ಮುಖ್ಯ ಸುದ್ದಿ
ಚಿತ್ರದುರ್ಗ ಜಿಲ್ಲಾ ನೂತನ ನ್ಯಾಯಾಧೀಶರಾಗಿ ಕೆ.ಬಿ.ಗೀತಾ ಜವಾಬ್ದಾರಿ ಸ್ವೀಕಾರ
ಚಿತ್ರದುರ್ಗ ನ್ಯೂಸ್.ಕಾಂ: ಚಿತ್ರದುರ್ಗ ಪ್ರಧಾನಜಿ ಲ್ಲಾ ಮತ್ತು ಸತ್ರ ನೂತನ ನ್ಯಾಯಾಧೀಶರಾಗಿ ಕೆ.ಬಿ.ಗೀತಾ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ತುಮಕೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿದ್ದ ಕೆ.ಬಿ.ಗೀತಾ ಡಿಸೆಂಬರ್ 1 ರಂದು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ನ್ಯಾಯಧೀಶರಾಗಿ ಜವಾವ್ದಾರಿ ವಹಿಸಿಕೊಂಡಿದ್ದಾರೆ.
ಇದನ್ನೂ ಓದಿ: ಬ್ಯಾಟರಿ ಗ್ಯಾಂಗ್ ಎಡೆಮುರಿ ಕಟ್ಟಿದ ಖಾಕಿ: ಸುಳಿವು ನೀಡಿದ ಸಿ.ಸಿ ಕ್ಯಾಮರಾ
ಚಿತ್ರದುರ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿದ್ದ ಬಿ.ಎಸ್.ರೇಖಾ ಅವರನ್ನು ಯಾದಗಿರಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿತ್ತು. ಈ ಸ್ಥಾನಕ್ಕೆ ಕೆ.ಬಿ.ಗೀತಾ ಅವರನ್ನು ನಿಯೋಜಿಸಲಾಗಿದೆ.
ಪ್ರಭಾರ ಅಧಿಕಾರ ವಹಿಸಿಕೊಂಡ ನಂತರ ಡಿಸೆಂಬರ್ 2 ರಂದು ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನ್ಯಾಯಾಧೀಶರಾದ ಕೆ.ಬಿ.ಗೀತಾ ಅವರು, ಡಿ.9 ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ ಕುರಿತು ಮಾಹಿತಿ ನೀಡಿದರು. ಇದೇ ವೇಳೆ ಜಿಲ್ಲಾ ನ್ಯಾಯಾಧೀಶರಾಗಿ ನಿನ್ನೆಯಷ್ಟೇ ಪ್ರಭಾರ ವಹಿಸಿಕೊಂಡಿರುವುದಾಗಿ ತಿಳಿಸಿದರು.