CHITRADURGA NEWS | 10 JUNE 2026
ಚಿತ್ರದುರ್ಗ: ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಯಶಸ್ವಿಯಾಗಿ 12 ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಬುಧವಾರ ಚಿತ್ರದುರ್ಗ ಬಿಜೆಪಿ ನಗರ ಮಂಡಲ ವತಿಯಿಂದ ಶ್ರೀ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನರೇಂದ್ರ ಮೋದಿಜೀಯವರ ಹೆಸರಿನಲ್ಲಿ ವಿಶೇಷ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಇದನ್ನೂ ಓದಿ: ಶಾಸಕ ಟಿ.ರಘುಮೂರ್ತಿ ಜನ್ಮದಿನಾಚರಣೆ | ಬೃಹತ್ ರಕ್ತದಾನ ಶಿಬಿರ
ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಜೀಯವರು ಸತತವಾಗಿ ಅತಿ ಹೆಚ್ಚು ಅವಧಿಗೆ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಮಂತ್ರಿ ಎಂಬ ವಿಶಿಷ್ಟ ಗೌರವಕ್ಕೆ ಪಾತ್ರರಾಗಿದ್ದಾರೆ. ನರೇಂದ್ರ ಮೋದಿಯವರು ದೇಶದ ಪ್ರಧಾನ ಮಂತ್ರಿಗಳಾಗಿ 12 ವರ್ಷವಾಗಿದೆ, ನೆಹರುರವರಿಗಿಂತ ಹೆಚ್ಚಿನ ದಿನದಲ್ಲಿ ದೇಶದ ಪ್ರಧಾನ ಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದಾರೆ.
ಭಗವಂತ ಮೋದಿಯವರಿಗೆ ಆರೋಗ್ಯ ಮತ್ತು ಆಯಷ್ಯನ್ನು ನೀಡುವುದರ ಮೂಲಕ ದೇಶದ ಸೇವೆಯಲ್ಲಿ ಮತ್ತಷ್ಟು ಭಾಗಿಯಾಗಲಿ. ಮೋದಿ ನೇತೃತ್ವದ ಸರ್ಕಾರ ಕಳೆದ 12 ವರ್ಷಗಳ ಅವಧಿಯು ದೇಶದ ಜನರ ನಂಬಿಕೆ, ಅಭಿವೃದ್ಧಿ ಮತ್ತು ಜನ ಕಲ್ಯಾಣಕ್ಕೆ ಸಮರ್ಪಿತವಾಗಿದೆ. 140 ಕೋಟಿ ದೇಶವಾಸಿಗಳ ಆಶೀರ್ವಾದ ಮತ್ತು ರಾಷ್ಟ್ರ ಪ್ರಥಮ ಎಂಬ ಭಾವನೆಯೊಂದಿಗೆ, ಸರ್ಕಾರವು ಯುವಕರು, ಮಹಿಳೆಯರು, ರೈತರು ಮತ್ತು ಬಡವರ ಸಬಲೀಕರಣಕ್ಕಾಗಿ ನಿರಂತರವಾಗಿ ಶ್ರಮಿಸಿದೆ. ಇದರ ಫಲವಾಗಿ ಇಂದು ಭಾರತವು ಜಾಗತಿಕ ಮಟ್ಟದಲ್ಲಿ ಹೊಸ ಗುರುತನ್ನು ಪಡೆದುಕೊಂಡಿದೆ.
ಕೇಂದ್ರ ಸರ್ಕಾರವೂ ಕಳೆದ 12 ವರ್ಷಗಳು ನಂಬಿಕೆ, ಪ್ರಗತಿ ಮತ್ತು ಜನಕಲ್ಯಾಣಕ್ಕಾಗಿ ಮುಡಿಪಾಗಿವೆ. ಬಡವರ ಕಲ್ಯಾಣ, ನಾರಿ ಶಕ್ತಿ, ರಾಷ್ಟ್ರ ನಿರ್ಮಾಣ, ಯುವ ಶಕ್ತಿ, ಆರೋಗ್ಯ, ರಾಷ್ಟ್ರ ಪ್ರಥಮ, ರೈತರ ಕಲ್ಯಾಣ, ಮಧ್ಯಮ ವರ್ಗ ಹಾಗೂ ಪರಂಪರೆ ಮತ್ತು ಅಭಿವೃದ್ಧಿ ಆಧಾರಿತ ಸಾಧನೆಗಳನ್ನು ಮುನ್ನೆಲೆಗೆ ತರಲಾಗಿದೆ ಎಂದರು.
