By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
    ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
    12 hours ago
    Municipal Council
    ಚಿತ್ರದುರ್ಗಕ್ಕೆ ಐದು ದಿನ ಶಾಂತಿಸಾಗರ ನೀರು ಸ್ಥಗಿತ 
    13 hours ago
    MLC KS NAVEEN
    ಪದವೀಧರ ಕ್ಷೇತ್ರದ ಚುನಾವಣೆ | ಉಸ್ತುವಾರಿಗಳಾಗಿ ಕೆ.ಎಸ್.ನವೀನ್, ರಘು ಚಂದನ್ ನೇಮಕ
    13 hours ago
    ಅರ್ಜಿ ಅಹ್ವಾನ
    ತೋಟಗಾರಿಕೆ ಬೆಳೆಗಳಿಗೆ ಸಹಾಯಧನ | ಅರ್ಜಿ ಆಹ್ವಾನ
    21 hours ago
    ವಾರ್ಷಿಕ ಮಹಾಸಭೆ ಮತ್ತು ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಮಾಲತೇಶ್ ಮುದ್ದಜ್ಜಿ ಮಾತನಾಡಿದರು
    ಸರ್ಕಾರಿ ನೌಕರರ ಸಂಘಕ್ಕೆ ಜಿಲ್ಲಾಡಳಿತದಿಂದ 2 ಎಕರೆ ಜಮೀನು | ಭವ್ಯ ನೌಕರ ಭವನ ನಿರ್ಮಾಣಕ್ಕೆ ಯೋಜನೆ | ಮಾಲತೇಶ್ ಮುದ್ದಜ್ಜಿ
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 days ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    1 week ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    1 week ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    2 weeks ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    12 hours ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 day ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    3 days ago
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
    1 hour ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 06 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಕೈಗೊಂಡ ಕೆಲಸದಲ್ಲಿ ಯಶಸ್ಸು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 05 | ಉದ್ಯೋಗಿಗಳಿಗೆ ಅಧಿಕಾರಿಗಳ ಬೆಂಬಲ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 04 | ವೃತ್ತಿಪರ ವ್ಯವಹಾರಗಳಲ್ಲಿ ಲಾಭ, ದೂರ ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 05 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 days ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    1 week ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    5 days ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    5 days ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    4 weeks ago
  • Life Style
    Life StyleShow More
    Purple seed powder
    ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
    6 minutes ago
    rose water
    ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
    1 hour ago
    Apply beetroot to your hair
    ಕೂದಲಿಗೆ ಬೀಟ್‌ರೂಟ್ ಹಚ್ಚಿ ಈ ಅದ್ಭುತ ಪ್ರಯೋಜನಗಳನ್ನು ಪಡೆಯಿರಿ
    1 day ago
    eat mango during pregnancy
    ಗರ್ಭಾವಸ್ಥೆಯಲ್ಲಿ ಮಾವು ತಿನ್ನುವುದು ಸುರಕ್ಷಿತವೇ? 
    1 day ago
    mango or mango fruit
    ಮಾವಿನ ಕಾಯಿ ಮತ್ತು ಮಾವಿನ ಹಣ್ಣಿನಲ್ಲಿ ಯಾವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ?
    2 days ago
Reading: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ | ಸಚಿವ ಮಧು ಬಂಗಾರಪ್ಪ ನೂತನ ಶಾಲಾ ಕೊಠಡಿ ಉದ್ಘಾಟನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ | ಸಚಿವ ಮಧು ಬಂಗಾರಪ್ಪ ನೂತನ ಶಾಲಾ ಕೊಠಡಿ ಉದ್ಘಾಟನೆ

News Desk Chitradurga News
Last updated: 16 August 2025 18:40
News Desk Chitradurga News
10 months ago
Share
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ |ಸಚಿವ ಮಧು ಬಂಗಾರಪ್ಪ ನೂತನ ಶಾಲಾ ಕೊಠಡಿ ಉದ್ಘಾಟನೆ
SHARE

CHITRADURGA NEWS | 16 AUGUST 2025

ಚಿತ್ರದುರ್ಗ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಕೇವಲ ಸರ್ಕಾರದ ಕರ್ತವ್ಯ ಮಾತ್ರವಲ್ಲದೇ, ಸಾರ್ವಜನಿಕರು, ಗ್ರಾಮಸ್ಥರು, ಶಾಲೆಯಲ್ಲಿ ಓದಿ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವೈಯಕ್ತಿಕ ಕರ್ತವ್ಯವೂ ಹೌದು. ಶಿಕ್ಷಣಕ್ಕೆ ಒತ್ತು ನೀಡುವುದು ಸಾರ್ವಜನಿಕರ ಸಾಮಾಜಿಕ ಜವಾಬ್ದಾರಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು.

