
CHITRADURGA NEWS | 24 MAY 2025
ಚಿತ್ರದುರ್ಗ: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ 2025 ರ ಸಿಇಟಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಎಸ್.ಎಲ್.ವಿ ಪದವಿ ಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ ಲಭಿಸಿದೆ.
Also Read: ಸಿಇಟಿ ಫಲಿತಾಂಶ | ಡಾನ್‌ಬಾಸ್ಕೊ ಕಾಲೇಜಿನ ಮಾರುತಿ ರಾಜ್ಯಕ್ಕೆ 6ನೇ ರ್ಯಾಂಕ್

ಇಂಜಿನಿಯರಿಂಗ್ ವಿಭಾಗದಲ್ಲಿ ಜಿ.ಎಂ.ಚೇತನ್, ಆರ್.ಸೃಷ್ಟಿ, ಎ.ಹರ್ಷಿತ, ಜಿ.ಎಸ್.ಭುವನ ಸೇರಿದಂತೆ ಇತರ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ.
ಬಿ.ಎಸ್ಸಿ ಅಗ್ರಿಕಲ್ಚರ್ ವಿಭಾಗದಲ್ಲಿ ಸಂತೋಷ್ ಕುಮಾರ್ 729ನೇ ರ‍್ಯಾಂಕ್, ವೆಟೆನರಿ ಸೈನ್ಸ್ ಅಲ್ಲಿ ಉತ್ತಮವಾದ ರ‍್ಯಾಂಕ್ ಪಡೆದಿದ್ದು, ವಿ.ಸಂಧ್ಯಾ, ಎಂ.ಭಾವನ ಉತ್ತಮ ಫಲಿತಾಂಶವನ್ನು ಪಡೆದಿದ್ದಾರೆ.
Also Read: ಮಾದಾರ ಚನ್ನಯ್ಯ ಶ್ರೀಗಳಿಗೆ ಸಾಮರಸ್ಯ ಪುರಸ್ಕಾರ | ಕೋಟಾ ಶ್ರೀನಿವಾಸ ಪೂಜಾರಿ ಲೇಖನ
ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ದೇವರಾಜ್ ಅರಸು ಶಿಕ್ಷಣ ಸಂಸ್ಥೆಯ ಸಿ.ಇ.ಓ ಎಂ.ಸಿ. ರಘು ಚಂದನ್, ಆಡಳಿತ ಅಧಿಕಾರಿ ಹೆಚ್.ಚಂದ್ರಕಲಾ, ಪ್ರಾಂಶುಪಾಲರಾದ ಯು.ಕೇಶವಮೂರ್ತಿ ಅಭಿನಂದಿಸಿದ್ದು, ಮುಂದಿನ ಶಿಕ್ಷಣಕ್ಕೆ ಶುಭ ಕೋರಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
