By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅರ್ಜಿ ಅಹ್ವಾನ
    ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ
    9 hours ago
    ವಾಲ್ಮೀಕಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ | ಅಕ್ಟೋಬರ್ 17 ಕೊನೆಯ ದಿನ
    9 hours ago
    ಗೌರಸಂದ್ರ ಮಾರಮ್ಮ
    ಸೆ.25ರಿಂದ ಗೌರಸಂದ್ರ ಮಾರಮ್ಮ ದೇವಿ ಜಾತ್ರಾ ಮಹೋತ್ಸವ
    9 hours ago
    ಶಿವಕುಮಾರ ಶ್ರೀಗಳ ಶ್ರದ್ಧಾಂಜಲಿಗೆ ಭಾವೈಕ್ಯತೆಯ ದಾಸೋಹ | ಗೌರಮ್ಮನಹಳ್ಳಿ ಮುಸ್ಲಿಂ ಬಾಂಧವರಿಂದ ತರಕಾರಿ ಸಮರ್ಪಣೆ
    10 hours ago
    ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಪ್ರತಿಭಟನೆ
    ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವಂತೆ ಪ್ರತಿಭಟನೆ
    22 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 23 | ಹಠಾತ್ ಆರ್ಥಿಕ ಲಾಭ, ಶ್ರಮಕ್ಕೆ ತಕ್ಕ ಪ್ರತಿಫಲ
    10 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 22 | ಉದ್ಯೋಗದಲ್ಲಿ ಬಡ್ತಿ, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 21 | ಮನೆಯಲ್ಲಿ ಶುಭ ಕಾರ್ಯಗಳು, ಬಾಲ್ಯದ ಗೆಳೆಯರ ಭೇಟಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 20 | ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ, ಧನಲಾಭದ ಸೂಚನೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 19 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 23 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 22 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 21 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    2 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 18 | ಮೆಕ್ಕೆಜೋಳ, ಸೂರ್ಯಕಾಂತಿ, ಶೇಂಗಾ ರೇಟ್…
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    3 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 months ago
  • Life Style
    Life StyleShow More
    blackheads
    ಬ್ಲ್ಯಾಕ್ ಹೆಡ್ಸ್ ತೆಗೆದುಹಾಕಲು ಈ ಮನೆಮದ್ದುಗಳನ್ನು ಬಳಸಿ
    9 hours ago
    dry fruits are best for babies
    ಶಿಶುಗಳಿಗೆ ಯಾವ ಡ್ರೈಫ್ರೂಟ್ಸ್ ಉತ್ತಮ? ತಿಳಿಯಿರಿ
    10 hours ago
    Drink this water to increase collagen
    ಕಾಲಜನ್ ಹೆಚ್ಚಿಸಲು ಈ ನೀರನ್ನು ಕುಡಿಯಿರಿ
    1 day ago
    coriander water is for hair
    ಕೊತ್ತಂಬರಿ ನೀರು ಕೂದಲಿಗೆ ಎಷ್ಟು ಪ್ರಯೋಜನಕಾರಿ ಗೊತ್ತಾ?
    1 day ago
    Pumpkin flower
    ಕುಂಬಳಕಾಯಿ ಹೂವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಈ ಪ್ರಯೋಜನ ಪಡೆಯಿರಿ
    2 days ago
Reading: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ದೊರೆಯಲಿ | ಮಠಾಧೀಶರ ಕೂಗು 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ ದೊರೆಯಲಿ | ಮಠಾಧೀಶರ ಕೂಗು 

News Desk Chitradurga News
Last updated: 10 June 2026 19:32
News Desk Chitradurga News
3 months ago
Share
ಶಾಸಕ ಟಿ.ರಘುಮೂರ್ತಿ ಜನ್ಮ ದಿನಾಚರಣೆಯಲ್ಲಿ ಮಠಾಧೀಶರು ಭಾಗೀ
ಶಾಸಕ ಟಿ.ರಘುಮೂರ್ತಿ ಜನ್ಮ ದಿನಾಚರಣೆಯಲ್ಲಿ ಮಠಾಧೀಶರು ಭಾಗೀ
SHARE

CHITRADURGA NEWS | 10 JUNE 2026

ಚಳ್ಳಕೆರೆ: ತಾಲ್ಲೂಕಿನಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳು ಜಿಲ್ಲಾ ಕೇಂದ್ರವನ್ನು ಮೀರಿಸುವಂತಿದ್ದು, ಕ್ಷೇತ್ರದ ಸರ್ವಾಂಗೀಣ ಪ್ರಗತಿ ಕಣ್ಣಿಗೆ ಕಟ್ಟುವಂತೆ ಕಾಣಿಸುತ್ತಿದೆ ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಅವರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ: ಕೃಷಿ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