ಇದನ್ನೂ ಓದಿ: ಕಬೀರಾನಂದಾಶ್ರಮದಲ್ಲಿ ಕೃಷ್ಣ ಜನ್ಮಾಷ್ಠಮಿ | ಕೃಷ್ಣ, ರಾಧೆ ವೇಷ ಧರಿಸಿ ಮಿಂಚಿದ ಪುಟಾಣಿ ಮಕ್ಕಳು

ಹಿರಿಯೂರು ತಾಲ್ಲೂಕಿನ ತಾಳವಟ್ಟಿ ಗ್ರಾಮದಲ್ಲಿ ಶನಿವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಹಾಗೂ ನೂತನ ಶಾಲಾ ಕೊಠಡಿ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಶತಮಾನ ಪೂರೈಸಿರುವ ತಾಳವಟ್ಟಿ ಸರ್ಕಾರಿ ಶಾಲೆಗೆ ಹಳೆಯ ವಿದ್ಯಾರ್ಥಿಗಳ ನೆರವು ಹಾಗೂ ದಾನಿಗಳ ಸಹಾಯದಿಂದ ಉತ್ತಮ ಕಾಯಕಲ್ಪ ನೀಡಿದ್ದು, ಶಿಕ್ಷಣಕ್ಕೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

17 ಸಾವಿರ ಶಿಕ್ಷಕ ನೇಮಕಕ್ಕೆ ಕ್ರಮ: 

ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ ತಕ್ಷಣವೇ ಶಾಲಾ ಶಿಕ್ಷಣ ಇಲಾಖೆಗೆ 17 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮವಹಿಸಲಾಗುವುದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು.

ಇದನ್ನೂ ಓದಿ: ಉತ್ತಮ ಅರೋಗ್ಯವಂತರೆ ಶ್ರೀಮಂತರು | MLC ಕೆ.ಎಸ್.ನವೀನ್

ರಾಜ್ಯದಲ್ಲಿ 17 ಸಾವಿರ ಶಿಕ್ಷಕ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಅನುಮೋದನೆ ನೀಡಿದ್ದು, ಈ ಬಾರಿಯ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಹೆಚ್ಚಿನ ಕಾಲಾವಧಿಯನ್ನು ತೆಗೆದುಕೊಳ್ಳದೇ ಕೇವಲ 3 ರಿಂದ 4 ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ನಡೆಸಿ, ಶಾಲೆಗಳಿಗೆ ಶಿಕ್ಷಕರನ್ನು ನಿಯೋಜನೆ ಮಾಡಲಾಗುವುದು ಎಂದು ಹೇಳಿದರು.

ರಾಜ್ಯ ಶಿಕ್ಷಣ ನೀತಿ (ಎಸ್‍ಇಪಿ) ಕರಡು ವರದಿ ಸಲ್ಲಿಸಲಾಗಿದ್ದು, ಅದರಲ್ಲಿರುವ ನ್ಯೂನತೆಗಳನ್ನು ಪರಿಶೀಲನೆ ನಡೆಸಲು ಉಪ ಸಮಿತಿ ರಚನೆ ಮಾಡಿ, ನಂತರ ಅಂತಿಮವಾಗಿ ಅನುಷ್ಠಾನ ಮಾಡಲಾಗುವುದು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಒಪ್ಪುವುದಿಲ್ಲ ಎಂದು ಸಚಿವರು ತಿಳಿಸಿದರು.  

ರಾಜ್ಯದಲ್ಲಿ ಪ್ರಸ್ತುತ 307 ಕರ್ನಾಟಕ ಪಬ್ಲಿಕ್ ಶಾಲೆಗಳು (ಕೆಪಿಎಸ್) ಕಾರ್ಯನಿರ್ವಹಿಸುತ್ತಿದ್ದು, ಈ ವರ್ಷವೇ ರಾಜ್ಯ ಸರ್ಕಾರ ವತಿಯಿಂದ 500 ಕೆಪಿಎಸ್ ಶಾಲೆಗಳನ್ನು 15 ದಿನದೊಳಗಾಗಿ ಘೋಷಣೆ ಮಾಡಲಾಗುವುದು. ಇದರ ಜೊತೆಗೆ ಹೈದರಬಾದ್ ಕರ್ನಾಟಕದಲ್ಲಿ ಅಕ್ಷರ ಅವಿಷ್ಕಾರ ವತಿಯಿಂದ 100 ಕೆಪಿಎಸ್ ಶಾಲೆಗಳು ಸೇರಿದಂತೆ ಒಟ್ಟು 600 ಕೆಪಿಎಸ್ ಶಾಲೆಗಳು ಕಾರ್ಯಾರಂಭ ಮಾಡಲಿದೆ. 

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 16 | ಹತ್ತಿ ರೇಟ್ ಎಷ್ಟಿದೆ? 

