By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಿದ್ಧತಾ ಸಭೆ
    ಗೌರಿ-ಗಣೇಶ ಹಬ್ಬ | ಶಾಂತಿ-ಸುವ್ಯವಸ್ಥೆಗೆ ಜಿಲ್ಲಾಡಳಿತ ಕಟ್ಟೆಚ್ಚರ
    8 hours ago
    ಅರ್ಜಿ ಅಹ್ವಾನ
    ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    20 hours ago
    ಯಂಗ್ ಇಂಡಿಯಾ ಸ್ಪೋಟ್ರ್ಸ್ ಫೆಲೋಷಿಪ್‍ಗೆ ಅರ್ಜಿ ಆಹ್ವಾನ
    20 hours ago
    jobs in chitradurga news
    ಇಸ್ರೋದಲ್ಲಿ ಉದ್ಯೋಗಾವಕಾಶ | ಮಾಜಿ ಸೈನಿಕರಿಂದ ಅರ್ಜಿ ಅಹ್ವಾನ 
    20 hours ago
    Bhadra water flow
    ಭದ್ರಾ ನೀರು ಇನ್ನೆಷ್ಟು ದಿನ ಹರಿಯುತ್ತೆ ? | ಕೆರೆಗಳಿಗೆ ತುಂಬುತ್ತಾ ? | ಮುಖ್ಯ ಇಂಜಿನಿಯರ್‌ ರವಿಶಂಕರ್‌ ಉತ್ತರ ಏನು ?
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    4 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    7 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    6 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 week ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 10 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    21 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 09 | ಕೈಗೆತ್ತಿಕೊಂಡ ಕೆಲಸಗಳು ಯಶಸ್ವಿ, ಆರ್ಥಿಕ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 08 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ಹಠಾತ್ ಆರ್ಥಿಕ ಲಾಭ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…
    14 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    5 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    5 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    4 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Body inflammation
    ದೇಹದ ಉರಿಯೂತವನ್ನು ನಿವಾರಿಸಿಕೊಳ್ಳಲು ನಿಮ್ಮ ಆಹಾರದಲ್ಲಿ ಈ ಸೂಪರ್‌ಫುಡ್‌ಗಳನ್ನು ಸೇರಿಸಿಕೊಳ್ಳಿ
    20 hours ago
    Taking deep breaths
    ಆಳವಾದ ಉಸಿರನ್ನು ತೆಗೆದುಕೊಳ್ಳುವುದರಿಂದ ದೇಹಕ್ಕೆ ಈ ಪ್ರಯೋಜನಗಳು ದೊರೆಯುತ್ತದೆಯಂತೆ
    21 hours ago
    eyebrows
    ತೆಳ್ಳಗಿನ ಹುಬ್ಬುಗಳನ್ನು ದಪ್ಪವಾಗಿಸಲು ಮನೆಯಲ್ಲಿಯೇ ಈ ಜೆಲ್ ತಯಾರಿಸಿ ಬಳಸಿ
    2 days ago
    Neck crease
    ಕುತ್ತಿಗೆ ಮೇಲಿನ ನೆರಿಗೆಗಳನ್ನು ನಿವಾರಿಸಲು ಈ ವ್ಯಾಯಾಮಗಳನ್ನು ಪ್ರತಿದಿನ ಅಭ್ಯಾಸ ಮಾಡಿ 
    2 days ago
    H1N1
    ಹಂದಿ ಜ್ವರ (ಪ್ಲೂ)ಬಂದರೆ ಏನು ತಿನ್ನಬೇಕು? ತಿಳಿಯಿರಿ
    3 days ago
Reading: ಗಣಿತ ಗಣಕ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲೆ ನಂಬರ್ ಒನ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಗಣಿತ ಗಣಕ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲೆ ನಂಬರ್ ಒನ್

News Desk Chitradurga News
Last updated: 13 January 2026 19:41
News Desk Chitradurga News
8 months ago
Share
ಗಣಿತ ಗಣಕ
ಗಣಿತ ಗಣಕ
SHARE

