Connect with us

    ಬಜೆಟ್‌ನಲ್ಲಿ ಚಿತ್ರದುರ್ಗಕ್ಕೆ ದಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

    ಮುಖ್ಯ ಸುದ್ದಿ

    ಬಜೆಟ್‌ನಲ್ಲಿ ಚಿತ್ರದುರ್ಗಕ್ಕೆ ದಕ್ಕಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 07 MARCH 2025

    ಚಿತ್ರದುರ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‍ನಲ್ಲಿ ಚಿತ್ರದುರ್ಗ ಜಿಲ್ಲೆಗೆ ಸಿಕ್ಕಿರುವ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

    ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಪ್ರತಿ ಕ್ವಿಂಟಾಲ್ಗೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿ ಪ್ರೋತ್ಸಾಹಧನ 450 ರೂ.ಗಳಂತೆ ಒಟ್ಟು 138 ಕೋಟಿ ರೂ. ನೀಡಲು ತೀರ್ಮಾನಿಸಲಾಗಿದೆ. ಇದರಿಂದ, ತೊಗರಿ ಬೆಳೆಯುವ ಪ್ರಮುಖ ಜಿಲ್ಲೆಗಳಾದ ಕಲಬುರಗಿ, ಬೀದರ್, ಯಾದಗಿರಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಕೋಲಾರ, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಭಾಗದ ರೈತರಿಗೆ ಅನುಕೂಲವಾಗಲಿದೆ.

    Also Read: ಬಜೆಟ್‍ನಲ್ಲಿ ರೈತರಿಗೆ ಬಂಪರ್ | ಜಾನುವಾರು ಮೃತಪಟ್ಟರೆ 15 ಸಾವಿರ ಪರಿಹಾರ

    ಭದ್ರಾ ಮೇಲ್ದಂಡೆ ಯೋಜನೆಗೆ 2023-24ರ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ಘೋಷಿಸಿದ 5,300 ಕೋಟಿ ರೂ. ಅನುದಾನ ಇನ್ನೂ ಬಿಡುಗಡೆಯಾಗಿರುವುದಿಲ್ಲ. ಆದರೂ, ರಾಜ್ಯ ಸರ್ಕಾರವು ಅಗತ್ಯ ಅನುದಾನವನ್ನು ಒದಗಿಸಿ ಈ ಯೋಜನೆಯನ್ನು ಪೂರ್ಣಗೊಳಿಸಲು ಕ್ರಮವಹಿಸುತ್ತಿದೆ. ತರೀಕೆರೆ ಏತ ನೀರಾವರಿ ಯೋಜನೆಯಡಿ 79 ಕೆರೆಗಳನ್ನು ತುಂಬಿಸುವ ಮೂಲಕ 49,790 ಎಕರೆ ಸೂಕ್ಷ್ಮ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿದೆ.

    ಪ್ರಸಕ್ತ ಸಾಲಿನಲ್ಲಿ 2,611 ಕೋಟಿ ರೂ. ಅಂದಾಜು ಮೊತ್ತದ ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಮೂಲಕ ಹೊಸದುರ್ಗ, ಹೊಳಲ್ಕೆರೆ, ಜಗಳೂರು, ಮೊಳಕಾಲ್ಮೂರು, ಚಳ್ಳಕೆರೆ ಮತ್ತು ಪಾವಗಡ ತಾಲ್ಲೂಕುಗಳಲ್ಲಿನ 30 ಕೆರೆಗಳನ್ನು ತುಂಬಿಸಿ ಒಂದು ಲಕ್ಷದ ಎಪ್ಪತ್ತೇಳು ಸಾವಿರ ಎಕರೆ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸಾಮರ್ಥ್ಯವನ್ನು ಕಲ್ಪಿಸಲಾಗುವುದು.

    ಗರ್ಭಿಣಿಯರಲ್ಲಿ ರಕ್ತಹೀನತೆ ತಡೆಗಟ್ಟಲು ಹಿಂದುಳಿದ ಜಿಲ್ಲೆಗಳಲ್ಲಿ ಪೌಷ್ಟಿಕಾಂಶ ಕಿಟ್ಗಳು, ಪ್ರೋತ್ಸಾಹ ಧನ ಹಾಗೂ ತಾಯಂದಿರಿಗೆ ವಾತ್ಸಲ್ಯ ಕಿಟ್ ಗಳನ್ನು ವಿತರಣೆ ಮಾಡಲಾಗುವುದು. ಹುದ್ದೆಗಳನ್ನು ಪುನರ್ ಹಂಚಿಕೆ ಮಾಡುವ ಮೂಲಕ ಪ್ರತಿ ತಾಲ್ಲೂಕು ಆಸ್ಪತ್ರೆಯಲ್ಲಿ MCH ತಜ್ಞರನ್ನು ನಿಯೋಜಿಸಲಾಗುವುದು.

    Also Read: ಚಿತ್ರದುರ್ಗ ಶಾಖಾ ಕಾಲುವೆ ಕಾಮಗಾರಿ ಈ ವರ್ಷ ಪೂರ್ಣ | ಸಿಎಂ ಸಿದ್ದರಾಮಯ್ಯ

    ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ 200 ಹಾಸಿಗೆ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು.

    ಸುಧಾರಿತ ಆರೋಗ್ಯ ಸೇವೆಯನ್ನು ಒದಗಿಸಲು ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್ ಹಾಗೂ ಚಿತ್ರದುರ್ಗದಲ್ಲಿ ಸುಸಜ್ಜಿತ ಟ್ರಾಮಾ ಕೇರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

    ಕೋಲಾರ, ರಾಮನಗರ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹೊಸ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ ಒಂಭತ್ತುಕೋಟಿ ರೂ. ಒದಗಿಸಿದೆ.

    ರಾಜ್ಯದಲ್ಲಿ ಪ್ರಗತಿಯಲ್ಲಿರುವ 42 ಸ್ವಯಂಚಾಲಿತ ಪರೀಕ್ಷಾ ಪಥಗಳ ನಿರ್ಮಾಣವನ್ನು ಸದರಿ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. 2025-26ನೇ ಸಾಲಿನಲ್ಲಿ ಹೊನ್ನಾವರ, ಚಾಮರಾಜನಗರ ಮತ್ತು ಚಿತ್ರದುರ್ಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಸ್ವಯಂಚಾಲಿತ ಪರೀಕ್ಷಾ ಪಥಗಳನ್ನು ನಿರ್ಮಿಸಲು ಕ್ರಮವಹಿಸಲಾಗುವುದು. ಈ ಉದ್ದೇಶಕ್ಕಾಗಿ 12 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.

    Also Read: ಕೃಷಿ ಹೊಂಡಕ್ಕೆ ಬಿದ್ದು ಡಾ.ಜಯರಾಂ ಸಾವು

    ರಾಜ್ಯದಲ್ಲಿ ವಾಹನ ಸಂಚಾರವನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚಿ ನಿಯಂತ್ರಿಸಲು ದಾವಣಗೆರೆ, ಧಾರವಾಡ, ಕಲಬುರಗಿ, ಬೆಳಗಾವಿ, ಚಿತ್ರದುರ್ಗ, ಹಾವೇರಿ, ಹೊಸಪೇಟೆ, ಬಳ್ಳಾರಿ, ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಗಳ ಒಟ್ಟು 60 ಸ್ಥಳಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ AI ಆಧಾರಿತ ವಿದ್ಯುನ್ಮಾನ ಕ್ಯಾಮರಾಗಳನ್ನು ಅಳವಡಿಸಲಾಗುವುದು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top