
CHITRADURGA NEWS | 12 NOVEMBER 2024
ಚಿತ್ರದುರ್ಗ: ನಗರದ ತಿರುಮಲ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹ(Child marriage)ವನ್ನು ಶಿಶು ಅಭಿವೃದ್ಧಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ಖಚಿತ ಮಾಹಿತಿ ಆಧರಿಸಿ ಮದುವೆಯನ್ನು ತಡೆದಿದ್ದಾರೆ.
ಕ್ಲಿಕ್ ಮಾಡಿ ಓದಿ: ಅಡಿಕೆ ಧಾರಣೆ | ಚನ್ನಗಿರಿ, ಶಿವಮೊಗ್ಗ ಮಾರುಕಟ್ಟೆಗಳಲ್ಲಿ ರಾಶಿ ಅಡಿಕೆ ಬೆಲೆಯಲ್ಲಿ ಚೇತರಿಕೆ
ಹೊಳಲ್ಕೆರೆ ನಗರದ 17 ವರ್ಷ 3 ತಿಂಗಳಿನ ಬಾಲಕಿಯ ವಿವಾಹವನ್ನು ಚಿತ್ರದುರ್ಗ ನಗರದ ಹುಡುಗನೊಂದಿಗೆ ನೆರವೇರಿಸಲು ಪೋಷಕರು ಹಾಗೂ ಕುಟುಂಬಸ್ಥರು, ಮಾಳಪ್ಪನಹಟ್ಟಿಯ ತಿರುಮಲ ಕಲ್ಯಾಣ ಮಂಟಪದಲ್ಲಿ ಮದುವೆ ಆಯೋಜಿಸಿದ್ದರು.
ಈ ವೇಳೆ ಭೇಟಿ ನೀಡಿದ ಅಧಿಕಾರಿಗಳು ಜನ್ಮ ದಾಖಲೆ ಪರಿಶೀಲಿನೆ ನಡೆಸಿದಾಗ ಹುಡುಗಿ ಅಪ್ರಾಪ್ತ ಬಾಲಕಿ ಎಂದು ತಿಳಿದು ಬಂದಿದೆ.
ಕಾನೂನಿನ ಪ್ರಕಾರ ಬಾಲ್ಯ ವಿವಾಹ ಜರುಗಿಸಿದರೆ ಕನಿಷ್ಠ ಒಂದು ವರ್ಷಕ್ಕೆ ಕಡಿಮೆ ಇಲ್ಲದಂತೆ ಎರೆಡು ವರ್ಷಗಳವರೆಗೆ ವಿಸ್ತರಿಸಬಹುದಾದ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ದಂಡ ವಿಧಿಸಲಾಗುತ್ತದೆ ಎಂದು ಪೋಷಕರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗದಲ್ಲಿ ಬಸ್ ಸಂಚಾರ ವ್ಯವಸ್ಥೆ ಬದಲಾವಣೆ | ಟ್ರಾಫಿಕ್ ಸಮಸ್ಯೆ ಮುಕ್ತಿಗೆ ಜಿಲ್ಲಾಡಳಿತ ನಿರ್ಧಾರ
18 ವರ್ಷ ತುಂಬುವವರೆಗೂ ಮದುವೆ ಮಾಡದಂತೆ ಬಾಲಕಿ ಹಾಗೂ ಹುಡುಗನ ಪೋಷಕರಿಂದ ಮುಚ್ಚಳಿಕೆ ಬರಸಿಕೊಂಡಿದ್ದಾರೆ.
ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಾಜರು ಪಡಿಸಲಾಗಿದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ.ಸಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
