
CHITRADURGA NEWS | 16 OCTOBER 2024
ಚಿತ್ರದುರ್ಗ: ನಟ ದರ್ಶನ್ (Darshan) ಗ್ಯಾಂಗಿನಿಂದ ಭೀಕರವಾಗಿ ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿಗೆ ಮಗು ಜನನ(child was born)ವಾಗಿದೆ.
ಕ್ಲಿಕ್ ಮಾಡಿ ಓದಿ: inflow; ವಾಣಿವಿಲಾಸ ಸಾಗರ ಜಲಾಶಯಕ್ಕೆ 2426 ಕ್ಯೂಸೆಕ್ ಒಳಹರಿವು

ರೇಣುಕಾಸ್ವಾಮಿ ಕೊಲೆಯಾದಾಗ ಪತ್ನಿ ಸಹನಾ ಐದು ತಿಂಗಳ ಗರ್ಭಿಣಿಯಾಗಿದ್ದರು. ಈ ನೋವು ಇಡೀ ಕುಟುಂಬವನ್ನು ಬಾಧಿಸಿತ್ತು.
ಅಕ್ಟೋಬರ್ 16 ಬುಧವಾರ ಬೆಳಗ್ಗೆ 5 ಗಂಟೆಗೆ ಚಿತ್ರದುರ್ಗದ ಜೆಸಿಆರ್ ಬಡಾವಣೆಯಲ್ಲಿರುವ ಕೀರ್ತಿ ಆಸ್ಪತ್ರೆಯಲ್ಲಿ ರೇಣುಕಾಸ್ವಾಮಿ ಸಹನಾ ದಂಪತಿಗೆ ಗಂಡು ಮಗು ಜನನವಾಗಿದೆ.
ಮಗುವಿನ ತೂಕ 2 kg 200 ಗ್ರಾಂ ಇದ್ದು, ತಾಯಿ ಹಾಗೂ ಮಗು ಆರೋಗ್ಯವಾಗಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: Astrology; ದಿನ ಭವಿಷ್ಯ | 16 ಅಕ್ಟೋಬರ್ | ಧನ ಆದಾಯ ಹೆಚ್ಚು, ದೀರ್ಘಕಾಲದ ಸಮಸ್ಯೆಗೆ ಯಶಸ್ಸು, ಅರೋಗ್ಯದಲ್ಲಿ ಎಚ್ಚರ
ಹೆರಿಗೆ ಹಾಗೂ ಚಿಕಿತ್ಸೆಯ ಎಲ್ಲಾ ವೆಚ್ಚಗಳನ್ನು ಕೀರ್ತಿ ಆಸ್ಪತ್ರೆಯ ಡಾ.ಮಲ್ಲಿಕಾರ್ಜುನ ಕೀರ್ತಿ ಉಚಿತ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಮಗನ ಸಾವಿನ ದುಃಖದಲ್ಲಿದ್ದ ಕುಟುಂಬಕ್ಕೆ ಮೊಮ್ಮಗನ ಆಗಮನ ತುಸು ನೆಮ್ಮದಿ ಹಾಗೂ ಸಂತಸ ಮೂಡಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