ಚಳ್ಳಕೆರೆಯಲ್ಲಿ ನಡೆದ ಶಾಸಕ ಟಿ. ರಘುಮೂರ್ತಿ ಅವರ ಜನ್ಮದಿನೋತ್ಸವದಲ್ಲಿ ಕಾರ್ಯವೈಖರಿ ಹಾಗೂ ತಾಲ್ಲೂಕಿನ ಪ್ರಗತಿಯ ಕುರಿತು ಮಾತನಾಡಿದ ಶ್ರೀಗಳು, ಚಳ್ಳಕೆರೆ ಕ್ಷೇತ್ರದ ಅಭಿವೃದ್ಧಿಯ ಚಿತ್ರಣವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

ಇಲ್ಲಿನ ಅಭಿವೃದ್ಧಿ ಕುರಿತು ಕೇವಲ ಅಕ್ಷರಗಳು ಅಥವಾ ಮಾತುಗಳು ಮಾತನಾಡುತ್ತಿಲ್ಲ; ಬದಲಿಗೆ ಇಲ್ಲಿ ನಿರ್ಮಾಣಗೊಂಡಿರುವ ಭವ್ಯ ಕಟ್ಟಡಗಳು, ಗುಣಮಟ್ಟದ ರಸ್ತೆಗಳು, ಅಭಿವೃದ್ಧಿಗೊಂಡಿರುವ ಜಲಮೂಲಗಳು, ಕಲ್ಪಿಸಲಾಗಿರುವ ಮೂಲಭೂತ ಸೌಕರ್ಯಗಳು, ಸುಸಜ್ಜಿತ ಸಮುದಾಯ ಭವನಗಳು ಹಾಗೂ ಹಸಿರಿನಿಂದ ಕಂಗೊಳಿಸುತ್ತಿರುವ ಗಿಡ-ಮರ-ಬಳ್ಳಿಗಳೇ ಇಲ್ಲಿನ ನೈಜ ಬೆಳವಣಿಗೆಯನ್ನು ಸಾರುತ್ತಿವೆ ಎಂದು ಜಗದ್ಗುರುಗಳು ಅಭಿಪ್ರಾಯಪಟ್ಟರು.

ಕ್ಷೇತ್ರದಲ್ಲಿ ಭೌತಿಕ ಮೂಲಸೌಕರ್ಯಗಳ ಜೊತೆಗೆ ಪರಿಸರ ಕಾಳಜಿಗೂ ಆದ್ಯತೆ ನೀಡಿ, ಹಸಿರೀಕರಣಕ್ಕೆ ಒತ್ತು ಕೊಟ್ಟಿರುವುದು ತಾಲ್ಲೂಕಿನ ಸುಸ್ಥಿರ ಬೆಳವಣಿಗೆಗೆ ಸಾಕ್ಷಿಯಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?

ಕುಂಚಿಟಿಗ ಮಹಾಸಂಸ್ಥಾನ ಮಠದ ಶ್ರೀ ಶಾಂತವೀರ ಸ್ವಾಮೀಜಿ ಮಾತನಾಡಿ, ಅಭಿವೃದ್ಧಿ ಕೆಲಸಗಳಲ್ಲಿ ಅಪಾರ ದಕ್ಷತೆ ಹೊಂದಿರುವ, ಸೌಜನ್ಯ ಹಾಗೂ ಸರಳ ಸಜ್ಜನಿಕೆಯ ಸಾಕಾರ ಮೂರ್ತಿಯಾಗಿರುವ ನಾಯಕರು ಚಳ್ಳಕೆರೆ ಶಾಸಕ ರಘುಮೂರ್ತಿ ಎಂದು ಬಣ್ಣಿಸಿದರು.

