CHITRADURGA NEWS | 30 SEPTEMBER 2026
ಚಿತ್ರದುರ್ಗ: ಶಿಕ್ಷಣದ ಜತೆಗೆ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡುವುದು ಪೋಷಕರ ದೊಡ್ಡ ಜವಾಬ್ದಾರಿ ಎಂದು ಸಮಾಜ ಸೇವಕ ಎಂ.ವಿ.ಮಾಲತೇಶ್ ತಿಳಿಸಿದರು.
ಇದನ್ನೂ ಓದಿ:
ನಗರದ ಬುರುಜನಹಟ್ಟಿಯ ಶ್ರೀ ರಾಜ ಉತ್ಸವಾಂಬ ಸ್ವಸಹಾಯ ಸಂಘದಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಕೂಡ ಶಿಕ್ಷಣದ ಜತೆ ವಿನಯ ಹಾಗೂ ವಿಧೇಯತೆ ರೂಢಿಸಿಕೊಳ್ಳಬೇಕು. ಮಕ್ಕಳು ಸಾಧನೆ ಮಾಡಲು ತಂದೆ-ತಾಯಿಗಳು ಸಾಕಷ್ಟು ಶ್ರಮಿಸುತ್ತಾರೆ. ಹಾಗಾಗಿ ಮಕ್ಕಳು ಕಷ್ಟಪಟ್ಟು ಓದಿ ಹೆಚ್ಚಿನ ಅಂಕಗಳನ್ನು ಗಳಿಸಬೇಕು. ಇದರಿಂದ ತಾವು ಓದಿದ ಶಾಲೆ, ತಂದೆ-ತಾಯಿ ಹಾಗೂ ಊರಿನ ಕೀರ್ತಿ ಹೆಚ್ಚಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಘದ ಸದಸ್ಯರ ಮಕ್ಕಳು ಹಾಗೂ ಸ್ಥಳೀಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ನಗದು ಬಹುಮಾನದೊಂದಿಗೆ ಸನ್ಮಾನಿಸಲಾಯಿತು.
ಇದನ್ನೂ ಓದಿ:
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷೆ ಟಿ.ತಿಪ್ಪಮ್ಮ, ಉಪಾಧ್ಯಕ್ಷೆ ಎಸ್.ಜಯಲಕ್ಷ್ಮಿ, ಕಾರ್ಯದರ್ಶಿ ಜಿ.ಬಿ.ನಿರ್ಮಲ, ಖಜಾಂಚಿ ಸುವರ್ಣ, ಸದಸ್ಯರಾದ ಎಸ್.ಜಯಮ್ಮ, ಮಲ್ಲಮ್ಮ, ಸಿ.ಆರ್.ಮಮತ, ಟಿ.ನಿರ್ಮಲ, ಮಮತ ಲವ, ನೇತ್ರಾವತಿ, ನಾಗವೇಣಿ, ಟಿ.ಕುಸುಮ, ದೀಪಾ, ಟಿ.ಮಂಗಳ, ಸುಮ, ಪಿ.ಬಿ.ಕುಮುದ, ಪಿ.ಎನ್.ಸೌಮ್ಯ, ಎಸ್.ರಂಜಿತಾ, ಪಿ.ಭಾರತಿ, ಮತ್ತಿತರರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

