
CHITRADURGA NEWS | 08 SEPTEMBER 2025
ಚಿತ್ರದುರ್ಗ: ಚಿತ್ರದುರ್ಗ ನಗರದ ಜಿಲ್ಲಾಸ್ಪತ್ರೆ ವೈದ್ಯಕೀಯ ಕಾಲೇಜಿನೊಂದಿಗೆ ಸೇರ್ಪಡೆಯಾಗಿದೆ ಈ ಹಿನ್ನಲೆಯಲ್ಲಿ ಚಳ್ಳಕೆರೆ ತಾಲ್ಲೂಕು ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆ ಎಂದು ಮೇಲ್ದರ್ಜೆಗೆ ಏರಿಸಬೇಕು ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ಇದನ್ನೂ ಓದಿ: SSLC ಪರೀಕ್ಷೆಯಲ್ಲಿ ಕಳಪೆ ಫಲಿತಾಂಶ ದಾಖಲಿಸಿದ ಶಾಲೆಗಳಿಗೆ ನೋಟೀಸ್ ನೀಡಿ | ಸಚಿವ ಡಿ.ಸುಧಾಕರ್
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,
ಪ್ರಸಕ್ತ ವರ್ಷದಲ್ಲಿ ಕೌನ್ಸಲಿಂಗ್ ಮೂಲಕ ವರ್ಗಾವಣೆಯಾದ ನಂತರ ಚಳ್ಳಕೆರೆ ಹಾಗೂ ಪರುಶುರಾಂಪುರ ಆಸ್ಪತ್ರೆಯಲ್ಲಿ ತಜ್ಞ ವೈದ್ಯರ ಕೊರತೆ ಕಾಡುತ್ತಿದೆ. ಇಲ್ಲಿಂದ ವರ್ಗಾವಣೆಯಾದವರ ಸ್ಥಾನಕ್ಕೆ ಬೇರೆಯಡೆಯಿಂದ ವೈದ್ಯರು ಆಗಮಿಸಿಲ್ಲ. ಕೂಡಲೇ ವೈದ್ಯರ ನಿಯೋಜನೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕ್ರಮ ಕೈಗೊಳ್ಳಬೇಕು. ವಾಸ್ತವ ಸ್ಥಿತಿಯನ್ನು ಆರೋಗ್ಯ ಸಚಿವರು ಹಾಗೂ ಸರ್ಕಾರದ ಗಮನಕ್ಕೆ ತರಬೇಕು ಎಂದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