ಅವರು ಕೇವಲ ರಾಜಕಾರಣಿಯಲ್ಲ, ಹಠಗಾರ, ಛಲಗಾರ ಹಾಗೂ ಸದಾ ಹಸನ್ಮುಖಿಯಾಗಿರುವ ಅಪರೂಪದ ವ್ಯಕ್ತಿತ್ವದವರು. ಸದಾ ಸುಖಿಯಾಗಿರುತ್ತಾ ಜನರ ಕಷ್ಟಗಳಿಗೆ ಸ್ಪಂದಿಸುವ ಗುಣ ಅವರಲ್ಲಿದೆ. ಛಲದ ಬಿಡದ ವ್ಯಕ್ತಿತ್ವ. ಸ್ವತಃ ಇಂಜಿನಿಯರ್ ಆಗಿರುವುದರಿಂದ ತಾಂತ್ರಿಕ ಜ್ಞಾನ ಅವರಲ್ಲಿದೆ. 

ಹೀಗಾಗಿಯೇ ಕ್ಷೇತ್ರದ ಪ್ರತಿ ಅಭಿವೃದ್ಧಿ ಹಂತಗಳಲ್ಲೂ ಅವರು ಅತ್ಯಂತ ದಕ್ಷತೆ ಹಾಗೂ ಪಾರದರ್ಶಕತೆಯನ್ನು ತುಂಬಿದ್ದಾರೆ. ತಮ್ಮ ಸರಳ ಸಜ್ಜನಿಕೆಯಿಂದ ಇಡೀ ಜಿಲ್ಲೆಗೆ ಮಾದರಿ ರಾಜಕಾರಣಿಯಾಗಿದ್ದಾರೆ. ಇಂತಹ ನಾಯಕರಿಗೆ ಸಚಿವ ಸ್ಥಾನ ಸಿಕ್ಕರೆ ಇನ್ನಷ್ಟು ಜನಪರ ಕೆಲಸಗಳು ಸಾಧ್ಯವಾಗುತ್ತವೆ. ಅವರಿಗೆ ಉನ್ನತ ಜವಾಬ್ದಾರಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ, ಎಂದು ಶ್ರೀಗಳು ಹರಸಿದರು.

ಇದನ್ನೂ ಓದಿ: ಟಿ.ರಘುಮೂರ್ತಿಗೆ ಬರ್ತ್‌ ಡೇ ಗಿಫ್ಟ್‌ ಕೊಡ್ತಾರಾ ಡಿಕೆಶಿ ..?!

ಭಗೀರಥ ಗುರುಪೀಠದ ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ಮಾತನಾಡಿ, ಕ್ಷೇತ್ರದ ಅಜಾತಶತ್ರು, ಅಭಿವೃದ್ಧಿಯ ಹರಿಕಾರರಾದ ಶಾಸಕ ಟಿ.ರಘುಮೂರ್ತಿ ಅವರಿಗೆ ಜನಪರ ಕಾರ್ಯಗಳನ್ನು ಇನ್ನಷ್ಟು ಹೆಚ್ಚಾಗಿ ಮಾಡಲು ಭಗವಂತನು ಹೆಚ್ಚಿನ ಶಕ್ತಿ ನೀಡಲಿ. ಅವರಿಗೆ ಶೀಘ್ರದಲ್ಲೇ ಸಚಿವ ಭಾಗ್ಯ ದೊರೆಯಲಿ ಎಂದು ಆಶೀರ್ವದಿಸಿದರು. 

ಎಲ್ಲರನ್ನೂ ಸಮಾನವಾಗಿ ಕಾಣುವ ಅಜಾತಶತ್ರು ಮತ್ತು ಸದಾ ಹಸನ್ಮುಖಿ ನಾಯಕ. ಜನರ ಸಂಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಗುಣ ಅವರಲ್ಲಿದೆ. ಕ್ಷೇತ್ರದಾದ್ಯಂತ ಶೈಕ್ಷಣಿಕ ಸುಧಾರಣೆ ತರುವಲ್ಲಿ ಮತ್ತು ಮೂಲಸೌಕರ್ಯಗಳನ್ನು ಕಲ್ಪಿಸುವಲ್ಲಿ ಅವರು ಶ್ರಮಿಸುತ್ತಿದ್ದಾರೆ. ಅವರೊಬ್ಬ ನಿಜವಾದ ಅಭಿವೃದ್ಧಿ ಹರಿಕಾರ ಹಾಗೂ ಶೈಕ್ಷಣಿಕ ಸುಧಾರಕ. 