ಒಂದು ಕೆಪಿಎಸ್ ಶಾಲೆಯಲ್ಲಿ 1200 ಮಕ್ಕಳು ಉತ್ತಮ ವಾತಾವರಣದಲ್ಲಿ ವ್ಯಾಸಂಗ ಮಾಡಬಹುದಾಗಿದ್ದು, ಖಾಸಗಿ ಶಾಲೆಗಳಿಗಿಂತ ಉತ್ತಮವಾದ ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ದೊರೆಯಲಿದೆ ಎಂದು ಹೇಳಿದರು.

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ನಕಲು ತಡೆಗಟ್ಟುವ ನಿಟ್ಟಿನಲ್ಲಿ ವೆಬ್‍ಕಾಸ್ಟಿಂಗ್ ವ್ಯವಸ್ಥೆ ಜಾರಿಗೊಳಿಸಿದ್ದು, ಮಕ್ಕಳು ಸ್ವಂತ ಶಕ್ತಿ, ಸಾಮಾಥ್ರ್ಯದ ಮೇಲೆ ಉತ್ತೀರ್ಣರಾಗುವ ವ್ಯವಸ್ಥೆಗಾಗಿ ಪರೀಕ್ಷೆ-1, ಪರೀಕ್ಷೆ-2, ಪರೀಕ್ಷೆ-3 ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಮಾತನಾಡಿ, ತಾಳವಟ್ಟಿ ಗ್ರಾಮದಲ್ಲಿ ವಿಶೇಷವಾದ ಸಂಭ್ರಮ. ಗ್ರಾಮದ ಹಿರಿಯರು ಸೇರಿ ಸುಮಾರು ರೂ.1 ಕೋಟಿ ಹಾಗೂ ಸರ್ಕಾರದಿಂದ ರೂ.25 ಲಕ್ಷ ವೆಚ್ಚ ಮಾಡಿ ಶತಮಾನೋತ್ಸವ ಶಾಲಾ ಕಟ್ಟಡ ಉದ್ಘಾಟನೆ ಮಾಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆಯಾದ ಪ್ರತಿಭಾವಂತ ಶಿಕ್ಷಕರಿದ್ದು, ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಹಾಲು, ಮೊಟ್ಟೆ, ಸಮಸ್ತ್ರ, ಶೂ ಸೇರಿದಂತೆ ಹಲವಾರು ಸೌಲಭ್ಯಗಳೊಂದಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ ಎಂದು ಹೇಳಿದರು.

ಹಿರಿಯೂರು ವಿಧಾನ ಕ್ಷೇತ್ರದಲ್ಲಿ ಸುಮಾರು 250 ಶಾಲಾ ತರಗತಿ ಕೊಠಡಿಗಳು, 100ಕ್ಕೂ ಹೆಚ್ಚು ಶೌಚಾಲಯ ಹಾಗೂ ಕಾಂಪೌಂಡ್‍ಗಳನ್ನು ನಿರ್ಮಾಣಕ್ಕಾಗಿ ರೂ.30 ಕೋಟಿ ವೆಚ್ಚದಲ್ಲಿ ಯೋಜನೆ ಸಿದ್ದಪಡಿಸಲಾಗಿದ್ದು, ಶೀಘ್ರದಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದಲೇ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ ಅವರು, ಸಾರ್ವಜನಿಕ ಪಾಲುಗಾರಿಕೆಯಿಂದ ಶಾಲೆಗಳ ಅಭಿವೃದ್ಧಿಯಾಗಲಿದೆ. ಗ್ರಾಮಸ್ಥರ ಮನವಿಯಂತೆ ಐಮಂಗಲ ಹೋಬಳಿಯ ವ್ಯಾಪ್ತಿಯಲ್ಲಿ ಸುಮಾರು 4 ಎಕರೆ ವಿಸ್ತೀರ್ಣದಲ್ಲಿ ಕ್ರೀಡಾಂಗಣ ನಿರ್ಮಿಸಲು ಕ್ರಮವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಇದನ್ನೂ ಓದಿ: ಹೊಳಲ್ಕೆರೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ | ಟಾಪರ್ ವಿದ್ಯಾರ್ಥಿಗಳಿಗೆ ಶಾಸಕ ಎಂ.ಚಂದ್ರಪ್ಪ ಬಹುಮಾನ ವಿತರಣೆ

ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ತಾಳವಟ್ಟಿ ಶಾಲೆ ಅನೇಕ ಹಿರಿಯರಿಗೆ ಶಿಕ್ಷಣ ಕೊಡುವುದರಲ್ಲಿ 100 ವರ್ಷಗಳ ದೊಡ್ಡ ಯಶಸ್ಸು ಕಂಡಿದೆ. ಯಶಸ್ವಿನ ಪ್ರತಿಫಲವಾಗಿ ಶತಮಾನೋತ್ಸವ ಆಚರಣೆ ಮಾಡಿ ಮಾದರಿ ಶಾಲೆಯನ್ನಾಗಿ ರೂಪಿಸಲಾಗಿದೆ ಎಂದು ತಿಳಿಸಿದ ಅವರು, ತಾಳವಟ್ಟಿ ಸರ್ಕಾರಿ ಶಾಲೆಯ ಅಭಿವೃದ್ಧಿ ಸಂಪೂರ್ಣ ಸಹಕಾರ ಹಾಗೂ ಅಗತ್ಯ ಅನುದಾನವನ್ನೂ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಶಾಲಾ ಶಿಕ್ಷಣ ಉಪನಿರ್ದೇಶಕರಾದ ಎಂ.ಆರ್.ಮಂಜುನಾಥ್, ನಾಸಿರುದ್ದೀನ್, ತಹಶೀಲ್ದಾರ್ ಸಿದ್ದೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿ, ಶಾಲಾ ಪುನಃಶ್ಚೇತನ ಮತ್ತು ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಡಾ. ವಿ.ವೀರಭದ್ರಯ್ಯ, ಗೌರವಾಧ್ಯಕ್ಷ ಎ.ಚಂದ್ರಾರೆಡ್ಡಿ, ಕಾರ್ಯಾಧ್ಯಕ್ಷ ಜಲೀಲ್ ಸಾಬ್, ವಿಶ್ವ ಮಾನವ ಸಾಂಸ್ಕøತಿಕ ಮತ್ತು ವಿದ್ಯಾಸಂಸ್ಥೆ ಕಾರ್ಯದರ್ಶಿ ಎಂ.ನೀಲಕಂಠದೇವ, ಸಮಿತಿಯ ಲಕ್ಷ್ಮಿಕಾಂತ್ ಸೇರಿದಂತೆ ಮತ್ತಿತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CentenaryChitradurgaChitradurga newsGovernment SchoolMinister Madhu BangarappaNew School Roomಚಿತ್ರದುರ್ಗಚಿತ್ರದುರ್ಗ ನ್ಯೂಸ್ನೂತನ ಶಾಲಾ ಕೊಠಡಿಶತಮಾನೋತ್ಸವಸಚಿವ ಮಧು ಬಂಗಾರಪ್ಪಸರ್ಕಾರಿ ಶಾಲೆ
Share This Article
Facebook Email Print
Previous Article ಕಬೀರಾನಂದಾಶ್ರಮದಲ್ಲಿ ಕೃಷ್ಣ ಜನ್ಮಾಷ್ಠಮಿ | ಕೃಷ್ಣ, ರಾಧೆ ವೇಷ ಧರಿಸಿ ಮಿಂಚಿದ ಪುಟಾಣಿ ಮಕ್ಕಳು
Next Article ಕಂದಾಯ ಗ್ರಾಮ ಮಾನ್ಯತೆ | ಮನೆಗಳಿಗೆ ಹಕ್ಕುಪತ್ರ ವಿತರಣೆ | ADC ಬಿ.ಟಿ.ಕುಮಾರಸ್ವಾಮಿ
Leave a Comment

Leave a Reply Cancel reply

Your email address will not be published. Required fields are marked *

Purple seed powder
ಖಾಲಿ ಹೊಟ್ಟೆಯಲ್ಲಿ ನೇರಳೆ ಬೀಜದ ಪುಡಿಯನ್ನು ಉಗುರು ಬೆಚ್ಚಗಿನ ನೀರಿನೊಂದಿಗೆ ಕುಡಿದರೆ ಏನಾಗುತ್ತದೆ ಗೊತ್ತಾ?
Life Style
ದಿನ ಭವಿಷ್ಯ
ದಿನ ಭವಿಷ್ಯ | ಜೂನ್ 07 | ಪ್ರಯಾಣದಲ್ಲಿ ಅಡೆತಡೆಗಳು, ಆರೋಗ್ಯದ ಕಡೆ ಜಾಗೃತಿ ವಹಿಸಿ
Dina Bhavishya
rose water
ರೋಸ್ ವಾಟರ್ ಬೆರೆಸಿದ ನೀರಿನಲ್ಲಿ ಸ್ನಾನ ಮಾಡಿದರೆ ಈ ಪ್ರಯೋಜನ ಪಡೆಯಬಹುದು
Life Style
ಮುಸ್ಲೀಂ ಸಮುದಾಯದಿಂದ ಪ್ರತಿಭಟನೆ
ಜಮೀರ್‌ ಅಹಮ್ಮದ್‌ ಅವರಿಗೆ ಡಿಸಿಎಂ ಸ್ಥಾನಕ್ಕೆ ಒತ್ತಾಯ | ಮುಸ್ಲೀಂ ಮುಖಂಡರಿಂದ ಪ್ರತಿಭಟನೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up