CHITRADURGA NEWS | 17 SEPTEMBER 2026
ಚಿತ್ರದುರ್ಗ: ತುಮಕೂರು–ದಾವಣಗೆರೆ ಹೊಸ ಬ್ರಾಡ್‌ಗೇಜ್ ಮಾರ್ಗಕ್ಕೆ ಸಂಬಂಧಿಸಿದಂತೆ ತೊಳಹುಣಸೆ ಯಾರ್ಡ್‌ನಲ್ಲಿ ಸಂಪರ್ಕ ಜೋಡಣೆ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆ.21ರಿಂದ ಅ.13ರವರೆಗೆ ವಿವಿಧ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 17 | ಹತ್ತಿ ರೇಟ್ ಎಷ್ಟಿದೆ?
ಈ ಅವಧಿಯಲ್ಲಿ ಕೆಲವು ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿದ್ದು, ಕೆಲವು ರೈಲುಗಳನ್ನು ಭಾಗಶಃ ರದ್ದುಪಡಿಸಲಾಗಿದೆ. ಇನ್ನು ಕೆಲವು ರೈಲುಗಳಿಗೆ ಪರ್ಯಾಯ ಮಾರ್ಗ ಕಲ್ಪಿಸಲಾಗಿದ್ದು, ಹಲವು ರೈಲುಗಳು ಮಾರ್ಗಮಧ್ಯೆ ತಡವಾಗಿ ಸಂಚರಿಸಲಿವೆ.
ಎರಡು ರೈಲುಗಳು ಸಂಪೂರ್ಣ ರದ್ದು
ರೈಲು ಸಂಖ್ಯೆ 16214 ಎಸ್ಎಸ್ಎಸ್ ಹುಬ್ಬಳ್ಳಿ–ಅರಸೀಕೆರೆ ಡೈಲಿ ಎಕ್ಸ್‌ಪ್ರೆಸ್ ಅನ್ನು ಅ.8 ಮತ್ತು 9ರಂದು ರದ್ದುಪಡಿಸಲಾಗುತ್ತದೆ. ರೈಲು ಸಂಖ್ಯೆ 16213 ಅರಸೀಕೆರೆ–ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಎಕ್ಸ್‌ಪ್ರೆಸ್ ಅನ್ನು ಅ.9 ಮತ್ತು 10ರಂದು ರದ್ದುಪಡಿಸಲಾಗುತ್ತದೆ.
ಚಿತ್ರದುರ್ಗಕ್ಕೆ ಬರುವ ರೈಲುಗಳ ಮೇಲೂ ಪರಿಣಾಮ
ರೈಲು ಸಂಖ್ಯೆ 17347 ಎಸ್ಎಸ್ಎಸ್ ಹುಬ್ಬಳ್ಳಿ–ಚಿತ್ರದುರ್ಗ ಡೈಲಿ ಎಕ್ಸ್‌ಪ್ರೆಸ್ ಸೆ.25, 26, 27, ಅ.1, 5, 6, 11, 12 ಮತ್ತು 13ರಂದು ಹರಿಹರ–ಚಿತ್ರದುರ್ಗ ನಡುವೆ ಭಾಗಶಃ ರದ್ದಾಗಲಿದ್ದು, ಹರಿಹರದಲ್ಲೇ ಪ್ರಯಾಣ ಮುಕ್ತಾಯಗೊಳ್ಳಲಿದೆ. ಇದೇ ದಿನಗಳಲ್ಲಿ ರೈಲು ಸಂಖ್ಯೆ 17348 ಚಿತ್ರದುರ್ಗ–ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್‌ಪ್ರೆಸ್ ಚಿತ್ರದುರ್ಗದ ಬದಲಿಗೆ ಹರಿಹರದಿಂದಲೇ ತನ್ನ ನಿಗದಿತ ಸಮಯಕ್ಕೆ ಹೊರಡಲಿದೆ.