ಬರಡಾಗಿದ್ದ ಚಳ್ಳಕೆರೆ ಕ್ಷೇತ್ರಕ್ಕೆ ನೀರಾವರಿ ಯೋಜನೆಗಳನ್ನು ತರುವ ಮೂಲಕ ರೈತರ ಬಾಳಿಗೆ ಬೆಳಕಾಗಿದ್ದಾರೆ. ಇಂತಹ ಜನಪರ ನಾಯಕನಿಗೆ ರಾಜ್ಯ ಮಟ್ಟದಲ್ಲಿ ಉನ್ನತ ಜವಾಬ್ದಾರಿ ಸಿಗಬೇಕು. ಅವರಿಗೆ ಸಚಿವ ಸ್ಥಾನ ಒದಗಿ ಬರಲಿ ಎಂದು ಹಾರೈಸುತ್ತೇನೆ,” ಎಂದರು.

ಕನಕಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ ಮಾತನಾಡಿ, ಕ್ಷೇತ್ರದ ಯಾವುದೇ ಒಂದು ವರ್ಗ ಅಥವಾ ಪ್ರದೇಶಕ್ಕೆ ಸೀಮಿತವಾಗದೆ, ಎಲ್ಲಾ ರಂಗಗಳಲ್ಲೂ ಸಮಾನವಾಗಿ ಸರ್ವಾಂಗೀಣ ಅಭಿವೃದ್ಧಿ ಮಾಡುತ್ತಿರುವ ಶಾಸಕರ ಕಾರ್ಯವೈಖರಿ ಶ್ಲಾಘನೀಯ. ಕ್ಷೇತ್ರದ ಪ್ರಗತಿಗಾಗಿ ಶ್ರಮಿಸುತ್ತಿರುವ ಇಂತಹ ದಕ್ಷ ನಾಯಕರಿಗೆ ರಾಜ್ಯ ಮಟ್ಟದಲ್ಲಿ ದೊಡ್ಡ ಜವಾಬ್ದಾರಿ ಸಿಗಬೇಕಿದೆ. ಅವರಿಗೆ ಸಚಿವ ಸ್ಥಾನ ದೊರೆತರೆ ಕ್ಷೇತ್ರದ ಜೊತೆಗೆ ಇಡೀ ಜಿಲ್ಲೆಯ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗಲಿದೆ. ಅವರ ಜನಸೇವೆ ಹೀಗೆಯೇ ಮುಂದುವರಿಯಲಿ. ಶಾಸಕರಿಗೆ ಸಚಿವ ಭಾಗ್ಯ ಕೂಡಿಬರಲಿ ಭಗವಂತನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸುತ್ತೇನೆ ಎಂದು ಹರಸಿದರು.

ಇದನ್ನೂ ಓದಿ: ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ | ಅರ್ಜಿ ಆಹ್ವಾನ

ಯಾದವ ಗುರುಪೀಠದ ಜಗದ್ಗುರು ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಮಾತನಾಡಿ, ಶಾಸಕ ರಘುಮೂರ್ತಿ ಅವರು ಕೇವಲ ಹೆಸರಿಗಷ್ಟೇ ಮೂರ್ತಿಯಲ್ಲ, ಸದಾ ಹಸನ್ಮುಖಿಯಾಗಿ ಜನರನ್ನು ಬರಮಾಡಿಕೊಳ್ಳುವ ಚಳ್ಳಕೆರೆಯ ‘ನಗುಮೂರ್ತಿ’. ಅವರ ಸೌಮ್ಯ ಸ್ವಭಾವವೇ ಕ್ಷೇತ್ರದ ಜನರನ್ನು ಅವರತ್ತ ಸೆಳೆಯುತ್ತದೆ. ಕ್ಷೇತ್ರದ ಪ್ರತಿಯೊಂದು ವರ್ಗದ, ಪ್ರತಿಯೊಬ್ಬ ಬಡವನ ಕಷ್ಟ ಸುಖಗಳಿಗೆ ಸ್ಪಂದಿಸುವ ಅಪಾರ ಜನಪರ ಕಾಳಜಿ ಅವರಿಗಿದೆ. 

ಜನರ ಕಣ್ಣೀರು ಒರೆಸುವ ಕೆಲಸವನ್ನು ಅವರು ನಿರಂತರವಾಗಿ ಮಾಡುತ್ತಾ ಬಂದಿದ್ದಾರೆ. ಚಳ್ಳಕೆರೆ ಕ್ಷೇತ್ರವನ್ನು ಪ್ರಗತಿಯ ಪಥದಲ್ಲಿ ಮುನ್ನಡೆಸುತ್ತಿರುವ ಅವರು, ಪ್ರತಿಯೊಂದು ಹಳ್ಳಿಗೂ ಮೂಲಸೌಕರ್ಯಗಳನ್ನು ತಲುಪಿಸುವ ಮೂಲಕ ಅಭಿವೃದ್ಧಿಯ ಹರಿಕಾರ ಎನಿಸಿಕೊಂಡಿದ್ದಾರೆ. ಇಂತಹ ನಾಯಕನಿಗೆ ಭಗವಂತನು ಇನ್ನಷ್ಟು ಉನ್ನತ ಸ್ಥಾನಮಾನಗಳನ್ನು ನೀಡಿ ಹರಸಲಿ ಎಂದು ಶ್ರೀಗಳು ಶುಭ ಹಾರೈಸಿದರು.

