
ಚಿತ್ರದುರ್ಗ ನ್ಯೂಸ್.ಕಾಂ: ಮಧ್ಯಾಹ್ನದ ಬಿಸಿಯೂಟ ಸೇವನೆ ಬಳಿಕ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥವಾಗಿರುವ ಘಟನೆ ಚಿತ್ರದುರ್ಗ ನಗರದಲ್ಲಿ ನಡೆದಿದೆ.
ಸುಮಾರು 20 ಮಕ್ಕಳನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ, ಯಾವುದೇ ಅಪಾಯ ಇಲ್ಲ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ದೇವರಾಜ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಹಿರಿಯೂರು ಅಪಘಾತದ ಫಾಲೋಅಪ್ | ಮದುವೆಗೆ ಹೆಣ್ಣು ನೋಡುವ ಶಾಸ್ತ್ರ ಮುಗಿಸಿ ತೆರಳುತ್ತಿದ್ದ ಯುವಕನ ಧಾರುಣ ಸಾವು
ಮಂಗಳವಾರ ಮಧ್ಯಾಹ್ನ ಊಟ ಸೇವಿಸಿದ ನಂತರ ಮಕ್ಕಳಿಗೆ ವಾಂತಿಯಾಗಿರುವ ಘಟನೆ ಇಲ್ಲಿನ ಉರ್ದು ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಬಿಸಿಯೂಟದ ನಂತರ ಮೊಟ್ಟೆ ಹಾಗೂ ಶೇಂಕಾ ಚಿಕ್ಕಿ ಸೇವಿಸಿದ್ದರು. ಆದರೆ, ವಿದ್ಯಾರ್ಥಿಗಳ ಅಸ್ವಸ್ಥತೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಜಿಲ್ಲಾ ಆಸ್ಪತ್ರೆಗೆ ಚಿತ್ರದುರ್ಗ ನಗರ ಪೊಲೀಸ್ ಠಾಣೆ ಸಿಪಿಐ ತಿಪ್ಪೇಸ್ವಾಮಿ ಮತ್ತಿತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ https://www.facebook.com/chitradurganews?mibextid=ZbWKwL)
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/DBdpIl5D3JYHFoKkhA0cQg)

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
