
CHITRADURGA NEWS | 02 AUGUST 2024
ಚಿತ್ರದುರ್ಗ: ತಾಲ್ಲೂಕಿನ ಗ್ರಾಮವೊಂದರಲ್ಲಿ ಬಾಲ್ಯ ವಿವಾಹ ಪ್ರಕರಣ ಬೆಳಕಿಗೆ ಬಂದಿದೆ. ಮದುವೆಯಾದ ಆರೋಪಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಹಿರಿಯೂರು ತಾಲ್ಲೂಕಿನ ಯುವಕ ಬಾಲಕಿಯನ್ನು ಚಿತ್ರದುರ್ಗ ತಾಲ್ಲೂಕಿನ ಗ್ರಾಮವೊಂದರಲ್ಲಿ ವಿವಾಹವಾಗಿದ್ದಾನೆ. ವಿಷಯ ತಿಳಿದ ಕೂಡಲೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪರಿಶೀಲಿಸಿ, ಚಳ್ಳಕೆರೆ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ವರದಿ ಕಳುಹಿಸಿಕೊಡಲಾಗಿತ್ತು.
ಇದನ್ನೂ ಓದಿ: ಸ್ನೇಹ ಬೆಳೆಸಿ ಬಾಲಕಿ ಮೇಲೆ ಅತ್ಯಾಚಾರ | ಪೋಕ್ಸೊ, ಜಾತಿ ನಿಂದನೆ ಪ್ರಕರಣ ದಾಖಲು
ವರದಿ ಆಧರಿಸಿ ಜುಲೈ 29 ರಂದು ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಪ್ರಕಾರ ಯುವಕನ ವಿರುದ್ಧ ಚಳ್ಳಕೆರೆ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಕರಣ ದಾಖಲಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
