CHITRADURGA NEWS | 20 AUGUST 2026
ಚಿತ್ರದುರ್ಗ: ದೇಶದ ಗಮನ ಸೆಳೆದಿರುವ ಚಿತ್ರದುರ್ಗದ ಹಿಂದೂ ಮಹಾಗಣಪತಿ ಉತ್ಸವದ ಸಿದ್ಧತೆಗಳು ಪ್ರಾರಂಭವಾಗಿವೆ. ಈ ಬಾರಿ ಗಣಪತಿ ಪ್ರತಿಷ್ಠಾಪನೆ ಮಾಡುವ ಸ್ಥಳದಲ್ಲಿ ಬದಲಾವಣೆ ಮಾಡಲಾಗಿದೆ.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಮಹೋತ್ಸವ ಸಮಿತಿಗೆ ಹೊಸ ಅಧ್ಯಕ್ಷರ ಆಯ್ಕೆ
ಈವರೆಗೆ ಬಿ.ಡಿ.ರಸ್ತೆಯ ಜೈನ ಸಮಾಜದ ಜೈನ ಧಾಮದಲ್ಲಿ ಪ್ರತಿಷ್ಠಾಪನೆ ಮಾಡಲಾಗುತ್ತಿತ್ತು. ಆದರೆ, ಈಗ ಅಲ್ಲಿಂದ ಸ್ವಲ್ಪ ಮುಂದಿರುವ ಜಗದ್ಗುರು ಮುರುಘರಾಜೇಂದ್ರ ಕ್ರೀಡಾಂಗಣ(ಸೈನ್ಸ್ ಕಾಲೇಜು ಮೈದಾನ)ದಲ್ಲಿ ಪ್ರತಿಷ್ಠಾಪನೆ ಮಾಡಲು ತೀರ್ಮಾನಿಸಲಾಗಿದೆ.
ವಿಎಚ್‌ಪಿ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಜೈನ ಧಾಮದಲ್ಲಿ ಗೋವುಗಳು ಹಾಗೂ ಬೀದಿ ನಾಯಿಗಳ ಚಿಕಿತ್ಸೆಗೆ ಸಂಬಂಧಿಸಿದ ಫೌಂಡೇಶನ್ ಜಾಗ ಪಡೆದಿರುವುದರಿಂದ ಜಾಗದ ಅಭಾವ ಉಂಟಾಗಬಹುದು ಎಂಬ ಕಾರಣಕ್ಕೆ ಈ ಬದಲಾವಣೆ ಮಾಡಲಾಗಿದೆ. ಈಗಾಗಲೇ ಸಂಬಂಧಪಟ್ಟವರಿಂದ ಅನುಮತಿ ಪಡೆಯಲಾಗಿದೆ ಎಂದು ತಿಳಿಸಿದರು.
ಸೆಪ್ಟೆಂಬರ್ 14ರಂದು ಪ್ರತಿಷ್ಠಾಪನೆ:
ಹಿಂದೂ ಮಹಾಗಣಪತಿ ಸಮಿತಿಯಿಂದ ಸೆಪ್ಟಂಬರ್ 14 ರಂದು ಗಣೇಶಮೂರ್ತಿಯ ಪ್ರತಿಷ್ಠಾಪನೆ ನಡೆಯಲಿದೆ. ಅಕ್ಟೋಬರ್ 3ರಂದು ವೈಭವದ ಶೋಭಾಯಾತ್ರೆ ಮೂಲಕ ವಿಸರ್ಜನಾ ಕಾರ್ಯಕ್ರಮ ಜರುಗುವುದು ಎಂದು ಶರಣ್ ಪಂಪವೇಲ್ ತಿಳಿಸಿದರು.
ಇದನ್ನೂ ಓದಿ: ಗೌರಿ-ಗಣೇಶ ಹಬ್ಬಕ್ಕೆ ಲಿಡ್‌ಕರ್ ಚರ್ಮ ಉತ್ಪನ್ನಗಳ ಮೇಲೆ ಶೇ.20 ವಿಶೇಷ ರಿಯಾಯಿತಿ
ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಚನ್ನಕೇಶವ್ ಮಾತನಾಡಿ, ಆಗಸ್ಟ್ 26 ಬುಧವಾರ ಬೆಳಿಗ್ಗೆ 9:45 ರಿಂದ 10:30ರ ಒಳಗೆ ಗೋಪೂಜೆ ಹಾಗೂ ಧ್ವಜಪೂಜೆ ನೆರವೇರಲಿದೆ ಎಂದರು.