ಇದನ್ನೂ ಓದಿ: ಭೋವಿ ಯುವಕ-ಯುವತಿಯರಿಗೆ ಉಚಿತ ಟೈಲರಿಂಗ್ ತರಬೇತಿ | ಅರ್ಜಿ ಆಹ್ವಾನ
ರೈಲು ಸಂಖ್ಯೆ 12725 ಕೆಎಸ್ಆರ್ ಬೆಂಗಳೂರು–ಧಾರವಾಡ ಸಿದ್ಧಗಂಗಾ ಸೂಪರ್‌ಫಾಸ್ಟ್ ರೈಲು ಬೀರೂರು–ಧಾರವಾಡ ನಡುವೆ ಭಾಗಶಃ ರದ್ದಾಗಲಿದ್ದು, ಧಾರವಾಡದ ಬದಲಿಗೆ ಬೀರೂರಿನಲ್ಲೇ ಪ್ರಯಾಣ ಮುಕ್ತಾಯಗೊಳ್ಳಲಿದೆ. ರೈಲು ಸಂಖ್ಯೆ 12726 ಧಾರವಾಡ–ಕೆಎಸ್ಆರ್ ಬೆಂಗಳೂರು ರೈಲು ಧಾರವಾಡದ ಬದಲಿಗೆ ಬೀರೂರಿನಿಂದ ತನ್ನ ಪ್ರಯಾಣ ಆರಂಭಿಸಲಿದೆ.
ರೈಲು ಸಂಖ್ಯೆ 20676 ಮೈಸೂರು–ಬೆಳಗಾವಿ ಎಕ್ಸ್‌ಪ್ರೆಸ್ ಹಾಗೂ 20675 ಬೆಳಗಾವಿ–ಮೈಸೂರು ಎಕ್ಸ್‌ಪ್ರೆಸ್ ರೈಲುಗಳ ಸಂಚಾರವೂ ಕೆಲವು ದಿನಗಳಲ್ಲಿ ಬೀರೂರಿಗೆ ಸೀಮಿತವಾಗಲಿದೆ.
ಹಲವು ರೈಲುಗಳ ಮಾರ್ಗ ಬದಲಾವಣೆ
ಕಾಮಗಾರಿಯ ಹಿನ್ನೆಲೆಯಲ್ಲಿ 19667 ಉದಯಪುರ ಸಿಟಿ–ಮೈಸೂರು ಹಮ್ಸಫರ್, 22497 ಶ್ರೀ ಗಂಗಾನಗರ–ತಿರುಚ್ಚಿರಾಪಳ್ಳಿ ಸೂಪರ್‌ಫಾಸ್ಟ್, 17310 ವಾಸ್ಕೋ ಡ ಗಾಮ–ಯಶವಂತಪುರ, 17391 ಕೆಎಸ್ಆರ್ ಬೆಂಗಳೂರು–ಸಿಂಧನೂರು ಸೇರಿದಂತೆ ಹಲವು ರೈಲುಗಳನ್ನು ಪರ್ಯಾಯ ಮಾರ್ಗದಲ್ಲಿ ಸಂಚರಿಸಲಾಗುತ್ತದೆ. ಇದರಿಂದ ದಾವಣಗೆರೆ, ಹರಿಹರ, ಬೀರೂರು ಸೇರಿದಂತೆ ಕೆಲವು ನಿಲ್ದಾಣಗಳಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.
ಇದನ್ನೂ ಓದಿ: ಪ್ರಾಥಮಿಕ ಶಾಲಾ ಹಂತದಿಂದಲೇ ಮದ್ಯ-ಮಾದಕ ವಸ್ತುಗಳ ದುಷ್ಪರಿಣಾಮದ ಅರಿವು ಅಗತ್ಯ | ಶರಣಪ್ಪ ಸಲಾದಪುರ
ಇದೇ ರೀತಿ 56529 ಹರಿಹರ–ಹೊಸಪೇಟೆ ಹಾಗೂ 56530 ಹೊಸಪೇಟೆ–ಹರಿಹರ ಡೈಲಿ ಪ್ಯಾಸೆಂಜರ್ ರೈಲುಗಳು ಸೆ.21ರಿಂದ ಅ.13ರವರೆಗೆ ತೇಲಗಿ–ಅಮರಾವತಿ ಕಾಲೋನಿ ಮಾರ್ಗವಾಗಿ ಸಂಚರಿಸಲಿದ್ದು, ದಾವಣಗೆರೆ ಮತ್ತು ತೊಳಹುಣಸೆ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.
