CHITRADURGA NEWS | 18 APRIL 2026
ಚಿತ್ರದುರ್ಗ: ಮೈ ಭಾರತ್ ಕೇಂದ್ರ, ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ ವತಿಯಿಂದ ಬೆಂಗಳೂರಿನಲ್ಲಿ ಈಚೆಗೆ ನಡೆದ “ಮೈ ಭಾರತ್ ಬಜೆಟ್ ಕ್ವೆಸ್ಟ್-2026”ರಲ್ಲಿ ಚಿತ್ರದುರ್ಗದ ದಂತ ವೈದ್ಯ ಡಾ.ಎಂ.ಆರ್.ದೀಕ್ಷಿತ್ ಕುಮಾರ್ ಅವರು ಗಮನಾರ್ಹ ಸಾಧನೆ ಮಾಡಿದ್ದಾರೆ.
ಇದನ್ನೂ ಓದಿ:
2026ರ ಏಪ್ರಿಲ್ 12 ಮತ್ತು 13ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಇಂಟರ್‍ನ್ಯಾಷನಲ್ ಸೆಂಟರ್‍ನಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ “ಮೈ ಭಾರತ ಬಜೆಟ್ ಕ್ವೆಸ್ಟ್ -2026”ರ ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದ ಅವರು, ಪ್ರಧಾನಮಂತ್ರಿಯವರೊಂದಿಗೆ ನಡೆದ ರಾಷ್ಟ್ರೀಯ ಮಟ್ಟದ ವರ್ಚುಯಲ್ ಸಂವಾದದಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ವಿಕಸಿತ ಭಾರತ್ ಬಜೆಟ್ ಕುರಿತಾದ ದೇಶಾದ್ಯಂತ ನಡೆದ ಈ ಸ್ಪರ್ಧೆಯಲ್ಲಿ ಸುಮಾರು 12ಲಕ್ಷಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
