CHITRADURGA NEWS | 25 JANUARY 2026
ಚಿತ್ರದುರ್ಗ: ಗ್ರಾಮೀಣ ಭಾಗದ ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಅವರ ಕುಂದುಕೊರತೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಒದಗಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ” ಎಂದು ಮದಕರಿಪುರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಜಿ. ನಾಗರಾಜ್ ತಿಳಿಸಿದರು.
ಇದನ್ನೂ ಓದಿ: ಚಿತ್ರದುರ್ಗದಲ್ಲಿ ಕೇಂದ್ರೀಯ ವಿದ್ಯಾಲಯ ಪ್ರಾರಂಭ | ಸಂಸದ ಗೋವಿಂದ ಕಾರಜೋಳ
ಚಿತ್ರದುರ್ಗ ತಾಲ್ಲೂಕಿನ ಮದಕರಿಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ‘ಮಕ್ಕಳ ಗ್ರಾಮ ಸಭೆ‘ಯಲ್ಲಿ ಅವರು ಮಾತನಾಡಿದರು.
ಗ್ರಾಮೀಣಾಭಿವೃದ್ಧಿ ಇಲಾಖೆಯ ನಿರ್ದೇಶನದಂತೆ ಪ್ರತಿ ವರ್ಷ ನವೆಂಬರ್ 14 ರಿಂದ ಜನವರಿ 24 ರ ಒಳಗೆ ಮಕ್ಕಳ ಗ್ರಾಮ ಸಭೆಗಳನ್ನು ಆಯೋಜಿಸಲಾಗುತ್ತದೆ. ಈ ಸಭೆಯು ಸಂಪೂರ್ಣವಾಗಿ ಮಕ್ಕಳಿಗಾಗಿ ಮೀಸಲಾಗಿದ್ದು, ಅವರ ಶಿಕ್ಷಣ, ಆರೋಗ್ಯ ಮತ್ತು ಸುರಕ್ಷತೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಮುಕ್ತವಾಗಿ ಚರ್ಚಿಸಲು ವೇದಿಕೆ ಕಲ್ಪಿಸುತ್ತದೆ. ಮಕ್ಕಳ ಅಹವಾಲುಗಳನ್ನು ಆಲಿಸಿ, ಅವುಗಳನ್ನು ತಕ್ಷಣವೇ ಬಗೆಹರಿಸಲು ಪಂಚಾಯತಿ ವತಿಯಿಂದ ಎಲ್ಲಾ ಕ್ರಮ ವಹಿಸಲಾಗುವುದು ಎಂದು ಜಿ. ನಾಗರಾಜ್ ಅವರು ಭರವಸೆ ನೀಡಿದರು.
ಪಿಎಸ್‍ಐ ಗೀತಾ ಅವರು ಮಕ್ಕಳ ರಕ್ಷಣೆ ಮತ್ತು ಕಾನೂನು ಅರಿವು ಮೂಡಿಸಿದರೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಪಿ. ಸತೀಶ್ ಕುಮಾರ್ ಅವರು ಬಾಲಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳ ಬಗ್ಗೆ ಎಚ್ಚರಿಸಿದರು. ಮಕ್ಕಳ ರಕ್ಷಣಾ ಘಟಕದ ರೇಣುಕಾ ಹಾಗೂ ಡಾನ್ ಬಾಸ್ಕೊ ಸಂಸ್ಥೆಯ ಮಹಂತೇಶ್ ಅವರು ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 24 ಜನವರಿ | ತೀರ್ಥಹಳ್ಳಿ ಮಾರುಕಟ್ಟೆ ಅಡಿಕೆ ರೇಟ್
ಮದಕರಿಪುರ ಪಂಚಾಯತಿ ವ್ಯಾಪ್ತಿಯ ವಿವಿಧ ಶಾಲೆಗಳ ವಿದ್ಯಾರ್ಥಿಗಳು ತಮ್ಮ ಶಾಲಾ ಸೌಲಭ್ಯಗಳ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿದಿಗಳ ಗಮನ ಸೆಳೆದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೆಚ್.ಎಸ್. ಭವ್ಯ, ಉಪಾಧ್ಯಕ್ಷೆ ಜ್ಯೋತಿ ದೇವೇಂದ್ರಪ್ಪ ಹಾಗೂ ಪಂಚಾಯತಿ ಸದಸ್ಯರಾದ ನವೀನ್ ಕುಮಾರ್, ಮಂಜುನಾಥ, ಲಕ್ಷ್ಮಿ, ಯಶೂದಮ್ಮ, ಮಂಜುಳಾ ಮತ್ತು ತಿಪ್ಪೇಸ್ವಾಮಿ ನಾಯ್ಕ, ಶಿಕ್ಷಕರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