CHITRADURGA NEWS | 13 JANUARY 2026

ಚಿತ್ರದುರ್ಗ: ಮಕ್ಕಳಲ್ಲಿ ಗಣಿತ ಕಲಿಕೆಗೆ ಉತ್ತೇಜನ ನೀಡುವ ಮತ್ತು ಅವರಲ್ಲಿನ ಆಸಕ್ತಿ ಹೆಚ್ಚಿಸುವ ಉದ್ದೇಶದಿಂದ ರೂಪಿಸಿರುವ “ಗಣಿತ ಗಣಕ” ವಿಶೇಷ ಕಾರ್ಯಕ್ರಮ ಅನುಷ್ಠಾನದಲ್ಲಿ ಪ್ರಸಕ್ತ ವರ್ಷ ಚಿತ್ರದುರ್ಗ ಜಿಲ್ಲೆಯು ರಾಜ್ಯದಲ್ಲಿಯೇ ಅತ್ಯುತ್ತಮ ಸಾಧನೆ ತೋರಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಅಧಿಕಾರಿಗಳ ವಿರುದ್ಧದ ಅನಾಮಿಕ ದೂರುಗಳ‌ ಪರಿಗಣನೆ ಬೇಡ | ADC ಕುಮಾರಸ್ವಾಮಿ

ಗಣಿತ ಗಣಕವು ಕರ್ನಾಟಕ ಸರ್ಕಾರದ ಪ್ರಮಾಣಾಧಾರಿತ (evidence-backed) ಪ್ರಮುಖ ಕಾರ್ಯಕ್ರಮವಾಗಿದ್ದು, 2024-25 ನೇ ಶೈಕ್ಷಣಿಕ ವರ್ಷದಿಂದ ಪ್ರಾಥಮಿಕ ಶಾಲಾ ಮಕ್ಕಳಲ್ಲಿ “ಮೂಲ ಸಂಖ್ಯಾಜ್ಞಾನವನ್ನು (Foundational Numeracy) ಬಲಪಡಿಸುವ ಉದ್ದೇಶದಿಂದ ಜಾರಿಗೊಂಡಿದೆ. ಇದು ಒಂದು ವಿಶಿಷ್ಟ ದೂರವಾಣಿ ಆಧಾರಿತ ಟ್ಯೂಟರಿಂಗ್ ಕಾರ್ಯಕ್ರಮವಾಗಿದ್ದು, ಸರ್ಕಾರಿ ಶಾಲಾ ಶಿಕ್ಷಕರು 3, 4 ಮತ್ತು 5 ನೇ ತರಗತಿ ವಿದ್ಯಾರ್ಥಿಗಳಿಗೆ ವಾರಕ್ಕೆ ಒಮ್ಮೆ ಒನ್-ಟು-ಒನ್ ಫೋನ್ ಆಧಾರಿತ ಟ್ಯೂಟರಿಂಗ್ ಕರೆಗಳನ್ನು ನಡೆಸುತ್ತಾರೆ, ಈ ಕರೆಗಳು ಪೋಷಕರ ಅಥವಾ ಪಾಲಕರ ಸಮ್ಮುಖದಲ್ಲೇ ನಡೆಯುವುದರಿಂದ, ಪೋಷಕರ ಸಕ್ರಿಯ ಭಾಗವಹಿಸುವಿಕೆ ಈ ಕಾರ್ಯಕ್ರಮದ ಪ್ರಮುಖ ವೈಶಿಷ್ಟ್ಯವಾಗಿದೆ.

ಈ ವರ್ಷ ಚಿತ್ರದುರ್ಗ ಜಿಲ್ಲೆಯು ಗಣಿತ ಗಣಕ ಕಾರ್ಯಕ್ರಮ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಅತ್ಯುತ್ತಮ ಸಾಧನೆ ತೋರಿದ ಜಿಲ್ಲೆಯಾಗಿದೆ. ನವೆಂಬರ್ ಮೊದಲೇ ವಾರದಲ್ಲೇ ಜಿಲ್ಲೆಯ ಶಿಕ್ಷಕರಿಗೆ ತರಬೇತಿ ನೀಡಲಾಗಿದ್ದು, ಇತರ ಅನೇಕ ಜಿಲ್ಲೆಗಳಿಗಿಂತ ಮುಂಚಿತವಾಗಿ ಸಂಪೂರ್ಣ ಉತ್ಸಾಹದೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. 

