CHITRADURGA NEWS | 18 JULY 2024
ಚಿತ್ರದುರ್ಗ: ಬೇಲಿ ಮೇಲೆ ಬೆಳೆದಿದ್ದ ಹಣ್ಣು ತಿಂದು 6 ಮಕ್ಕಳು ಅಸ್ವಸ್ಥವಾದ ಘಟನೆ ಹಿರಿಯೂರು ತಾಲ್ಲೂಕಿನ ಅಂಬಲಗೆರೆ ಗ್ರಾಮದಲ್ಲಿ ನಡೆದಿದೆ.
ಬುಧವಾರ ಶಾಲೆಗೆ ರಜೆ ಇದ್ದ ಕಾರಣ ಗ್ರಾಮದಲ್ಲಿ ಆಟವಾಡುತ್ತಿದ್ದ ಮಕ್ಕಳು ಬೇಲಿ ಮೇಲಿದ್ದ ಹಣ್ಣು ತಿಂದಿದ್ದಾರೆ. ಸ್ವಲ್ಪ ಸಮಯದ ಬಳಿಕ ಮಕ್ಕಳಲ್ಲಿ ವಾಂತಿ, ಬೇಧಿ, ಹೊಟ್ಟೆನೋವು ಕಾಣಿಸಿಕೊಂಡಿದೆ. ಅಸ್ವಸ್ಥಗೊಳ್ಳುತ್ತಿದ್ದಂತೆ ಹಿರಿಯೂರು ಆಸ್ಪತ್ರೆಗೆ ದಾಖಲಿಸಿ ಬಳಿಕ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಇದನ್ನೂ ಓದಿ: ಗೃಹಿಣಿ ಆತ್ಮಹತ್ಯೆ | ಅಳಿಯನ ವಿರುದ್ಧ ದೂರು ದಾಖಲಿಸಿದ ಮಾವ
ಪ್ರಕೃತಿ, ಮುಖೇಶ್,ಅನುಶ್ರೀ, ರಾಕೇಶ್, ಸಿಂಧು,ಮಹಾಲಕ್ಷ್ಮಿ ಅಸ್ವಸ್ಥ ಮಕ್ಕಳು. ಚಿಕಿತ್ಸೆ ಪಡೆದ ಮಕ್ಕಳ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಮಕ್ಕಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
