ಹಿಂದೂ ಮಹಾಗಣಪತಿ ಶೋಭಾಯಾತ್ರೆ | ಸಂಚಾರಿ ಮಾರ್ಗಗಳ ಬದಲಾವಣೆ ಮಾಡಿ ಡಿಸಿ ಆದೇಶ

ಚಿತ್ರದುರ್ಗ ನ್ಯೂಸ್.ಕಾಂ: ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಅ.8 ಭಾನುವಾರ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಗರದ ಮುಖ್ಯ ರಸ್ತೆಗಳ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶ ಹೊರಡಿಸಿದ್ದಾರೆ.

ಚಿತ್ರದುರ್ಗ ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಿಂದ ಪ್ರತಿಷ್ಠಾಪಿಸಲ್ಪಟ್ಟಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಕಾರ್ಯಕ್ರಮ ಅಕ್ಟೋಬರ್ 08 ರಂದು ನಡೆಯಲಿದ್ದು, ಸಾರ್ವಜನಿಕ ಸಂಚಾರ ಸುಗಮಗೊಳಿಸುವ ದೃಷ್ಟಿಯಿಂದ ಅ.8 ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆವರೆಗೆ ನಗರದ ಮುಖ್ಯರಸ್ತೆ ಮತ್ತು ಇತರೆ ರಸ್ತೆಗಳಲ್ಲಿ ಸಂಚರಿಸಲಿರುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಆದೇಶಿಸಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಭರ್ಜರಿ ಬೈಕ್ ರ್ಯಾಲಿ

ವಿಸರ್ಜನಾ ಮೆರವಣಿಗೆಯು ನಗರದಲ್ಲಿನ ಮುಖ್ಯ ರಸ್ತೆಯಾದ ಬಿ.ಡಿ.ರಸ್ತೆಯಲ್ಲಿ ಸಾಗಿ ಹೊಳಲ್ಕೆರೆ ರಸ್ತೆ ಮುಖಾಂತರ ಸಾಗಲಿದ್ದು, ಈ ವಿಸರ್ಜನಾ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಸುಗಮ ಸಂಚಾರದ ಹಿತದೃಷ್ಟಿಯಿಂದ ಚಿತ್ರದುರ್ಗ ನಗರದಲ್ಲಿ ಸಂಚರಿಸಲಿರುವ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಆದೇಶ ಮಾಡಲಾಗಿದೆ.

ಮಾರ್ಗ ಬದಲಾವಣೆ ವಿವರ:

ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್‍ನಿಂದ ಮಹಾತ್ಮ ಗಾಂಧಿ ವೃತ್ತ, ಹೊಳಲ್ಕೆರೆ ಮಾರ್ಗದ ಕಣಿವೆ ಕ್ರಾಸ್‍ವರೆಗೆ ಎಲ್ಲಾ ಮಾದರಿಯ ವಾಹನಗಳ ಸಂಚಾರ ನಿಷೇಧಿಸಿದೆ.

ಬೆಂಗಳೂರು, ಚಳ್ಳಕರೆ, ಹೊಸಪೇಟೆ, ದಾವಣಗೆರೆ, ಶಿವಮೊಗ್ಗ ಹಾಗೂ ಭೀಮಸಮುದ್ರ ಕಡೆಯಿಂದ ಬರುವ ಎಲ್ಲಾ ಮಾದರಿಯ ಲಘು ಮತ್ತು ಭಾರಿ ವಾಹನಗಳು ಹಾಗೂ ಖಾಸಗಿ ಮತ್ತು ಕೆಎಸ್‍ಆರ್‍ಟಿಸಿ ಬಸ್ಸುಗಳು ಎನ್.ಹೆಚ್-48 ರಸ್ತೆಯ ಮುಖಾಂತರ ಬಂದು ನಗರದ ಮೆದೇಹಳ್ಳಿ ರಸ್ತೆ ಮತ್ತು ಜೆಎಂಐಟಿ ವೃತ್ತದ ಮುಖಾಂತರ ನಗರಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸ್ ಸಂಚರಿಸುವುದು.

ಮದ್ಯ ಮಾರಾಟ ನಿಷೇಧ:

ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಸಂಬಂಧ ಅಕ್ಟೋಬರ್ 08 ರಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಚಿತ್ರದುರ್ಗ ನಗರ ಮತ್ತು ಸುತ್ತಮುತ್ತಲಿನ 10 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಆದೇಶ ಹೊರಡಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version