ಚಿತ್ರದುರ್ಗ ಜಿಲ್ಲೆಯ 151 ಕ್ಲಸ್ಟರ್‍ಗಳ ವ್ಯಾಪ್ತಿಯ 1,586 ಶಾಲೆಗಳ 2,400 ಕ್ಕೂ ಹೆಚ್ಚು ಶಿಕ್ಷಕರು ಕಾರ್ಯಕ್ರಮದ ಮೊದಲ ಸೈಕಲ್‍ನಲ್ಲಿ ಸಕ್ರಿಯವಾಗಿ ಭಾಗವಹಿಸಿ ಪೂರ್ಣಗೊಳಿಸಿದ್ದಾರೆ. ಸುಮಾರು 9,000 ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಲಾಭ ಪಡೆದಿದ್ದಾರೆ, ಪ್ರತಿ ವಿದ್ಯಾರ್ಥಿಗೂ ಆರು ವಾರಗಳ ಅವಧಿಯಲ್ಲಿ 04 ಸಂರಚಿತ ಟ್ಯೂಟರಿಂಗ್ ಕರೆಗಳನ್ನು (ಪರಿಚಯ ಮತ್ತು ಮೌಲ್ಯಮಾಪನ ಕರೆಗಳ ಜೊತೆಗೆ) ಮಾಡಲಾಗಿದೆ. 

ಇದನ್ನೂ ಓದಿ: ಅಡಿಕೆ ಧಾರಣೆ | 13 ಜನವರಿ | ಭೀಮಸಮುದ್ರ ಸೇರಿ ರಾಜ್ಯದ ಅಡಿಕೆ ಮಾರ್ಕೇಟ್‌ ರೇಟ್‌

ಚಿತ್ರದುರ್ಗವು ರಾಜ್ಯದಲ್ಲಿಯೇ ಈ ಕಾರ್ಯಕ್ರಮದ ಎರಡನೇ ಸೈಕಲ್ ಅನ್ನು ಇದೇ ಶೈಕ್ಷಣಿಕ ಸಾಲಿನಲ್ಲಿ ಯಶಸ್ವಿಯಾಗಿ ಪ್ರಾರಂಭಿಸಿರುವ ಜಿಲ್ಲೆಯಾಗಿದೆ. ಅನುಷ್ಠಾನದ ಅವಧಿಯಲ್ಲಿ ಅನೇಕ ಪ್ರೇರಣಾದಾಯಕ ಘಟನೆಗಳು ಬೆಳಕಿಗೆ ಬಂದಿವೆ. 

ಚಳ್ಳಕೆರೆ ಬ್ಲಾಕ್‍ನ ಚಿಗಟನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಂಗನಾಥ್ ಎಚ್, ಸಂಪರ್ಕ ಸಾಧನಗಳಿಲ್ಲದ ವಿದ್ಯಾರ್ಥಿಯೊಬ್ಬರಿಗೆ ಮೊಬೈಲ್ ಫೋನ್ ವ್ಯವಸ್ಥೆ ಮಾಡಿಕೊಡುವ ಮೂಲಕ ಮಾನವೀಯತೆ ಮತ್ತು ಬದ್ಧತೆಯನ್ನು ಮೆರೆದಿದ್ದಾರೆ. 

ಇನ್ನೊಂದು ಪ್ರಕರಣ ನೋಡುವುದಾದರೆ, ತರಗತಿಯಲ್ಲಿ ಸಾಮಾನ್ಯವಾಗಿ ಮೌನವಾಗಿರುವ ವಿದ್ಯಾರ್ಥಿಯೊಬ್ಬ, ಫೋನ್ ಟ್ಯೂಟರಿಂಗ್ ಕರೆಗಳ ವೇಳೆ ಅತ್ಯಂತ ಆತ್ಮವಿಶ್ವಾಸದಿಂದ ಪ್ರತಿಕ್ರಿಯಿಸಿದನು ಎಂದು ಶಿಕ್ಷಕರು ಮಾಹಿತಿ ಹಂಚಿಕೊಂಡಿದ್ದಾರೆ. ಫೋನ್ ಮೂಲಕದ ಒನ್-ಟು-ಒನ್ ಟ್ಯೂಟರಿಂಗ್ ವಿದ್ಯಾರ್ಥಿಗಳಲ್ಲಿ ಕಲಿಕೆಯ ಆಸಕ್ತಿಯನ್ನು ಹೆಚ್ಚಿಸಿದೆ.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆ | ಜನವರಿ 13 | ಹತ್ತಿ ರೇಟ್ ಎಷ್ಟಿದೆ?