ಇದನ್ನೂ ಓದಿ: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ದೊರೆಯಲಿ | ಮಠಾಧೀಶರ ಕೂಗು
ಜನಕಲ್ಯಾಣಕ್ಕೆ ಮೊದಲ ಆದ್ಯತೆ ನೀಡಿರುವ ಸರ್ಕಾರ, ಪ್ರತಿ ತಿಂಗಳು 81 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರ (ರೇಷನ್) ನೀಡುತ್ತಿದೆ. ಇದರೊಂದಿಗೆ 4 ಕೋಟಿಗೂ ಹೆಚ್ಚು ಪ್ರಧಾನಮಂತ್ರಿ ಆವಾಸ್ ಮನೆಗಳು, 10.5 ಕೋಟಿಗೂ ಅಧಿಕ ಉಜ್ವಲ ಗ್ಯಾಸ್ ಸಂಪರ್ಕಗಳು ಮತ್ತು 12 ಕೋಟಿ ಶೌಚಾಲಯಗಳನ್ನು ನಿರ್ಮಿಸುವ ಮೂಲಕ ಕೋಟ್ಯಂತರ ಕುಟುಂಬಗಳ ಜೀವನವನ್ನು ಸುಗಮಗೊಳಿಸಲಾಗಿದೆ.
ಮಹಿಳಾ ಸಬಲೀಕರಣದ ಅಡಿಯಲ್ಲಿ 32 ಕೋಟಿಗೂ ಹೆಚ್ಚು ಮಹಿಳೆಯರ ಜನ-ಧನ್ ಖಾತೆಗಳನ್ನು ತೆರೆಯಲಾಗಿದೆ. ಮಹಿಳೆಯರಿಗೆ ಸೇನೆಯಲ್ಲಿ ಕಾಯಂ ಕಮಿಷನ್ ಪಡೆಯುವ ಅವಕಾಶ ಸಿಕ್ಕಿದೆ. ದೇಶದಲ್ಲಿ 3 ಕೋಟಿಗೂ ಹೆಚ್ಚು ಮಹಿಳೆ ಯರು `ಲಖಪತಿ ದೀದಿ’ಯರಾಗಿದ್ದಾರೆ. ಅಲ್ಲದೆ, 91 ಲಕ್ಷಕ್ಕೂ ಹೆಚ್ಚು ಸ್ವಸಹಾಯ ಸಂಘಗಳ ಮೂಲಕ 10 ಕೋಟಿ ಗ್ರಾಮೀಣ ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸಿದ್ದಾರೆ ಎಂದು ತಿಳಿಸಿದರು.
ಮಾಜಿ ಶಾಸಕ ಎಸ್.ಕೆ.ಬಸವರಾಜು ಮಾತನಾಡಿ, ದೇಶದ 26 ನಗರಗಳಲ್ಲಿ 1,100 ಕಿಲೋಮೀಟರ್ ಗಿಂತಲೂ ಹೆಚ್ಚು ಮೆಟ್ರೋ ನೆಟ್‍ವರ್ಕ್ ಅಭಿವೃದ್ಧಿಪಡಿಸಲಾಗಿದೆ. ಸದ್ಯ ದೇಶದಲ್ಲಿ 164 ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ. ಅಟಲ್ ಸೇತು, ಸುದರ್ಶನ್ ಸೇತು, ಚೆನಾಬ್ ರೈಲ್ವೆ ಸೇತುವೆ, ಬೋಗಿಬೀಲ್ ಸೇತುವೆ ಮತ್ತು ಪಂಬನ್ ಕಡಲ ಸೇತುವೆಯಂತಹ ಬೃಹತ್ ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ.
