CHITRADURGA NEWS | 25 JANUARY 2026
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಸರ್ವರು ಸಹಕರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ತಿಳಿಸಿದರು.
ಇದನ್ನೂ ಓದಿ: ADC ಕುಮಾರಸ್ವಾಮಿ, ಶಿಕ್ಷಕಿ ಅಂಬಿಕಾ ಅವರಿಗೆ ಚುನಾವಣಾ ಆಯೋಗದ ಪ್ರಶಸ್ತಿ
ಇಲ್ಲಿನ ಒನಕೆ ಓಬವ್ವ ವೃತ್ತದಲ್ಲಿ ಆಶ್ರಿತ ಸಂಸ್ಥೆ ಚಿತ್ರದುರ್ಗ ವತಿಯಿಂದ ಬಾಲ್ಯವಿವಾಹ ನಿಷೇಧ ಜಾಗೃತಿ ರಥಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಕೆಲ ಪೋಷಕರು ಚಿಕ್ಕ ಮಕ್ಕಳಿಗೆ ಮದುವೆ ಮಾಡುವ ಪ್ರಕರಣಗಳು ಜರುಗಿವೆ ಇನ್ನು ಮುಂದೆ ಇಂತಹ ಪ್ರಕರಣಗಳು ಜರುಗಿದಲ್ಲಿ ಅಧಿಕಾರಿಗಳು ಕಾನೂನು ಕ್ರಮ ಜರುಗಿಸಬೇಕು ಯಾವುದೇ ಕಾರಣಕ್ಕೆ ಬಾಲ್ಯವಿವಾಹಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.
ಬಾಲ್ಯವಿವಾಹ ಪದ್ಧತಿ ಸಮಾಜಕ್ಕೆ ಮಾರಕವಾಗಿದೆ ಇದನ್ನು ತೊಡೆದು ಹಾಕಲು ಆಶ್ರಿತ ಸಂಸ್ಥೆ ಜಿಲ್ಲಾಡಳಿತದೊಂದಿಗೆ ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಸಂಸ್ಥೆಯ ಇಂತಹ ಕಾರ್ಯಕ್ಕೆ ಇಲಾಖೆಗಳು ಸಹಕಾರ ನೀಡಬೇಕಿದೆ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಆಶ್ರಿತ ಸಂಸ್ಥೆಯ ಕಾರ್ಯಕ್ಕೆ ಸದಾ ಬೆಂಬಲ ನೀಡುವುದಾಗಿ ತಿಳಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 24 ಜನವರಿ | ತೀರ್ಥಹಳ್ಳಿ ಮಾರುಕಟ್ಟೆ ಅಡಿಕೆ ರೇಟ್
ಸಂಸದ ಗೋವಿಂದ ಕಾರಜೋಳ ಮಾತನಾಡಿ ಬಾಲ್ಯವಿವಾಹ ಅನಿಷ್ಟ ಪದ್ಧತಿ ಕೇಂದ್ರ ಸರ್ಕಾರ ಬಾಲ್ಯವಿವಾಹ ಮುಕ್ತ ಭಾರತ ನಿರ್ಮಾಣಕ್ಕೆ ಸಂಕಲ್ಪ ತೊಟ್ಟಿದೆ ರಾಜ್ಯ ಸರ್ಕಾರವು ಈ ಕಾರ್ಯದಲ್ಲಿ ಸ್ಪಂದಿಸುತ್ತಿದೆ ಆಶ್ರಿತ ಸಂಸ್ಥೆ ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣಾ ಕಾರ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಅಭಿನಂದನೀಯ ಎಂದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ. ತಾಜ್ ಪೀರ್, ಕಾಂಗ್ರೇಸ್ ಮುಖಂಡ ಡಿ.ಎನ್. ಮೈಲಾರಪ್ಪ, ಆಶ್ರಿತ ಸಂಸ್ಥೆ ಕಾರ್ಯಕ್ರಮ ವ್ಯವಸ್ಥಾಪಕ ಪರ್ವತಾಲು, ಕೋಶಾಧಿಕಾರಿ ಎಸ್. ತಾತರಾಜ್, ಲಲಿತಕಲಾ ಅಕಾಡೆಮಿ ಸದಸ್ಯ ಸಿ.ಕಣ್ಮೇಶ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ, ಸಾಹಿತಿ ಆನಂದ್ ಕುಮಾರ್, ಪರಿವರ್ತನಾ ಸಂಸ್ಥೆ ಕಲ್ಲೇಶ್, ಪೀಪಲ್ ಸಂಸ್ಥೆ ಎಲ್. ಮಂಜುನಾಥ್, ಖುದ್ದೂಸ್, ಬಿಜೆಪಿ ಮುಖಂಡರಾದ ಮುರುಳಿ, ಲಕ್ಷ್ಮಿಕಾಂತ್, ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಕೇಂದ್ರೀಯ ವಿದ್ಯಾಲಯ ಪ್ರಾರಂಭ | ಸಂಸದ ಗೋವಿಂದ ಕಾರಜೋಳ
ಭಟ್ರಹಳ್ಳಿ ಧನಂಜಯ ಪ್ರಾರ್ಥಿಸಿ, ಹರ್ಷವರ್ಧನ ಸ್ವಾಗತಿಸಿ, ದೇವೀರಮ್ಮ ವಂದಿಸಿ, ಜಿಲ್ಲಾ ಸಂಯೋಜಕ ಡಿ.ಒ. ಮುರಾರ್ಜಿ ಪ್ರಾಸ್ತಾವಿಕ ಮಾತನಾಡಿದರು. ಡಾ. ನವೀನ್ ಮಸ್ಕಲ್ ನಿರೂಪಿಸಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