ಕೆಲವು ಶಾಲೆಗಳಲ್ಲಿ, ವಿದ್ಯಾರ್ಥಿಗಳು ಎರಡು ಅಂಕಿ ಗಣಿತ ಕ್ರಿಯೆಗಳಲ್ಲಿ ಪ್ರಾವೀಣ್ಯತೆ ತೋರಿದ ನಂತರ, ಕಾರ್ಯಕ್ರಮದಲ್ಲಿ ಕಡ್ಡಾಯವಿಲ್ಲದಿದ್ದರೂ, ಶಿಕ್ಷಕರು ಮೂರು ಅಂಕಿ ಗಣಿತ ಕ್ರಿಯೆಗಳನ್ನು ಬೋಧಿಸಲು ಮುಂದಾಗಿದ್ದಾರೆ. ಇದು ಮೂಲ ಕಲಿಕಾ ಫಲಿತಾಂಶಗಳನ್ನು ಸಾಧಿಸುವ ಜಿಲ್ಲೆಯ ಶಿಕ್ಷಕರ ಬಲವಾದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಪೋಷಕರ ಭಾಗವಹಿಸುವಿಕೆ ಮತ್ತು ಬೆಂಬಲದಲ್ಲಿಯೂ ಗಮನಾರ್ಹ ಏರಿಕೆ ಕಂಡುಬಂದಿದೆ. 

ವಿಶೇಷವಾಗಿ ತಾಯಂದಿರು ತಮ್ಮ ಮಕ್ಕಳೊಂದಿಗೆ ಟ್ಯೂಟರಿಂಗ್ ಕರೆಗಳ ಸಮಯದಲ್ಲಿ ಹಾಜರಿದ್ದು, ಮಕ್ಕಳ ಕಲಿಕೆಗೆ ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಕೆಲವು ಸಂದರ್ಭಗಳಲ್ಲಿ ಪೋಷಕರು ಸ್ವಯಂಪ್ರೇರಿತವಾಗಿ ಮೊಬೈಲ್ ಫೋನ್ ಗಳನ್ನು ಖರೀದಿಸಿ, ತಮ್ಮ ಮಕ್ಕಳು ಟ್ಯೂಟರಿಂಗ್ ಕರೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಹಕರಿಸುತ್ತಿದ್ದಾರೆ.

ಒಟ್ಟಾರೆ, ಶಾಲಾ ಸಮಯದ ಹೊರಗೂ ಮಕ್ಕಳ ಕಲಿಕೆಗೆ ಹೆಚ್ಚುವರಿ ಪ್ರಯತ್ನಗಳನ್ನು ಮಾಡುತ್ತಿರುವ ಶಿಕ್ಷಕರಿಗೆ ಪೋಷಕರು ತೀವ್ರ ಸಂತೃಪ್ತಿ ಮತ್ತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಿಕ್ಷಕರು ವರದಿ ಮಾಡಿದ ಬೇಸ್‍ಲೈನ್ ಮತ್ತು ಎಂಡ್‍ಲೈನ್ ಡೇಟಾ ವಿಶ್ಲೇಷಣೆಯಿಂದ ಸ್ಪಷ್ಟವಾದ ಕಲಿಕಾ ಪ್ರಗತಿ ಕಂಡುಬಂದಿದೆ. 

ಇದನ್ನೂ ಓದಿ: ಸ್ನಾತಕ, ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಎರಡು ಅಂಕಿ ಭಾಗಾಕಾರ ಸಮಸ್ಯೆಗಳನ್ನು ಪರಿಹರಿಸಬಲ್ಲ ವಿದ್ಯಾರ್ಥಿಗಳ ಪ್ರಮಾಣ ಶೇ.2 ರಿಂದ ಶೇ.22 ಕ್ಕೆ ಏರಿಕೆಯಾಗಿದೆ. ಸರಾಸರಿಯಾಗಿ, ವಿದ್ಯಾರ್ಥಿಗಳು ಆರು ವಾರಗಳ ಟ್ಯೂಟರಿಂಗ್ ಸೈಕಲ್‍ನಲ್ಲಿ 2.3 ಹೊಸ ಗಣಿತ ಕ್ರಿಯೆಗಳನ್ನು ಕಲಿತಿದ್ದಾರೆ.

