CHITRADURGA NEWS | 04 FEBRUARY 2026
ಚಿತ್ರದುರ್ಗ: ನಗರಸಭೆ ಮಾಜಿ ಸದಸ್ಯೆ ಹಾಗೂ ಬಿಜೆಪಿಯ ಹಿರಿಯ ನಾಯಕಿ ಚಂದ್ರಮ್ಮ (76) ನಿಧನರಾಗಿದ್ದಾರೆ.
ಬೆಂಗಳೂರಿನಲ್ಲಿ ನಿಧನರಾಗಿರುವ ಚಂದ್ರಮ್ಮ ಅವರು, ಸಹೋದರಿ, ಸಹೋದರರು ಸೇರಿದಂತೆ ಅಪಾರ ಬಂಧುಗಳನ್ನು ಆಗಲಿದ್ದಾರೆ.
ಇದನ್ನೂ ಓದಿ: ಫೆಬ್ರವರಿ, ಮಾರ್ಚ್ ವಿದ್ಯುತ್ ವ್ಯತ್ಯಯ | ಯಾವ ದಿನ ಕರೆಂಟ್ ಇರಲ್ಲ | ಇಲ್ಲಿದೆ ಪೂರ್ಣ ವಿವರ
ಮೃತರ ಅಂತ್ಯಕ್ರಿಯೆ ಫೆ.5 ಗುರುವಾರ ಮಧ್ಯಾಹ್ನ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಅಟಲ್ ಬಿಹಾರಿ ವಾಜಪೇಯಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾಗ ಚಂದ್ರಮ್ಮ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಾಗಿದ್ದರು.
ಇದನ್ನೂ ಓದಿ: ಮೆಡಿಕಲ್ ಕಾಲೇಜು ನೇಮಕಾತಿ | ಮಧ್ಯವರ್ತಿಗಳಿಗೆ ಬಲಿಯಾಗಬೇಡಿ | ಡಾ.ಯುವರಾಜ್
ಚಿತ್ರದುರ್ಗ ನಗರದ 5ನೇ ವಾರ್ಡ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದ ಅವರು, ಹಿಂದೂಪರ ಹೋರಾಟಗಾರಾಗಿ, ವಕೀಲರಾಗಿ ಜನಾನುರಾಗಿಯಾಗಿದ್ದರು.
ಸಂತಾಪ: ಬಿಜೆಪಿ ನಾಯಕಿ ಚಂದ್ರಮ್ಮ ಅವರ ನಿಧನಕ್ಕೆ ಜಿಲ್ಲೆಯ ಬಿಜೆಪಿ ಮುಖಂಡರು ಸಂತಾಪ ಸೂಚಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
