CHITRADURGA NEWS | 30 NOVEMBER 2025
ಚಿತ್ರದುರ್ಗ: ಕರ್ನಾಟಕ ರಾಜ್ಯ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾಧ್ಯಕ್ಷರಾಗಿ ಶ್ರೀ ಬೃಹನ್ಮಠ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಎಂ.ಜಿ.ರಾಜೇಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಅಧ್ಯಕ್ಷ ಡಾ.ಎನ್.ಹರೀಶ್ ತಿಳಿಸಿದ್ದಾರೆ.
ನಗರದ ಬಾಲಕರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ರಾಜ್ಯ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಸಿ, ಜಿಲ್ಲೆಯ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರು ಜಿಲ್ಲಾ ಸಂಘದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಇದನ್ನೂ ಓದಿ: ಕಾಂಗ್ರೆಸ್ಸಿಗೆ ವಯಸ್ಸಾಗಿದೆ, ಚಿಕಿತ್ಸೆ ಕೊಟ್ಟರೂ ಉಳಿಯದು | ಛಲವಾದಿ ನಾರಾಯಣಸ್ವಾಮಿ
ರಾಜ್ಯ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘದ ಗೌರವಾಧ್ಯಕ್ಷರಾಗಿ ಜಿ.ಎಸ್. ತಿಪ್ಪೇಸ್ವಾಮಿ, ಕಾರ್ಯಧ್ಯಕ್ಷರಾಗಿ ಬಿ.ಆರ್.ತಿಪ್ಪಸ್ವಾಮಿ, ಪ್ರಧಾನ ಕಾರ್ಯದರ್ಶಿಯಾಗಿ ಡಾ.ತಿಮ್ಮಣ್ಣ, ಕಾರ್ಯದರ್ಶಿಯಾಗಿ ಜಗದೀಶ್, ಸಂಘಟನಾ ಕಾರ್ಯದರ್ಶಿಯಾಗಿ ಯೋಗೀಶ್ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಪದಾಧಿಕಾರಿಗಳು ಹಾಗೂ ಜಿಲ್ಲೆಯ ನೌಕರರು ಭಾಗವಹಿಸಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