ಚಿತ್ರದುರ್ಗ ಜಿಲ್ಲೆ ರಾಜ್ಯದಲ್ಲೇ ವಿಶಿಷ್ಟವಾಗಿ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯವನ್ನು (CTE) ಕಾರ್ಯಕ್ರಮದ ಅನುಷ್ಠಾನಕ್ಕೆ ಒಳಪಡಿಸಿದೆ. 86 ಬಿ.ಇಡಿ. ವಿದ್ಯಾರ್ಥಿಗಳು ದೊಡ್ಡ ಶಾಲೆಗಳ ಶಿಕ್ಷಕರಿಗೆ ಬೆಂಬಲ ನೀಡಿ, 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಟ್ಯೂಟರಿಂಗ್ ನೀಡಿದ್ದು, ಅವರಲ್ಲಿ ಸುಮಾರು ಶೇ.45 ವಿದ್ಯಾರ್ಥಿಗಳು ಭಾಗಾಕಾರ ಮಟ್ಟವನ್ನು ತಲುಪಿದ್ದಾರೆ. 

ಜಿಲ್ಲೆಯ ಶಿಕ್ಷಕರು ರಾಜ್ಯದಲ್ಲಿಯೇ ಮುಂಚೂಣಿಯಲ್ಲಿದ್ದು, ಈಗಾಗಲೇ ಎರಡನೇ ಸೈಕಲ್‍ನ ಟ್ಯೂಟರಿಂಗ್ ಅನ್ನು ಪ್ರಾರಂಭಿಸಿರುತ್ತಾರೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಬಿ.ಇಡಿ ವಿದ್ಯಾರ್ಥಿಗಳು ಇನ್ನೂ 300 ವಿದ್ಯಾರ್ಥಿಗಳಿಗೆ ಬೆಂಬಲ ನೀಡಲಿದ್ದಾರೆ.

ಇದನ್ನೂ ಓದಿ: ಕೆ.ಎಸ್.ಸೌಮ್ಯಗೆ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ PHD 

ಗಣಿತ ಗಣಕ ಕಾರ್ಯಕ್ರಮದ ಮೂಲಕ ಮೂಲ ಕಲಿಕಾ ಫಲಿತಾಂಶಗಳನ್ನು ಬಲಪಡಿಸುವಲ್ಲಿ ಚಿತ್ರದುರ್ಗದ ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳು ತೋರಿರುವ ಸಮೂಹ ಶ್ರಮ ಮತ್ತು ಬದ್ಧತೆಗೆ ಜಿಲ್ಲೆಯ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDr. AkashMathematical Calculatorಗಣಿತ ಗಣಕಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಾ. ಆಕಾಶ್
Share This Article
Facebook Email Print
Previous Article ಜಾಗತಿಕ ಲಿಂಗಾಯತ ಮಹಾಸಭಾದ 2026ರ ಕ್ಯಾಲೆಂಡರ್ ಬಿಡುಗಡೆ ಜಾಗತಿಕ ಲಿಂಗಾಯತ ಮಹಾಸಭಾದ 2026ರ ಕ್ಯಾಲೆಂಡರ್ ಬಿಡುಗಡೆ
Next Article Sri Siddarameshwara ಜಲಸಂರಕ್ಷಕ | ಜಲಋಷಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರರು | ಲೇಖನ
1 Comment
  • Nagaveni says:
    14 January 2026 at 14:30

    Good

    Reply

Leave a Reply Cancel reply

Your email address will not be published. Required fields are marked *

ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಿದ್ಧತಾ ಸಭೆ
ಗೌರಿ-ಗಣೇಶ ಹಬ್ಬ | ಶಾಂತಿ-ಸುವ್ಯವಸ್ಥೆಗೆ ಜಿಲ್ಲಾಡಳಿತ ಕಟ್ಟೆಚ್ಚರ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…
ಮಾರುಕಟ್ಟೆ ಧಾರಣೆ
ಅರ್ಜಿ ಅಹ್ವಾನ
ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಯಂಗ್ ಇಂಡಿಯಾ ಸ್ಪೋಟ್ರ್ಸ್ ಫೆಲೋಷಿಪ್‍ಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up