ಸೆಪ್ಟೆಂಬರ್ 9 ಅಥವಾ 13 (ಬುಧವಾರ/ಭಾನುವಾರ):
ಸಮಯ ಮತ್ತು ನಕ್ಷತ್ರವನ್ನು ಆಧರಿಸಿ ಹಿಂದೂ ಮಹಾ ಗಣಪತಿಯ ಪುರಪ್ರವೇಶ ಕಾರ್ಯಕ್ರಮವನ್ನು ಅಂತಿಮಗೊಳಿಸಲಾಗುವುದು.
ಸೆಪ್ಟೆಂಬರ್ 14 ಬೆಳಿಗ್ಗೆ 9:18 ರಿಂದ 10:45ರ ಶುಭ ಮುಹೂರ್ತದಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ನೆರವೇರಲಿದೆ. ಅಕ್ಟೋಬರ್ 3 ಅತ್ಯಂತ ವಿಜೃಂಭಣೆಯ ಶೋಭಾಯಾತ್ರೆ ಮತ್ತು ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ ಎಂದು ವಿವರಿಸಿದರು.
ಇದನ್ನೂ ಓದಿ: ತರಬೇತಿಯಿಂದ ಸಹಕಾರ ಸಂಘಗಳ ಆರ್ಥಿಕ ಅಭಿವೃದ್ಧಿ ಸಾಧ್ಯ
ಪ್ರಾಂತ ಸತ್ಸಂಗ ಪ್ರಮುಖ್ ಚಂದ್ರಶೇಖರ್ ಮಾತನಾಡಿ, ಚಿತ್ರದುರ್ಗ ಜಿಲ್ಲೆಯ ಕೇಂದ್ರಸ್ಥಾನ ಮಾತ್ರವಲ್ಲದೆ ಚಳ್ಳಕೆರೆ, ಹೊಳಲ್ಕೆರೆ, ಹಿರಿಯೂರು ಹಾಗೂ ಹೊಸದುರ್ಗ ಭರಮಸಾಗರ ಸೇರಿದಂತೆ ಎಲ್ಲಾ ತಾಲೂಕುಗಳಲ್ಲೂ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಸಹಯೋಗದಲ್ಲಿ ಹಿಂದೂ ಮಹಾಗಣಪತಿ ಉತ್ಸವ ನಡೆಯಲಿದೆ.
ಈ ತಾಲೂಕುಗಳ ಶೋಭಾಯಾತ್ರೆಗಳು ಚಿತ್ರದುರ್ಗದ ಮುಖ್ಯ ಶೋಭಾಯಾತ್ರೆಗಿಂತ ಮುಂಚಿತವಾಗಿಯೇ ಮುಕ್ತಾಯಗೊಳ್ಳಲಿವೆ. ದೇಶದ ಎರಡನೇ ಅತಿ ದೊಡ್ಡ ಹಿಂದೂ ಮಹಾಗಣಪತಿ ಉತ್ಸವ ಎಂದೇ ಹೆಸರು ಪಡೆದಿರುವ ಈ ಕಾರ್ಯಕ್ರಮವನ್ನು ಕಳೆದ 19 ವರ್ಷಗಳಿಂದ ಅತ್ಯಂತ ವೈಭವದಿಂದ ನಡೆಸಿಕೊಂಡು ಬರಲಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ವಿಎಚ್‌ಪಿ ಪ್ರಾಂತ ಉಪಾಧ್ಯಕ್ಷ ಡಾ.ಮಂಜುನಾಥ್, ಜಿಲ್ಲಾಧ್ಯಕ್ಷ ಷಡಕ್ಷರಪ್ಪ, ಉತ್ಸವ ಸಮಿತಿಯ ನೂತನ ಅಧ್ಯಕ್ಷ ಸುಧೀರ್ ಜಿ.ಕುಂದಾರ್ಪಿ ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

