
CHITRADURGA NEWS | 24 AUGUST 2024
ಚಿತ್ರದುರ್ಗ: ಬಾಲ್ಯ ವಿವಾಹ (Child marriage) ಪ್ರಕರಣದಲ್ಲಿ ಹೊಳಲ್ಕೆರೆ ತಾಲ್ಲೂಕಿನ ಟಿ.ಎಮ್ಮಿಗನೂರು ಗ್ರಾಮದಲ್ಲಿ ವರನನ್ನು ಪೊಲೀಸರು ಬಂಧಿಸಿದ್ದಾರೆ.
ಗ್ರಾಮದ ಆರ್.ಟಿ.ರಂಗಸ್ವಾಮಿ ಎಂಬ ವ್ಯಕ್ತಿಯ ಜತೆ ಬಾಲಕಿಯ ವಿವಾಹ ಶುಕ್ರವಾರ ನಿಗದಿಯಾಗಿತ್ತು. ವಿಷಯ ತಿಳಿದ ಸಿಡಿಪಿಒ ಮಲ್ಲೇಶ್ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಕ್ಲಿಕ್ ಮಾಡಿ ಓದಿ: ಟ್ರಾಫಿಕ್ ಸ್ನಿಗಲ್ ಸಮಸ್ಯೆಗೆ ಶೀಘ್ರ ಮುಕ್ತಿ | ಎಸ್ಪಿ ರಂಜಿತ್ ಕುಮಾರ್ ಬಂಡಾರು

ಪೊಲೀಸರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಮದುವೆ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದಾಗ ಮಾಂಗಲ್ಯ ಧಾರಣೆ ಕಾರ್ಯ ಮುಗಿದಿತ್ತು. ಆಗ ಅಧಿಕಾರಿಗಳು ವಧುವಿನ ಶಾಲೆಗೆ ಭೇಟಿ ನೀಡಿ ಜನ್ಮ ದಿನಾಂಕ ಪರಿಶೀಲಿಸಿದಾಗ 17 ವರ್ಷ 2 ದಿನ ಆಗಿರುವುದು ತಿಳಿದುಬಂದಿದೆ.
ಕೂಡಲೇ ವರನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
