ಮುಖ್ಯ ಸುದ್ದಿ
ಭೀಮಸಮುದ್ರದಲ್ಲಿ ಮಕ್ಕಳ ಗ್ರಾಮ ಸಭೆ
CHITRADURGA NEWS | 21 JANUARY 2025
ಚಿತ್ರದುರ್ಗ: ತಾಲೂಕಿನ ಭೀಮಸಮುದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ವತಿಯಿಂದ ಆಯೋಜನೆ ಮಾಡಲಾಗಿತ್ತು.
Also Read: ಮೈಸೂರು ಮಹಾರಾಜರಿಂದ ವಾಣಿವಿಲಾಸ ಸಾಗರಕ್ಕೆ ಬಾಗೀನ ಅರ್ಪಣೆ
ಗ್ರಾಮ ಸಭೆ ಕಾರ್ಯಕ್ರಮದಲ್ಲಿ ಪಿ.ಡಿ.ಒ ದೀಪ ಮಾತನಾಡಿ, ಸರ್ಕಾರ ನಿಮಗೆ ಬೇಕಾದ ಬಟ್ಟೆ, ಪುಸ್ತಕ ಊಟದ ವ್ಯವಸ್ಥೆ ಮಾಡುತ್ತಿದೆ, ಮಕ್ಕಳು ಸರಿಯಾಗಿ ವಿದ್ಯಾಭ್ಯಾಸ ಮಾಡಿ, ನಮ್ಮ ದೇಶದ ರಾಷ್ಟ್ರಪತಿ, ಪ್ರಧಾನಿ, ಐಎಎಸ್ ಅಧಿಕಾರಿ ಹಾಗೂ ಅಬ್ದುಲ್ ಕಲಾಂ ಅಂತೆ ಆಗಬೇಕು, ತಂದೆ ತಾಯಿಗಳಿಗೆ ಹಾಗೂ ಶಿಕ್ಷಕರಿಗೆ ಒಳ್ಳೆಯ ಹೆಸರು ತರಬೇಕು ಎಂದು ಹೇಳಿದರು.
ಮುಖ್ಯ ಶಿಕ್ಷಕಿ ಸೌಮ್ಯ ರೆಡ್ಡಿ ಮಾತನಾಡಿ, ಶಾಲೆಯ ಕಾಂಪೌಂಡ್ ಇಲ್ಲದ ಕಾರಣ ದನಕರುಗಳ ನುಗ್ಗಿ ಗಿಡಗಳನ್ನು ತಿನ್ನುತ್ತವೆ, ರಾತ್ರಿಯ ವೇಳೆ ದುಷ್ಕರ್ಮಿಗಳು ಅನೈತಿಕ ಚಟುವಟಿಕೆ ಮಾಡುತ್ತಾರೆ.
ಆದ್ದರಿಂದ ಶಾಲೆಯ ಸುತ್ತ ಕಂಪೌಂಡ್ ನಿರ್ಮಾಣ, ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟಕ್ಕೆ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಮಾಡಿಸಿಕೊಡಬೇಕೆಂದು ಗ್ರಾಮದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಿಡಿಒ ಗೆ ಮನವಿ ಮಾಡಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಉಮೇಶ್ ಮಾತನಾಡಿ, ಶಾಲೆಯ ಆವರಣದಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತವೆ ಎಂದು ಮುಖ್ಯ ಶಿಕ್ಷಕರು ತಿಳಿಸಿದ್ದಾರೆ, ಇದರ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲು ಆದಷ್ಟು ಬೇಗ ಪೊಲೀಸರ ಗಮನಕ್ಕೆ ತರುತ್ತೇವೆ.
Also Read: SSLC ವಿದ್ಯಾರ್ಥಿಗಳಿಗೆ ಆಕಾಶವಾಣಿ ಪೋನ್-ಇನ್ | ನಿಮ್ಮ ಪ್ರಶ್ನೆಗಳಿಗೆ ತಜ್ಞರ ಉತ್ತರ
ಮಕ್ಕಳಿಗೆ ಬೇಕಾದ ನೀರಿನ ವ್ಯವಸ್ಥೆ, ಕಾಂಪೌಂಡ್, ಶಾಲಾ ಆವರಣದಲ್ಲಿ ಸ್ವಚ್ಛತೆಯ ಬಗ್ಗೆ ಆದಷ್ಟು ಬೇಗ ಸಮಸ್ಯೆಯನ್ನು ಪರಿಹಾರ ಮಾಡಿಕೊಡುತ್ತೇನೆಂದು ಹೇಳಿದರು.
ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಪಾಲಾಕ್ಷಮ್ಮ ವಹಿಸಿದ್ದರು.
ಗ್ರಾಮ ಪಂಚಾಯತಿ ಸದಸ್ಯರುಗಳಾದ ಸಿದ್ದಗಂಗಮ್ಮ, ಮಂಜುನಾಥ್, ಎಸ್ ಡಿ ಎ ವೆಂಕಟೇಶ್, ಗ್ರಾಮದ ಸಿಂಧೂ ಕುಮಾರಿ, ಚಂದ್ರಶೇಖರ್, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಚಂದ್ರನಾಯಕ್, ಶಾಲೆಯ ಶಿಕ್ಷಕರಾದ ಮಂಜುಳಮ್ಮ, ಸುಂದರಮ್ಮ, ಚೈತ್ರ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗ, ಶಾಲೆಯ ಮಕ್ಕಳು ಉಪಸ್ಥಿತರಿದ್ದರು.