CHITRADURGA NEWS | 14 FEBRUARY 2026
ಚಿತ್ರದುರ್ಗ: ಜಂತುಹುಳುಗಳು ಮಕ್ಕಳ ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆಗೆ ಮಾರಕವಾಗಿದ್ದು, ಆರೋಗ್ಯವಂತ ಮತ್ತು ಸದೃಢ ಮಕ್ಕಳ ಪಾಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಹೇಳಿದರು.
ಇದನ್ನೂ ಓದಿ: ಒಕ್ಕಲಿಗ ಜನಾಂಗಕ್ಕೆ ಅನ್ಯಾಯವಾದಾಗ ಧ್ವನಿ ಎತ್ತಿದರೆ ಮುಂದಿನ ಪೀಳಿಗೆಗೆ ದಾರಿ ಸುಲಭ | ಆರ್.ಅಶೋಕ್
ನಗರದ ಬುದ್ಧ ನಗರ ಆರೋಗ್ಯ ಕೇಂದ್ರದಲ್ಲಿ ಈಚೆಗೆ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆರೋಗ್ಯವಂತ ಸಮಾಜ ನಿರ್ಮಿಸಲು 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳು ಜಂತುಹುಳು ನಿವಾರಣಾ ಮಾತ್ರೆಗಳನ್ನು ಸೇವಿಸುವುದು ಅತ್ಯಗತ್ಯ ಎಂದು ತಿಳಿಸಿದರು.
ಜಂತುಹುಳುಗಳು ಮಾನವನ ಕರುಳಿನಲ್ಲಿ ವಾಸಿಸುವ ಪರಾವಲಂಬಿ ಜೀವಿಗಳು. ಕಲುಷಿತ ನೀರು, ಅಶುದ್ಧ ಆಹಾರ ಮತ್ತು ಮಣ್ಣಿನಲ್ಲಿ ಬೆರೆತಿರುವ ಮೊಟ್ಟೆಗಳು ಬರಿಗಾಲಿನಲ್ಲಿ ಓಡಾಡುವುದರಿಂದ ದೇಹವನ್ನು ಪ್ರವೇಶಿಸುತ್ತವೆ. ಆದ್ದರಿಂದ ಕೈಗಳ ಸ್ವಚ್ಛತೆ ಮತ್ತು ವೈಯಕ್ತಿಕ ಹಿತಾಸಕ್ತಿ ವಹಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತಿಳಿಸಿದರು.
ಕಾರ್ಯಕ್ರಮದ ಅನುಷ್ಠಾನಾಧಿಕಾರಿ ಡಾ. ಅಭಿನವ್ ಮಾತನಾಡಿ, ಜಂತುಹುಳು ಬಾಧೆಯಿಂದ ಮಕ್ಕಳಲ್ಲಿ ರಕ್ತಹೀನತೆ, ಅಪೌಷ್ಟಿಕತೆ, ಹಸಿವಿನ ಕೊರತೆ ಮತ್ತು ತೂಕ ನಷ್ಟ ಉಂಟಾಗುತ್ತದೆ. ನಿಯಮಿತವಾಗಿ ಮಾತ್ರೆ ನೀಡುವುದರಿಂದ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚುವುದಲ್ಲದೆ, ಶಾಲಾ ಹಾಜರಾತಿ ಮತ್ತು ಕಲಿಕೆಯಲ್ಲಿ ಗಮನಾರ್ಹ ಸುಧಾರಣೆಯಾಗುತ್ತದೆ ಎಂದರು.
ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಒಂದು ಸಾವಿರ ದಿನ ಪೂರ್ಣ | ಕರಾಳ ದಿನವೆಂದು ಆಚರಿಸುವುದು ಸೂಕ್ತ | ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯ
ಜಿಲ್ಲಾ ಯೋಜನಾ ಅಭಿವೃದ್ಧಿ ಅಧಿಕಾರಿ ಡಾ. ಕಾಶಿ ಮಾತನಾಡಿ, ಮಕ್ಕಳು ಬರಿಗಾಲಿನಲ್ಲಿ ಆಟವಾಡುವುದು ಮತ್ತು ತೆರೆದ ಮಲವಿಸರ್ಜನೆಯಿಂದ ಈ ಬಾಧೆಗೆ ಸುಲಭವಾಗಿ ತುತ್ತಾಗುತ್ತಾರೆ. ಪೋಷಕರು ಈ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಗಿರೀಶ್ ಬಿ.ವಿ., ವೈದ್ಯಾಧಿಕಾರಿ ಡಾ. ಸುರೇಂದ್ರ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಜಾನಕಿ ಮುಖ್ಯ ಶಿಕ್ಷಕಿ ಅನ್ನಪೂರ್ಣ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಿವಾಸ್, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಗಂಗಾಧರ್, ಪ್ರಸನ್ನ, ಕೋಟೇಶ ಚಕ್ರವರ್ತಿ ಹಾಗೂ ಆರೋಗ್ಯ ಕೇಂದ್ರದ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
