ಮುಖ್ಯ ಸುದ್ದಿ
ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿ ಈ ವರ್ಷ ಪೂರ್ಣ | ಸಿಎಂ ಸಿದ್ದರಾಮಯ್ಯ

Published on
CHITRADURGA NEWS | 07 MARCH 2025
ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‍ನಲ್ಲಿ ಚಿತ್ರದುರ್ಗ ಜಿಲ್ಲೆಯ ಮಹತ್ವದ ಭದ್ರಾ ಮೇಲ್ದಂಡೆ ಯೋಜನೆ ಕುರಿತು ಪ್ರಸ್ತಾಪಿಸಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿಯನ್ನು ಈ ವರ್ಷ ಪೂರ್ಣಗೊಳಿಸಿ ಕೆರೆಗಳಿಗೆ ನೀರು ಹರಿಸುವ ಆಶಯ ಬಜೆಟ್‍ನಲ್ಲಿ ವ್ಯಕ್ತವಾಗಿದೆ.
ಇದನ್ನೂ ಓದಿ: ಚಿತ್ರದುರ್ಗ KSRTC ಡಿಸಿ ವರ್ಗಾವಣೆ
ಪ್ರಸಕ್ತ ಸಾಲಿನಲ್ಲಿ 2611 ಕೋಟಿ ರೂ. ಅಂದಾಜು ಮೊತ್ತದ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿ ಪೂರ್ಣಗೊಳಿಸುವ ಮೂಲಕ ಹೊಸದುರ್ಗ, ಹೊಳಲ್ಕೆರೆ, ಜಗಳೂರು, ಮೊಳಕಾಲ್ಮೂರು, ಚಳ್ಳಕೆರೆ ಹಾಗೂ ಪಾವಗಡ ತಾಲೂಕಿನ 30 ಕೆರೆಗಳನ್ನು ತುಂಬಿಸುವುದಾಗಿ ಮುಖ್ಯಮಂತ್ರಿಗಳು ಬಜೆಟ್‍ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ರೈತರು ಮೃತ
30 ಕೆರೆಗಳನ್ನು ಭರ್ತಿ ಮಾಡಿಸುವ ಜೊತೆಗೆ 1.77 ಲಕ್ಷ ಎಕರೆ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಕಲ್ಪಿಸುವುದಾಗಿ ಬಜೆಟ್‍ನಲ್ಲಿ ತಿಳಿಸಿದ್ದಾರೆ.
Continue Reading
Related Topics:Bhadra Upper Bank Project, Budget, Chief Minister Siddaramaiah, Chitradurga Branch Canal, Chitradurga news, featured, kannada latest, ಕನ್ನಡ ಲೇಟೆಸ್ಟ್, ಚಿತ್ರದುರ್ಗ ನ್ಯೂಸ್, ಚಿತ್ರದುರ್ಗ ಶಾಖಾ ಕಾಲುವೆ, ಬಜೆಟ್, ಭದ್ರಾ ಮೇಲ್ದಂಡೆ ಯೋಜನೆ, ಮುಖ್ಯಮಂತ್ರಿ ಸಿದ್ದರಾಮಯ್ಯ

Click to comment