ಅಂಗವಾಗಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ಜರುಗಿತು.
ಕ್ಲಿಕ್ ಮಾಡಿ ಓದಿ: ವಾಣಿವಿಲಾಸ ಸಾಗರದ ನೀರಿನ ಮಟ್ಟ ಹೆಚ್ಚಳ | ಇಂದಿನ ನೀರಿನ ಮಟ್ಟ
ಸಭೆಯಲ್ಲಿ ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಮಾತನಾಡಿ, ಡಿ.26,27 ರಂದು ಬೆಳಗಾವಿಯಲ್ಲಿ ನಡೆಯುವ ಎ.ಐ.ಸಿ.ಸಿ. ಅಧಿವೇಶನದ ಶತಮಾನೋತ್ಸವಕ್ಕೆ ದೇಶದ ನಾನಾ ರಾಜ್ಯಗಳಿಂದ ಮುಖ್ಯಮಂತ್ರಿಗಳು, ಸಚಿವರು, ಸಂಸದರು, ಶಾಸಕರುಗಳು ಪಾಲ್ಗೊಳ್ಳುತ್ತಿರುವುದರಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಹೇಳಿದರು.
ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಮಹಾತ್ಮಗಾಂಧಿ 1924, ಡಿ.26,27 ರಂದು ಬೆಳಗಾವಿಯಲ್ಲಿ ಎ.ಐ.ಸಿ.ಸಿ. ಅಧಿವೇಶನ ನಡೆಸಿ ನೂರು ವರ್ಷಗಳಾಗಿರುವುದರಿಂದ ಶತಮಾನೋತ್ಸವವನ್ನು ಆಚರಿಸಲಾಗುವುದು.
ಜಿಲ್ಲೆಯಿಂದ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಅಧಿವೇಶನಕ್ಕೆ ತೆರಳಬೇಕು. ಮುಂದೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ಗೆಲ್ಲಬೇಕಾಗಿರುವುದರಿಂದ ಸಂಘಟನೆಗೆ ಒತ್ತು ಕೊಡಬೇಕು.
ಕ್ಲಿಕ್ ಮಾಡಿ ಓದಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನವಾಗುವಂತೆ ಹೇಳಿಕೆ ನೀಡಿದ್ದಾರೆ. ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಸಹ್ಯವಾಗಿ ಮಾತನಾಡಿ ಸ್ತ್ರೀ ಕುಲಕ್ಕೆ ಅವಮಾನಿಸಿರುವುದರ ವಿರುದ್ದ ಎಲ್ಲರು ಒಗ್ಗಟ್ಟಾಗಿ ಹೋರಾಡಬೇಕು. ಇವರಿಬ್ಬರನ್ನು ಪಕ್ಷದಿಂದ ವಜಾಗೊಳಿಸಬೇಕೆಂದು ಕೋಮುವಾದಿ ಬಿಜೆಪಿಗೆ ಎಚ್ಚರಿಸಿದರು.
ಯುವ ಮುಖಂಡ ಜೆ.ಜೆ.ಹಟ್ಟಿಯ ಡಾ.ಬಿ.ತಿಪ್ಪೇಸ್ವಾಮಿ ಮಾತನಾಡಿ, ಬೆಳಗಾವಿಯಲ್ಲಿ ಗಾಂಧಿ ಭಾರತ ಎ.ಐ.ಸಿ.ಸಿ. ಅಧಿವೇಶನದ ಶತಮಾನೋತ್ಸವ ವಿಜೃಂಭಣೆಯಿಂದ ನಡೆಯಲಿದೆ. ಜಿಲ್ಲೆಯಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಮೆಕ್ಕೆಜೋಳ ರೇಟ್
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಎಂ.ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್‍ಕುಮಾರ್, ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ ಎಸ್.ಎನ್.ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಎಸ್.ಜಯಣ್ಣ, ಹನುಮಲಿ ಷಣ್ಮುಖಪ್ಪ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.