
CHITRADURGA NEWS | 10 JANUARY 2026
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿನ HPPC ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ಬಿ.ಎ. ಓದುತ್ತಿರುವ NCC ವಿಧ್ಯಾರ್ಥಿ ಕೆ.ತೇಜ ಜನವರಿ 26 ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪಂಥ ಸಂಚಲನಕ್ಕೆ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಕಲಬುರಗಿ TO ಚಿತ್ರದುರ್ಗಕ್ಕೆ A/C ಸ್ಲೀಪರ್ ಬಸ್ ಕಾರ್ಯಾಚರಣೆ

ಕೆ.ತೇಜ ಮೂಲತಃ ಬಿ.ಜೆ.ಕೆರೆ ಗ್ರಾಮದ ಕರಿಬಸಪ್ಪ ಹಾಗೂ ಈರಮ್ಮ ದಂಪತಿಗಳ ಸುಪುತ್ರರಾಗಿದ್ದು, ಕರ್ನಾಟಕ ಮತ್ತು ಗೋವಾ ಡೈರೆಕ್ಟರೆಟ್ ದಾವಣಗೆರೆ ಬಟಾಲಿಯನ್ ವ್ಯಾಪ್ತಿಯಲ್ಲಿ ಬರುವ ಈ ಕಾಲೇಜಿನಿಂದ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೆಡ್‍ಗೆ ಈ ಬಾರಿ ಆಯ್ಕೆಯಾಗಿರುತ್ತಾರೆ.
ಇದಕ್ಕೂ ಮೊದಲು 8 ಕ್ಯಾಂಪ್‍ಗಳಲ್ಲಿ ಆಯ್ಕೆಯಾಗಿ ಕೊನೆಯದಾಗಿ ದೆಹಲಿಗೆ ಆಯ್ಕೆಯಾಗಿರುತ್ತಾರೆ.
ಇದನ್ನೂ ಓದಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ | ಮಹಿಳಾ ವಿಚಾರಗೋಷ್ಠಿ | ಡಾ.ಜ್ಯೋತಿ ಶರತ್ ಭಾಗೀ
ಕಾಲೇಜಿಗೆ ಹಾಗೂ ಚಳ್ಳಕೆರೆ ತಾಲ್ಲೂಕಿಗೆ ಹೆಮ್ಮೆಯ ವಿಷಯ ಎಂದು ವಿಧ್ಯಾರ್ಥಿಯ ಮಾರ್ಗದರ್ಶಕರು ಮತ್ತು NCC ಅಧಿಕಾರಿಗಳಾದ ಕ್ಯಾಪ್ಟನ್ ಡಾ.ಸ.ರಾ.ಲೇಪಾಕ್ಷ ಹಾಗೂ ಡಾ.ಎಮ್.ಕೆ.ದೇವಪ್ಪ ತಿಳಿಸಿರುತ್ತಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