ಇದನ್ನೂ ಓದಿ: ಕೃಷಿ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ದೇಶದಲ್ಲಿದ್ದ ವಿಮಾನ ನಿಲ್ದಾಣಗಳ ಸಂಖ್ಯೆ 74 ರಿಂದ 164 ಕ್ಕೆ ಏರಿಕೆಯಾಗಿದೆ. ಯುವಕರಿಗಾಗಿ ಸುಮಾರು 2 ಕೋಟಿ ಜನರಿಗೆ ಕೌಶಲ್ಯ ತರಬೇತಿ ನೀಡಲಾಗಿದೆ. ಮುದ್ರಾ ಯೋಜನೆಯಡಿ 40 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಸಾಲ ವಿತರಿಸಲಾಗಿದೆ. ದೇಶದಲ್ಲಿ 2.2 ಲಕ್ಷಕ್ಕೂ ಹೆಚ್ಚು ಸ್ಟಾರ್ಟ್‍ಅಪ್‍ಗಳು ಮತ್ತು 10 ಸಾವಿರಕ್ಕೂ ಹೆಚ್ಚು ಅಟಲ್ ಟಿಂಕರಿಂಗ್ ಲ್ಯಾಬ್‍ಗಳು ಹೊಸ ಆವಿಷ್ಕಾರಗಳಿಗೆ ದಾರಿದೀಪವಾಗಿವೆ ಎಂದರು.
ರೈತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜನ್, ಬಿಜೆಪಿ ದಾವಣಗೆರೆ ಸಹಾ-ಪ್ರಭಾರಿಗಳಾದ ಎ.ಮುರಳಿ, ಜಿಲ್ಲಾ ಪ್ರಧಾನಕಾರ್ಯದರ್ಶಿ ಗಳಾದ ಟಿ.ವೆಂಕಟೇಶ್ ಯಾದವ್ ಮೊಹನ್ ಕುಮಾರ್ ಜಿ.ಹೆಚ್, ಎಸ್.ಸಿ. ಮೋರ್ಚಾ ಜಿಲ್ಲಾಧ್ಯಕ್ಷರಾದ ಪರಶುರಾಮ್, ನಗರ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಬಸವೇಶ್ ಮತ್ತು ಲೀಲಾ ಶಶಿಧರ್,ರಾಜ್ಯ ಮಹಿಳಾ ಮೋರ್ಚ ಪದಾಧಿಕಾರಿಗಳಾದ ಶ್ಯಾಮಲ ಶಿವಪ್ರಕಾಶ್ ಜಿ, ಜಿಲ್ಲಾ ಉಪಾಧ್ಯಕ್ಷರಾದ ಶೈಲಜಾರೆಡ್ಡಿ , ಜಿಲ್ಲಾ ಮಾಧ್ಯಮ ವಕ್ತಾರರಾದ ನಾಗರಾಜ್ ಬೇದ್ರೇ, ನವೀನ್ ಚಾಲುಕ್ಯ ಸೇರಿದಂತೆ ಮುಖಂಡರಾದ ತಿಪ್ಪೇಸ್ವಾಮಿ, ಹರೀಶ್ ಬಿ.ಎಸ್, ಸತೀಶ್, ಮಾರುತಿ, ಮಂಜುಳಮ್ಮ, ಶಾಂತಮ್ಮ ,ವೀಣಾ, ಸುಮ, ಯಶೋದ, ಕಮಲಮ್ಮ, ಅರುಣ, ಬಸಮ್ಮ, ದೇವಿಕಾ, ಚಂದ್ರಿಕಾ ಲೋಕನಾಥ್,ನಗರಮಂಡಲದ ಪದಾಧಿಕಾರಿಗಳು, ಮೋರ್ಚಾ ಅಧ್ಯಕ್ಷರು, ಮೋರ್ಚಾ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದರು.
ನಂತರ ಸಿಹಿಯನ್ನು ಹಂಚುವುದರ ಮೂಲಕ 12 ವರ್ಷದ ಸಂಭ್ರಮಾಚಾರಣೆ ಮಾಡಲಾಯಿತು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