ರೈಲುಗಳು ತಡವಾಗಿ ಸಂಚರಿಸುವ ಸಾಧ್ಯತೆ
ಕಾಮಗಾರಿ ಹಿನ್ನೆಲೆಯಲ್ಲಿ ಹಲವು ರೈಲುಗಳನ್ನು ಮಾರ್ಗಮಧ್ಯೆ ನಿಯಂತ್ರಿಸಲಾಗುತ್ತದೆ. 17310 ವಾಸ್ಕೋ ಡ ಗಾಮ–ಯಶವಂತಪುರ ರೈಲು ಕೆಲವು ದಿನಗಳಲ್ಲಿ 90 ನಿಮಿಷ ತಡವಾಗಿ ಹೊರಡಲಿದೆ. 12777 ಎಸ್ಎಸ್ಎಸ್ ಹುಬ್ಬಳ್ಳಿ–ತಿರುವನಂತಪುರಂ ನಾರ್ತ್ ರೈಲು ಹಾಗೂ 07355 ಎಸ್ಎಸ್ಎಸ್ ಹುಬ್ಬಳ್ಳಿ–ರಾಮೇಶ್ವರಂ ವಿಶೇಷ ರೈಲು ಸೇರಿದಂತೆ ಕೆಲವು ರೈಲುಗಳು 120 ನಿಮಿಷದವರೆಗೆ ತಡವಾಗಿ ಹೊರಡಲಿವೆ.
ಇದರ ಜೊತೆಗೆ ವಂದೇ ಭಾರತ್, ಸಿದ್ಧಗಂಗಾ, ಜನಶತಾಬ್ದಿ ಸೇರಿದಂತೆ ಹಲವು ರೈಲುಗಳನ್ನು ಮಾರ್ಗಮಧ್ಯೆ 15ರಿಂದ 150 ನಿಮಿಷಗಳವರೆಗೆ ನಿಯಂತ್ರಿಸುವ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಇದನ್ನೂ ಓದಿ: ವಿ.ವಿ.ಸಾಗರದಿಂದ ಸುವರ್ಣಮುಖಿ ನದಿಗೆ ನೀರು | ಸಾರ್ವಜನಿಕರಿಗೆ ಎಚ್ಚರಿಕೆ
ತೊಳಹುಣಸೆ ನಿಲುಗಡೆಯಲ್ಲೂ ಬದಲಾವಣೆ
ಸೆ.21ರಿಂದ ಅ.13ರವರೆಗೆ ವಿವಿಧ ದಿನಗಳಲ್ಲಿ ರೈಲು ಸಂಖ್ಯೆ 16213, 16214, 17347 ಮತ್ತು 17348ಗಳಿಗೆ ತೊಳಹುಣಸೆ ನಿಲ್ದಾಣದಲ್ಲಿ ನಿಗದಿತ ನಿಲುಗಡೆ ಇರುವುದಿಲ್ಲ.
ಪ್ರಯಾಣಿಕರು ರೈಲಿನಲ್ಲಿ ಪ್ರಯಾಣಿಸುವ ಮುನ್ನ ತಮ್ಮ ರೈಲಿನ ದಿನಾಂಕ, ಮಾರ್ಗ ಹಾಗೂ ನಿಲುಗಡೆಯಲ್ಲಿ ಆಗಿರುವ ಬದಲಾವಣೆಯನ್ನು ಪರಿಶೀಲಿಸಿಕೊಂಡು ಪ್ರಯಾಣಿಸುವಂತೆ ರೈಲ್ವೆ ಇಲಾಖೆ ಸೂಚಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

