
CHITRADURGA NEWS | 02 APRIL 2025
ಚಿತ್ರದುರ್ಗ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಅವರು ಇದೇ ಏ.03ರಂದು ಹಾಗೂ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಅವರು ಏ.07ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
Also Read: ಅನಗತ್ಯ ಗಲ್ಲದ ಕೂದಲನ್ನು ಕಡಿಮೆ ಮಾಡಲು ಏನು ತಿನ್ನಬೇಕು? ಇಲ್ಲಿದೆ ನೋಡಿ ಟಿಪ್ಸ್!


ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಅವರು ಏ.03ರಂದು ಮಧ್ಯಾಹ್ನ 12.30ಕ್ಕೆ ಚಿತ್ರದುರ್ಗ ನಗರದ ಶ್ರೀ ಶಿವಶರಣ ಮಾದಾರ ಚೆನ್ನಯ್ಯ ಗುರುಪೀಠದಲ್ಲಿ ನಡೆಯುವ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 2.30ಕ್ಕೆ ಸಮಾಜ ಕಲ್ಯಾಣ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸುವರು. ಸಂಜೆ 5ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.
ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಅವರು ಏ.07ರಂದು ಬೆಳಿಗ್ಗೆ 11 ರಿಂದ 1.30 ರವರೆಗೆ ಜಿಲ್ಲೆಯ ಮಕ್ಕಳ ವಿಶೇಷ ಪೊಲೀಸ್ ಘಟಕದ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ಹಾಗೂ ಮಧ್ಯಾಹ್ನ 3 ರಿಂದ 4.30 ರವರೆಗೆ ನೀರಿನಲ್ಲಿ ಬಿದ್ದು ಮಕ್ಕಳು ಸಾವನಪ್ಪುತ್ತಿರುವ ಪ್ರಕರಣಗಳನ್ನು ತಡೆಗಟ್ಟುವ ಸಂಬಂಧ ಕೃಷಿ ಇಲಾಖೆ, ತೋಟಗಾರಿಕೆ, ಅಗ್ನಿಶಾಮಕ ಇಲಾಖೆ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಮಟ್ಟದಲ್ಲಿ ಪರಿಶೀಲನಾ ಸಭೆಯನ್ನು ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ನಡೆಸಲಿದ್ದಾರೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ ತಿಳಿಸಿದ್ದಾರೆ.
Also Read: ಕ್ಷಯರೋಗದಿಂದ ಬೇಗ ಚೇತರಿಸಿಕೊಳ್ಳಲು ಈ ಪೌಷ್ಠಿಕಾಂಶಗಳನ್ನು ಸೇವಿಸಿ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