ಇದನ್ನೂ ಓದಿ: ಜೂನ್ ತಿಂಗಳ ಪಡಿತರ ಅಕ್ಕಿ ಬಿಡುಗಡೆ

ಸಮಾರಂಭದಲ್ಲಿ ಶ್ರೀ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀವಾಲ್ಮೀಕಿ ಪ್ರಸನ್ನಾನಂದಪುರಿ ಮಹಾಸ್ವಾಮಿಗಳು, ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಮಡಿವಾಳ ಗುರುಪೀಠದ ಜಗದ್ಗುರು ಬಸವ ಮಾಚಿದೇವ ಸ್ವಾಮೀಜಿ, ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಜಗದ್ಗುರು ಶ್ರೀ ರೇಣುಕಾನಂದ ಮಹಾಸ್ವಾಮಿಗಳು, ಶ್ರೀ ಕುಂಬಾರ ಗುಂಡಯ್ಯ ಗುರುಪೀಠದ ಜಗದ್ಗುರು ಶ್ರೀ ಬಸವ ಕುಂಬಾರಗುಂಡಯ್ಯಾ ಮಹಾಸ್ವಾಮಿಗಳು, ಶ್ರೀ ಹಡಪದ ಗುರುಪೀಠದ ಜಗದ್ಗುರು ಶ್ರೀ ಅನ್ನಧಾನಿ ಭಾರತೀ ಅಪ್ಪಣ್ಣ ಮಹಾಸ್ವಾಮಿಗಳು, ಮೇದಾರ ಗುರುಪೀಠದ ಕೇತೇಶ್ವರ ಸ್ವಾಮೀಜಿ, ಹಾವೇರಿಯ ಶಾಂತಲಿಂಗ ಸ್ವಾಮೀಜಿ, ಬೀದರ ಶಿವಾನಂದ ಸ್ವಾಮೀಜಿ, ತಿಳುವಳ್ಳಿಯ ನಿರಂಜನ ಸ್ವಾಮೀಜಿ, ಕೊಲ್ಲಾಪುರದ ಕಿರಣ ಸ್ವಾಮೀಜಿ, ಬೆಳಗಾವಿಯ ಜಯದೇವ ಸ್ವಾಮೀಜಿ, ಬಂಜಾರ ಸಮುದಾಯದ ನಂದಮಸಂದ ಸ್ವಾಮೀಜಿ ಸಮ್ಮುಖ ವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Birthday CelebrationChitradurgaChitradurga newsMLA T. Raghumurthyಚಿತ್ರದುರ್ಗಚಿತ್ರದುರ್ಗ ನ್ಯೂಸ್ಜನ್ಮದಿನಾಚರಣೆಶಾಸಕ ಟಿ.ರಘುಮೂರ್ತಿ
Share This Article
Facebook Email Print
Previous Article ಅರ್ಜಿ ಅಹ್ವಾನ ಕೃಷಿ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
Next Article ಶಾಸಕ ಟಿ.ರಘುಮೂರ್ತಿ ಜನ್ಮದಿನಾಚರಣೆ | ಬೃಹತ್ ರಕ್ತದಾನ ಶಿಬಿರ ಶಾಸಕ ಟಿ.ರಘುಮೂರ್ತಿ ಜನ್ಮದಿನಾಚರಣೆ | ಬೃಹತ್ ರಕ್ತದಾನ ಶಿಬಿರ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 23 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
blackheads
ಬ್ಲ್ಯಾಕ್ ಹೆಡ್ಸ್ ತೆಗೆದುಹಾಕಲು ಈ ಮನೆಮದ್ದುಗಳನ್ನು ಬಳಸಿ
Life Style
ಅರ್ಜಿ ಅಹ್ವಾನ
ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ವಾಲ್ಮೀಕಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ | ಅಕ್ಟೋಬರ್ 17 ಕೊನೆಯ ದಿನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up