CHITRADURGA NEWS | 05 JULY 2026
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಪೂರ್ಣಗೊಳ್ಳಬೇಕಾದರೆ ಕೇಂದ್ರ ಸರ್ಕಾರ ಘೋಷಿಸಿರುವ 5,300 ಕೋಟಿ ಅನುದಾನ ಬಿಡುಗಡೆಯಾಗಬೇಕು ಎಂದು ಶಾಸಕ ಟಿ.ರಘುಮೂರ್ತಿ ಸಭೆಯಲ್ಲಿ ಮಾತನಾಡಿದರು.
ಇದನ್ನೂ ಓದಿ: ಬರ ನಿರ್ವಹಣೆಗೆ ಜಿಲ್ಲೆಯ ಜಿಲ್ಲಾಧಿಕಾರಿಗಳ ಖಾತೆಗೆ ತಲಾ 5 ಕೋಟಿ ಬಿಡುಗಡೆ | ಡಾ.ಜಿ.ಪರಮೇಶ್ವರ್
ಈ ನಿಟ್ಟಿನಲ್ಲಿ ನಮ್ಮ ಜಿಲ್ಲೆಯ ಸಂಸದರು ಕೇಂದ್ರದ ಮೇಲೆ ಒತ್ತಡ ತಂದು ಹಣ ಬಿಡುಗಡೆ ಮಾಡಿಸಬೇಕು. ಈಗಾಗಲೇ ಒಟ್ಟು 23,000 ಕೋಟಿ ರೂಪಾಯಿಗಳ ಯೋಜನೆಯಲ್ಲಿ ರಾಜ್ಯ ಸರ್ಕಾರ ತನ್ನ ಪಾಲಿನ 11,500 ಕೋಟಿ ರೂಪಾಯಿಗಳನ್ನು ಭರಿಸಿ ಚಿತ್ರದುರ್ಗ ಬ್ರಾಂಚ್ ಕೆನಾಲ್ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಿದೆ.
ಚಿತ್ರದುರ್ಗ ಜಿಲ್ಲೆ ಯಾವಾಗಲೂ ಬರಗಾಲ ಪೀಡಿತ ಪ್ರದೇಶವಾಗಿದ್ದು, ಕೇಂದ್ರದ ಅನುದಾನ ಬಂದರೆ ಈ ಯೋಜನೆ ಸಂಪೂರ್ಣಗೊ0ಡು ಜಿಲ್ಲೆಯ ಬರಡಾದ ಭೂಮಿಗೆ ಕಾಯಕಲ್ಪ ಸಿಗಲಿದೆ ಎಂದು ರಘುಮೂರ್ತಿ ಅವರು ಸಭೆಯಲ್ಲಿ ತಿಳಿಸಿದರು.
ಚಳ್ಳಕೆರೆ ತಾಲೂಕು ಕೂಡ ತುಂಗಭದ್ರಾ ನೀರಾವರಿ ಯೋಜನೆಗೆ ಒಳಪಡುತ್ತದೆ. ಯೋಜನೆಯ ಬಹುತೇಕ ಕೆಲಸಗಳು ಪೂರ್ಣಗೊಂಡು, ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಕೆಲಸವೂ ಆಗಿತ್ತು. ಆದರೆ, ಇತ್ತೀಚೆಗೆ ವಿದ್ಯುತ್ ಬಿಲ್ ಪಾವತಿಸದ ಕಾರಣ ಮೆಗಾ ಇಂಜಿನಿಯರಿ0ಗ್ ಸಂಸ್ಥೆಯವರು ಅಲ್ಲಿನ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ.
ಇದನ್ನೂ ಓದಿ: DCC ಬ್ಯಾಂಕ್ | ಬೆಳೆಸಾಲ ಮನ್ನಾ ಮಾಡುವಂತೆ ಸಂಸದ ಗೋವಿಂದ ಕಾರಜೋಳ ಮನವಿ
ಈ ವಿಷಯ ಈಗಾಗಲೇ ಆಡಿಟ್ ಇಲಾಖೆಯ ಗಮನದಲ್ಲೂ ಇದೆ. ಮಳೆ ಕೈಕೊಟ್ಟಿರುವ ಇಂತಹ ಸಂದರ್ಭದಲ್ಲಿ ಇದು ಮುಂದೆ ದೊಡ್ಡ ಸಮಸ್ಯೆಯಾಗಲಿದ್ದು, ಅಧಿಕಾರಿಗಳು ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು.
ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ, ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ. ಆದರೆ, ತೀವ್ರ ನೀರಿನ ಅಭಾವವಿರುವ ಗ್ರಾಮಗಳಲ್ಲಿ ಹೊಸದಾಗಿ ಬೋರ್‌ವೆಲ್ ಕೊರೆಸಲು ಅವಕಾಶ ಮಾಡಿಕೊಡಬೇಕು ಹಿಂದಿನ ವರ್ಷಗಳಲ್ಲಿ ಬೋರ್‌ವೆಲ್ ಕೊರೆಸಿದ ಬಿಲ್‌ಗಳ ಪಾವತಿ ಅನುದಾನ ನೀಡಬೇಕು ಎಂದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
