
CHITRADURGA NEWS | 22 JULY 2025
ಚಿತ್ರದುರ್ಗ: ಚಿತ್ರದುರ್ಗ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪ್ರಥಮ ಬಾರಿಗೆ ಮಧ್ಯ ಕರ್ನಾಟಕ ಕಾವ್ಯ ಸಂಭ್ರಮ ಎನ್ನುವ ವಿಶೇಷ ಕಾರ್ಯಕ್ರಮ ನಗರದ ಬಾಪೂಜಿ ಕಾಲೇಜಿನ ಸಭಾಂಗಣದಲ್ಲಿ ಜು.27 ರಂದು ಆಯೋಜಿಸಿದೆ.
ಇದನ್ನೂ ಓದಿ: ಮಗಳು ನಾಪತ್ತೆ | ತಂದೆ ಆತ್ಮಹತ್ಯೆ | ಪೋಕ್ಸೋ ಕೇಸ್ ದಾಖಲಿಸದ ಪೊಲೀಸರ ವಿರುದ್ಧ ಆಕ್ರೋಶ

ಮಧ್ಯ ಕರ್ನಾಟಕ ಜಿಲ್ಲೆಗಳ ಕವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಚಿಕ್ಕಮಗಳೂರು-ದಾವಣಗೆರೆ-ಚಿತ್ರದುರ್ಗ ಜಿಲ್ಲೆಗಳ ಕನ್ನಡ ಸಾಹಿತ್ಯ ಪರಿಷತ್ ಘಟಕಗಳ ಸಹಯೋಗದಲ್ಲಿ ಈ ಕಾರ್ಯಕ್ರಮ ರೂಪಿಸಲಾಗಿದೆ. ಪ್ರತಿ ಜಿಲ್ಲೆಯಿಂದ 12 ಕವಿಗಳು ಕಾವ್ಯ ಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಚಿತ್ರದುರ್ಗದ ಕಲಾ ಕಾಲೇಜು ಪ್ರಾಚಾರ್ಯ ಡಾ.ಜೆ.ಕರಿಯಪ್ಪ ಮಾಳಿಗೆ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ.
ಇದನ್ನೂ ಓದಿ: ಕಾರ್ಮಿಕ ಇಲಾಖೆಯಲ್ಲಿ ಅವ್ಯವಹಾರ | ಸಿಬಿಐ ತನಿಖೆಗೆ MLC ಕೆ.ಎಸ್. ನವೀನ್ ಒತ್ತಾಯ
ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ವೀರೇಶ್, ಚಿಕ್ಕಮಗಳೂರು ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್, ದಾವಣಗೆರೆ ಕಸಾಪ ಅಧ್ಯಕ್ಷ ವಾಮದೇವಪ್ಪ, ಸೇರಿದಂತೆ ಮಧ್ಯಕರ್ನಾಟಕದ ಪ್ರಮುಖ ಕವಿಗಳು, ಕಸಾಪ ಪದಾಧಿಕಾರಿಗಳು ಕಾವ್ಯ ಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಸಕ್ತರುವ ಭಾಗವಹಿಸುವಂತೆ ಕಸಾಪ ಅಧ್ಯಕ್ಷರು ಕೆ.ಎಂ.ಶಿವಸ್ವಾಮಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
